ಶೈಕ್ಷಣಿಕ ಪ್ರಗತಿಗೆ ಸಮುದಾಯದ ಸಹಕಾರ ಅಗತ್ಯ: ಪ್ರಕಾಶ ತಗಡಿನಮನಿ

| Published : Oct 09 2024, 01:33 AM IST

ಶೈಕ್ಷಣಿಕ ಪ್ರಗತಿಗೆ ಸಮುದಾಯದ ಸಹಕಾರ ಅಗತ್ಯ: ಪ್ರಕಾಶ ತಗಡಿನಮನಿ
Share this Article
  • FB
  • TW
  • Linkdin
  • Email

ಸಾರಾಂಶ

ಕಡಿಮೆ ಅನುದಾನ ಇದ್ದರೂ ಗ್ರಾಮೀಣ ಭಾಗದಲ್ಲಿ ನಡೆಯುವ ಪ್ರತಿಭಾ ಕಾರಂಜಿಗೆ ಅನೇಕ ದಾನಿಗಳು ಸಹಕಾರ ನೀಡುವ ಮೂಲಕ ಹಬ್ಬದ ವಾತಾವರಣ ನಿರ್ಮಾಣ ಮಾಡುತ್ತಾರೆ.

ಬಹದ್ದೂರ ಬಂಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ

ಕನ್ನಡಪ್ರಭ ವಾರ್ತೆ ಕೊಪ್ಪಳ

ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕಾದರೆ ಸಮುದಾಯದ ಸಹಕಾರ ಅಗತ್ಯ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಪ್ರಕಾಶ ತಗಡಿನಮನಿ ಹೇಳಿದರು.

ತಾಲೂಕಿನ ಚುಕನಕಲ್ಲು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತೆಯ ಇಲಾಖೆಯಿಂದ ಹಮ್ಮಿಕೊಂಡಿದ್ದ ಬಹದ್ದೂರ ಬಂಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಆಯೋಜನೆ ಮಾಡಲು ಇಲಾಖೆಯಿಂದ ಕಡಿಮೆ ಅನುದಾನ ಬಂದಿದೆ. ಆದರೆ ಕಡಿಮೆ ಅನುದಾನ ಇದ್ದರೂ ಗ್ರಾಮೀಣ ಭಾಗದಲ್ಲಿ ನಡೆಯುವ ಪ್ರತಿಭಾ ಕಾರಂಜಿಗೆ ಅನೇಕ ದಾನಿಗಳು ಸಹಕಾರ ನೀಡುವ ಮೂಲಕ ಹಬ್ಬದ ವಾತಾವರಣ ನಿರ್ಮಾಣ ಮಾಡುತ್ತಾರೆ. ಶಿಕ್ಷಕರಾದವರು ಹೆಚ್ಚು ಸಮುದಾಯದ ಸಹಕಾರವನ್ನು ಬಳಸಿಕೊಳ್ಳುವುದರಿಂದ ಅನೇಕ ಕಾರ್ಯಕ್ರಮಗಳು ಯಶಸ್ವಿಯಾಗುತ್ತವೆ ಎಂದು ಹೇಳಿದರು.

ಬಹದ್ದೂರಬಂಡಿ ಕ್ಲಸ್ಟರ್ ಸಿಆರ್‌ಪಿ ಹನುಮಂತಪ್ಪ ಕುರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮವನ್ನು ಬಹದ್ದೂರಬಂಡಿ ಗ್ರಾಪಂ ಅಧ್ಯಕ್ಷರಾದ ಯಲ್ಲಪ್ಪ ವಾಲ್ಮೀಕಿ ಉದ್ಘಾಟಿಸಿದರು. ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ, ಅಕ್ಷರ ದಾಸೋಹದ ಸಹಾಯ ಅಧಿಕಾರಿ ಮಲ್ಲಿಕಾರ್ಜುನ ಗುಡಿ, ಸರ್ಕಾರಿ ನೌಕರರ ಸಂಘದ ಕಾರ್ಯಾಧ್ಯಕ್ಷ ಶಿವಪ್ಪ ಜೋಗಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಹೊಳಿಬಸಯ್ಯ, ಕಾರ್ಯದರ್ಶಿ ಬಾಳಪ್ಪ ಕಾಳೆ, ಪತ್ತಿನ ಸಂಘದ ನಿರ್ದೇಶಕ ಮಲ್ಲಪ್ಪ ಗುಡದನ್ನವರ, ಅಂದಪ್ಪ ಬೋಳರಡ್ಡಿ, ಕನಕಪ್ಪ, ಶರಣಪ್ಪ ರಡ್ಡೇರ, ಮುಖ್ಯೋಪಾಧ್ಯಾಯ ಬಿ.ಎಂ. ನಾಗರಡ್ಡಿ, ಎಸ್‌ಡಿಎಂಸಿ ಅಧ್ಯಕ್ಷ ಹನುಮೇಶ, ಗ್ರಾಪಂ ಸದಸ್ಯರಾದ ಸೋಮೇಪ್ಪ, ಮಾರುತಿ, ಪ್ರಕಾಶರಡ್ಡಿ, ಪ್ರಭುಗೌಡ, ಪ್ರಕಾಶರಡ್ಡಿ ಕಾತರಕಿ ಮುಂತಾದವರಿದ್ದರು. ಶಕುಂತಲಾ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕರಾದ ನಾಗಪ್ಪ ಕಾತರಕಿ ಸ್ವಾಗತಿಸಿದರು. ವೀರನಗೌಡ ಪಾಟೀಲ ವಂದಿಸಿದರು.