ಸಾರಾಂಶ
ಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಸೋಮವಾರ ಅರಣ್ಯ ಇಲಾಖೆ ಏರ್ಪಡಿಸಿದ್ದ ಪರಿಸರ ದಸರಾ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರದ ಸಮತೋಲನ ಕಾಯ್ದುಕೊಳ್ಳದಿದ್ದರೆ ಪ್ರಕೃತಿ ವಿಕೋಪದಿಂದ ಸಂಭವಿಸುತ್ತಿರುವ ಘಟನೆಗಳು ಸಾಕ್ಷಿಯಾಗಿದೆ. ಉತ್ತಮ ಪರಿಸರವನ್ನು ರೂಪಿಸುವ ಹೊಣೆ ಸಾಮಾಜಿಕ ಜವಾಬ್ದಾರಿಯಾಗಿದೆ, ಮಕ್ಕಳಿಗೆ ಬಾಲ್ಯದಿಂದಲೇ ಪರಿಸರದ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು.
ಕನ್ನಡಪ್ರಭ ವಾರ್ತೆ ಅರಕಲಗೂಡು
ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರೂ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಶಾಸಕ ಎ. ಮಂಜು ತಿಳಿಸಿದರು.ಅರಕಲಗೂಡು ದಸರಾ ಉತ್ಸವದ ಪ್ರಯುಕ್ತ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿ ಸೋಮವಾರ ಅರಣ್ಯ ಇಲಾಖೆ ಏರ್ಪಡಿಸಿದ್ದ ಪರಿಸರ ದಸರಾ ಉದ್ಘಾಟಿಸಿ ಅವರು ಮಾತನಾಡಿದರು. ಪರಿಸರದ ಸಮತೋಲನ ಕಾಯ್ದುಕೊಳ್ಳದಿದ್ದರೆ ಪ್ರಕೃತಿ ವಿಕೋಪದಿಂದ ಸಂಭವಿಸುತ್ತಿರುವ ಘಟನೆಗಳು ಸಾಕ್ಷಿಯಾಗಿದೆ. ಉತ್ತಮ ಪರಿಸರವನ್ನು ರೂಪಿಸುವ ಹೊಣೆ ಸಾಮಾಜಿಕ ಜವಾಬ್ದಾರಿಯಾಗಿದೆ, ಮಕ್ಕಳಿಗೆ ಬಾಲ್ಯದಿಂದಲೇ ಪರಿಸರದ ಕುರಿತು ಅರಿವು ಮೂಡಿಸುವ ಕಾರ್ಯ ನಡೆಯಬೇಕಿದೆ ಎಂದರು.
ಸಕಲೇಶಪುರ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಂ. ಕೆ. ಮಧುಸೂದನ್ ಮಾತನಾಡಿದರು. ರಂಗಕರ್ಮಿ ದೇವಾನಂದ ವರಪ್ರಸಾದ್ ಮತ್ತು ತಂಡದವರಿಂದ ಪರಿಸರ ಗೀತೆಗಳ ಗಾಯನ ನಡೆಯಿತು. ಪಪಂ ಉಪಾಧ್ಯಕ್ಷ ಸುಬಾನ್ ಷರೀಫ್, ವಲಯ ಅರಣ್ಯಾಧಿಕಾರಿಗಳಾದ ಯಶ್ಮಮಾಚಮ್ಮ, ಶಿವಾನಂದ್, ತಾಪಂ ಮಾಜಿ ಅಧ್ಯಕ್ಷ ನರಸೇಗೌಡ, ದಸರಾ ಸಮಿತಿ ಕಾರ್ಯದರ್ಶಿ ರವಿಕುಮಾರ್ ಸದಸ್ಯರಾದ ಗೋಪಾಲ್, ಮಂಜು, ಶಿವು, ರೈತ ಸಂಘದ ಮುಖಂಡರಾದ ಭುವನೇಶ್, ದಿನೇಶ್, ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೆ ಮುನ್ನ ಪಟ್ಟಣದ ಗ್ರಾಮದೇವತೆ ದೊಡ್ಡಮ್ಮ ದೇವಾಲಯದ ಬಳಿಯಿಂದ ತಿಮ್ಮಕ್ಕ ಸಸ್ಯೋದ್ಯಾನದವರೆಗೆ ಸೈಕಲ್ ಜಾಥಾ ನಡೆಸಲಾಯಿತು.