ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಗೌರವ ಧನ ಬಿಡುಗಡೆ, ಸಾರ್ವಜನಿಕರ ಇ- ಸ್ವತ್ತು ಮತ್ತಿತರ ಕೆಲಸ ಕಾರ್ಯಗಳನ್ನು ಮಾಡದೆ ಕಾಲ ಹರಣ ಮಾಡುತ್ತಿರುವ ಪಿಡಿಒ ವೆಂಕಟೇಶ್ ವಿರುದ್ಧ ಹರಿಹಾಯ್ದು ತರಾಟೆಗೆ ತೆಗೆದುಕೊಂಡರು.

ಕನ್ನಡಪ್ರಭ ವಾರ್ತೆ ಮದ್ದೂರು

ನಗರಸಭೆ ವ್ಯಾಪ್ತಿಗೆ ಗ್ರಾಮ ಪಂಚಾಯಿತಿಗಳನ್ನು ಸೇರ್ಪಡೆ ವಿರೋಧಿಸಿ ಗ್ರಾಮಸ್ಥರು ಕಳೆದ 16 ದಿನಗಳಿಂದ ಧರಣಿ ನಡೆಸುತ್ತಿದ್ದರೂ ಸಹ ಪಂಚಾಯಿತಿ ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳ ಸ್ಥಗಿತಗೊಳಿಸಿರುವ ಅಧಿಕಾರಿಗಳ ಕ್ರಮ ವಿರೋಧಿಸಿ ಹೋರಾಟಗಾರರು ಮಂಗಳವಾರ ಗೆಜ್ಜಲಗೆರೆ ಗ್ರಾಮದ ಪಿಡಿಒ ವೆಂಕಟೇಶ್ ಅವರಿಗೆ ಘೇರಾವ್‌ ಹಾಕಿದ ಘಟನೆ ಜರುಗಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷರು ಹಾಗೂ ಸದಸ್ಯರ ಗೌರವ ಧನ ಬಿಡುಗಡೆ, ಸಾರ್ವಜನಿಕರ ಇ- ಸ್ವತ್ತು ಮತ್ತಿತರ ಕೆಲಸ ಕಾರ್ಯಗಳನ್ನು ಮಾಡದೆ ಕಾಲ ಹರಣ ಮಾಡುತ್ತಿರುವ ಪಿಡಿಒ ವೆಂಕಟೇಶ್ ವಿರುದ್ಧ ಹರಿಹಾಯ್ದು ತರಾಟೆಗೆ ತೆಗೆದುಕೊಂಡರು.

ಗ್ರಾಮ ಪಂಚಾಯಿತಿಗಳನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆ ವಿಚಾರದಲ್ಲಿ ಕ್ಷೇತ್ರದ ಶಾಸಕರ ಗುಲಾಮರಂತೆ ವರ್ತಿಸುತ್ತಿರುವ ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕೆಲಸ ಕಾರ್ಯಗಳನ್ನು ಸ್ಥಗಿತಗೊಳಿಸಿ ಜನರನ್ನು ಬೀದಿಗೆ ತಂದು ನಿಲ್ಲುವ ಪರಿಸ್ಥಿತಿಯನ್ನು ತಂದೊಡ್ಡಿದ್ದಾರೆ ಎಂದು ಕಿಡಿಕಾರಿದರು. ನಮ್ಮ ಹೋರಾಟದಿಂದಾಗಿ ಪರಿಸ್ಥಿತಿ ಬಿಗಡಾಯಿಸಬಾರದು ಎಂಬ ಕಾರಣಕ್ಕೆ ನಾವುಗಳು ಕಾನೂನಿನ ಚೌಕಟ್ಟಿನಲ್ಲಿ ಹೋರಾಟ ನಡೆಸುವ ಮೂಲಕ ತಾಳ್ಮೆಯಿಂದ ವರ್ತಿಸುತ್ತಿದ್ದೇವೆ. ಇದೇ ಪರಿಸ್ಥಿತಿ ಮುಂದುವರೆದಲ್ಲಿ ಶಾಸಕರೇ ಹೊಣೆ ಯಾಗಬೇಕಾಗುತ್ತದೆ ಎಂದು ಜನಪ್ರತಿನಿಧಿಗಳು ಮತ್ತು ರೈತ ಮುಖಂಡರು ಎಚ್ಚರಿಕೆ ನೀಡಿದರು.