ಹೊಳೆನರಸೀಪುರದ ಗಣಪತಿ ಪೆಂಡಾಲಿನಲ್ಲಿ ಜನಸ್ಪಂದನ ಸಭೆ

| Published : Jul 17 2025, 12:31 AM IST

ಸಾರಾಂಶ

ಹೊಳೆನರಸೀಪುರ ಪಟ್ಟಣದ ಗಣೇಶ ಪೆಂಡಾಲಿನಲ್ಲಿ ಆಗಸ್ಟ್ ೨ರ ಶನಿವಾರ ಆಯೋಜನೆ ಮಾಡುವ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದ್ದು, ಬೆಳಗ್ಗೆ ೧೦ ಗಂಟೆಯಿಂದ ಸಂಜೆ ತನಕ ಅರ್ಜಿ ಸ್ವೀಕರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಪ್ರಯೋಜನವನ್ನು ತಪ್ಪದೇ ಪಡೆದು ಕೊಳ್ಳಬೇಕೆಂದು ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಜಿ. ಮುನಿರಾಜು ಸಲಹೆ ನೀಡಿದರು.

ಕನ್ನಡಪ್ರಭ ವಾರ್ತೆ ಹೊಳೆನರಸೀಪುರ ಪಟ್ಟಣದ ಗಣೇಶ ಪೆಂಡಾಲಿನಲ್ಲಿ ಆಗಸ್ಟ್ ೨ರ ಶನಿವಾರ ಆಯೋಜನೆ ಮಾಡುವ ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದ್ದು, ಬೆಳಗ್ಗೆ ೧೦ ಗಂಟೆಯಿಂದ ಸಂಜೆ ತನಕ ಅರ್ಜಿ ಸ್ವೀಕರಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಇದರ ಪ್ರಯೋಜನವನ್ನು ತಪ್ಪದೇ ಪಡೆದು ಕೊಳ್ಳಬೇಕೆಂದು ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ಜಿ. ಮುನಿರಾಜು ಸಲಹೆ ನೀಡಿದರು.ಪಟ್ಟಣದ ತಾಲೂಕು ಕಚೇರಿಯಲ್ಲಿ ತಾಲೂಕು ಮಟ್ಟದ ಜನಸ್ಪಂದನಾ ಕಾರ್ಯಕ್ರಮ ಸಿದ್ಧತೆಯ ಸಲುವಾಗಿ ಆಯೋಜಿಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕರ್ನಾಟಕ ಸರ್ಕಾರದ ಅಧೀನದಲ್ಲಿ ಇರುವ ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಸಮಸ್ಯೆಗಳು ಇದ್ದಲ್ಲಿ ಅವುಗಳನ್ನು ಪರಿಹರಿಸಿಕೊಳ್ಳಲು ಒಂದೇ ಸೂರಿನಡಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಲಾಗುತ್ತಿದೆ. ತಾಲೂಕಿನ ಎಲ್ಲಾ ಸರ್ಕಾರಿ ಕಚೇರಿಗಳ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ನಿಮ್ಮ ಅರ್ಜಿಗಳನ್ನು ಸ್ವೀಕರಿಸಿ, ಸರ್ಕಾರದ ಮಾರ್ಗಸೂಚಿ ಅನುಸಾರ ವಿಲೆ ಮಾಡುವ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎಂದರು.ವಿದ್ಯುತ್ ಇಲಾಖೆಯ ಎಂಜಿನಿಯರ್‌ ಅವರನ್ನು ಉದ್ದೇಶಿಸಿ ವಿದ್ಯುತ್‌ ಸಮಸ್ಯೆ ಉಂಟಾಗದಂತೆ ನಿಗಾವಹಿಸಿ ಎಂದು ಸಲಹೆ ನೀಡಿದರು. ಪುರಸಭೆ ಅಧಿಕಾರಿ ರಮೇಶ್ ಅವರಿಗೆ ಸ್ವಚ್ಛತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡುವಂತೆ ತಿಳಿಸಿದರು. ಅಧಿಕಾರಿಗಳಿಗೆ ಅಗತ್ಯ ಸಲಹೆ ನೀಡಿ, ಯಾವುದೇ ರೀತಿಯ ಅನರ್ಥಗಳಿಗೆ ಅವಕಾಶ ಕಲ್ಪಿಸಿ, ತೊಂದರೆಗೆ ಸಿಲುಕಬೇಡಿ ಎಂದು ಎಚ್ಚರಿಸಿದರು.ಉಪ ತಹಸೀಲ್ದಾರ್‌ ರೂಪೇಶ್, ಉಪ ನೋಂದಣಾಧಿಕಾರಿ ರಾಕೇಶ್, ಪ್ರಾಂಶುಪಾಲ ದೇವರಾಜ್, ಟಿಎಒ ರಾಜೇಶ್, ಕೃಷಿ ಇಲಾಖೆ ಅಧಿಕಾರಿ ಸವಿತಾ, ಅಹಾರ ಶಿರಸ್ತೇದಾರ್‌ ವಾಸು, ಕಂದಾಯ ಇಲಾಖೆಯ ಪ್ರಸಾದ್, ರೋಷನ್, ಇತರೆ ಇಲಾಖೆಗಳ ಅಧಿಕಾರಿಗಳು ಇದ್ದರು.