ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ ಸಾರ್ವಜನಿಕರು ಜಿಲ್ಲಾಡಳಿತದ ಮುಂದೆ ತಮ್ಮ ಸಮಸ್ಯೆ, ಆವಾಲುಗಳನ್ನು ನೇರವಾಗಿ ಹೇಳಿಕೊಳ್ಳಲು ಮಂತ್ರಿ, ಶಾಸಕರ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮೂರು ತಿಂಗಳಿಗೊಮ್ಮೆ ತಾಲೂಕು ಕೇಂದ್ರದಲ್ಲಿ ನಡೆಸಲಾಗುತ್ತದೆ. ಸರ್ಕಾರ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಇದರಿಂದ ಜನರು ಮಧ್ಯವರ್ತಿಗಳ, ಪುಡಾರಿಗಳ ಅವಶ್ಯಕತೆ ಇಲ್ಲದೆ ನೇರವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಬೇಲೂರು

ಜನಸ್ಪಂದನದಂತಹ ಕಾರ್ಯಕ್ರಮಗಳನ್ನು ಕಾಟಾಚಾರವಾಗಿ ನಡೆಸದೆ ಸಾರ್ವಜನಿಕರಿಂದ ಸ್ವೀಕರಿಸುವಂತಹ ಅಹವಾಲು ಅರ್ಜಿಗಳಲ್ಲಿ ಶೇ. 70 ಭಾಗ ಪೂರ್ಣಗೊಳಿಸಲು ಜಿಲ್ಲಾ ಹಾಗೂ ತಾಲೂಕು ಆಡಳಿತ ಮುಂದಾಗಬೇಕು ಎಂದು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಬೈರೇಗೌಡ ಸೂಚಿಸಿದರು.ಪಟ್ಟಣದ ತಾಲೂಕು ಕಚೇರಿಯ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ ಸಾರ್ವಜನಿಕರು ಜಿಲ್ಲಾಡಳಿತದ ಮುಂದೆ ತಮ್ಮ ಸಮಸ್ಯೆ, ಆವಾಲುಗಳನ್ನು ನೇರವಾಗಿ ಹೇಳಿಕೊಳ್ಳಲು ಮಂತ್ರಿ, ಶಾಸಕರ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡಿದ್ದು ಮೂರು ತಿಂಗಳಿಗೊಮ್ಮೆ ತಾಲೂಕು ಕೇಂದ್ರದಲ್ಲಿ ನಡೆಸಲಾಗುತ್ತದೆ. ಸರ್ಕಾರ ಜನರ ಮನೆ ಬಾಗಿಲಿಗೆ ಹೋಗಿ ಸಮಸ್ಯೆ ಅರ್ಥಮಾಡಿಕೊಳ್ಳುವ ಪ್ರಯತ್ನ ಮಾಡುತ್ತಿದೆ. ಇದರಿಂದ ಜನರು ಮಧ್ಯವರ್ತಿಗಳ, ಪುಡಾರಿಗಳ ಅವಶ್ಯಕತೆ ಇಲ್ಲದೆ ನೇರವಾಗಿ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಬಹುದು ಎಂದು ಹೇಳಿದರು. ಈಗಾಗಲೇ ಜಿಲ್ಲಾ ಕೇಂದ್ರ ಹಾಸನದಲ್ಲಿ ಚನ್ನರಾಯಪಟ್ಟಣ ಹಾಗೂ ಸಕಲೇಶಪುರದಲ್ಲಿ ಜನಸ್ಪಂದನ ಕಾರ್ಯಕ್ರಮ ನಡೆಸಿದ್ದು ಒಟ್ಟು 2,893 ಅರ್ಜಿಗಳು ಬಂದಿದ್ದು ಅದರಲ್ಲಿ, 2837 ವಿಲೇವಾರಿ ಆಗಿದೆ ಮನೆ ಕಟ್ಟಿಕೊಂಡವರು ಸೂಕ್ತ ದಾಖಲಾತಿ ಹಕ್ಕುಪತ್ರ ಇಲ್ಲದೆ ಇರುವ 700ಕ್ಕೂ ಹೆಚ್ಚು ವಸತಿ ಪ್ರದೇಶ ಗುರ್ತಿಸಿದ್ದು 29,000 ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ ಮಾಡಲು ಪೂರ್ವ ತಯಾರಿ ನಡೆಸಲಾಗುತ್ತಿದೆ ಎಂದರು. ಜನರ ಎಲ್ಲಾ ಸಮಸ್ಯೆಗಳನ್ನೂ ಬಗೆಹರಿಸಲು ಆಗುವುದಿಲ್ಲ. ಆದರೆ ಯಾವುದನ್ನು ಬಗೆಹರಿಸಲು ಸಾಧ್ಯತೆ ಇದೆಯೋ ಅದನ್ನು ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ಜನರ ನೂರಾರು ಸಮಸ್ಯೆಗಳು ಇರುತ್ತವೆ. ಅದರಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಸರಿ ಮಾಡುವ ಕೆಲಸ ಆಗಬೇಕು. ಎಲ್ಲಾ ಕಡತಗಳನ್ನು ಪರಿಹಾರ ಮಾಡಲಿಕ್ಕೆ ಆಗುವುದಿಲ್ಲ, ಕಾನೂನು ಚೌಕಟ್ಟಿನೊಳಗೆ ನ್ಯಾಯಯುತವಾಗಿ ಇರುವಂತಹ ಸಮಸ್ಯೆಗಳನ್ನು ಬಗೆಹರಿಸಬಹುದು. ಅಕ್ಕಪಕ್ಕದ ಮನೆಯವರ ಜಗಳ ಜಮೀನು ವಿವಾದ ಇಂತಹ ಸಮಸ್ಯೆಗಳನ್ನು ದಯಮಾಡಿ ಇಲ್ಲಿ ತರಬೇಡಿ. ಅತಿ ಹೆಚ್ಚು ದುರಸ್ತಿ ಕಾರ್ಯ ಮತ್ತು ತಾತ್ಕಾಲಿಕ ಪೋಡಿ ಕಾರ್ಯವು ಹೆಚ್ಚಾಗಿ ಕಂಡುಬಂದಿದೆ. ಕಳೆದ ಐದು ವರ್ಷಗಳ ಹಿಂದೆ ಸುಮಾರು 300ರಷ್ಟು ಮಾತ್ರ ಅರ್ಜಿ ದುರಸ್ತಿ ಕಾರ್ಯಗಳು ನಡೆದಿದ್ದವು, ಆದರೆ ಇಂದು ಸುಮಾರು 20000 ಅರ್ಜಿ ದುರಸ್ತಿ ಕಾರ್ಯಗಳು ಈಗಾಗಲೇ ನಡೆದಿದೆ. ಇನ್ನೂ ಸುಮಾರು 25 ಸಾವಿರಕ್ಕೂ ಅಧಿಕ ದುರಸ್ತಿ ಕಾರ್ಯಗಳು ನಡೆಯಬೇಕಾಗಿದೆ ಎಂದು ಹೇಳಿದರು. ಇದೇ ವೇಳೆ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಎರಡೂ ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಹೇಳಿದರು.ಶಾಸಕ ಸುರೇಶ್‌ಗೆ ಇರುಸು- ಮುರುಸು

ಎಲ್‌ಪಿಜಿ ಗ್ಯಾಸ್‌ ಸಿಲಿಂಡ‌ರ್ ಕೊರತೆ ದಿನೇದಿನೇ ಹೆಚ್ಚುತ್ತಿರುವುದು ಆತಂಕಕಾರಿ ವಿಷಯವಾಗಿದೆ. ಸಣ್ಣ ವ್ಯಾಪಾರಿಗಳು, ಟೀ ಅಂಗಡಿಗಳು ಮತ್ತು ಆಟೋ ಚಾಲಕರು ಗ್ಯಾಸ್‌ ಕೊರತೆಯಿಂದ ಸಂಕಷ್ಟಕ್ಕೀಡಾಗಿದ್ದಾರೆ. ಲೀಗಲ್‌ ಸರಬರಾಜು ಇಲ್ಲದಿದ್ದರೂ ಬ್ಲಾಕ್ ಮಾರ್ಕೆಟ್‌ನಲ್ಲಿ ಹೆಚ್ಚಿನ ದರಕ್ಕೆ ಸಿಲಿಂಡ‌ರ್ ದೊರೆಯುತ್ತಿದೆ. ಕೇಂದ್ರ ಸರ್ಕಾರ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರದತ್ತ ಬೆರಳು ತೋರಿಸುತ್ತಿದ್ದರಿಂದ ಪಕ್ಕದಲ್ಲೇ ಕುಳಿತಿದ್ದ ಬೇಲೂರು ಶಾಸಕ ಹುಲ್ಲಳ್ಳಿ ಸುರೇಶ್‌ ಇರುಸುಮುರುಸು ಅನುಭವಿಸುವಂತಾಯಿತು. ಶಾಸಕ ಎಚ್ ಕೆ ಸುರೇಶ್ ಮಾತನಾಡಿ ಬೇಲೂರು ತಾಲೂಕು ಮಲೆನಾಡು ಅರೆಮಲೆನಾಡು ಬಯಲು ಸೀಮೆ ಪ್ರದೇಶಗಳನ್ನು ಹೊಂದಿದ್ದು ಸಮಸ್ಯೆಗಳು ಸಾವಿರಾರಿವೆ. ಎಲ್ಲಾ ಇಲಾಖೆಗಳಲ್ಲಿ ಕಂದಾಯ ಇಲಾಖೆ ತಾಯಿ ಸ್ಥಾನದಲ್ಲಿದೆ. ಇಲ್ಲಿಯ ಸಮಸ್ಯೆಗಳನ್ನು ಮಾನ್ಯ ಸಚಿವರು ಆದಷ್ಟು ಬಗೆಹರಿಸುವ ನಂಬಿಕೆ ನಮಗೆ ಇದೆ. ಈ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಕರೆ ತರುವುದಾಗಿ ಭರವಸೆ ನೀಡಿದ್ದೆ. ಅದರಂತೆ ತಮ್ಮ ಮಾತನ್ನು ಉಳಿಸಿಕೊಂಡಿದ್ದೇನೆ ಎಂದರು.ಈ ಸಂದರ್ಭದಲ್ಲಿ ಸಾವಿರಾರು ಜನರು ತಮ್ಮ ಸಮಸ್ಯೆಗಳ ಅರ್ಜಿಗಳನ್ನು ಸರದಿ ಸಾಲಿನಲ್ಲಿ ನಿಂತು ಸಚಿವರಿಗೆ ಸಲ್ಲಿಸಿದರು.ಸಂಸದ ಶ್ರೇಯಸ್ ಎಂ ಪಟೇಲ್ ಜಿಲ್ಲಾಧಿಕಾರಿ ಲತಾ ಕುಮಾರಿ, ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ, ಎಸಿ ಸೌರವ್ ಕುಮಾರ್‌, ಪುರಸಭೆ ಅಧ್ಯಕ್ಷ ಉಷಾ ಸತೀಶ್ ಪ್ರಾಧಿಕಾರ ಅಧ್ಯಕ್ಷ ತೌಫಿಕ್, ತಹಸೀಲ್ದಾರ್‌ ಶ್ರೀಧರ್ ಕಂಕನವಾಡಿ ಇತರರು ಇದ್ದರು.