ಸಾರಾಂಶ
Publication of Beneficiary List for Compensation Distribution: Allowance for Objection
ಯಾದಗಿರಿ: 2024-25 ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಾದ ಪ್ರವಾಹ, ಅತಿವೃಷ್ಟಿಯಿಂದ ಜಿಲ್ಲೆಯಲ್ಲಿ ಉಂಟಾದ ಬೆಳೆಹಾನಿ ಪರಿಹಾರವನ್ನು ಪಾವತಿಸುವ ಕುರಿತಂತೆ ಬೆಳೆಹಾನಿಯಾದ ರೈತರ ವಿವರಗಳ ಪಟ್ಟಿಯನ್ನು ಪ್ರಕಟಿಸಿದ್ದು, ಆಕ್ಷೇಪಣೆಗಳು ಇದ್ದರೆ ಸಾರ್ವಜನಿಕರು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ, ಉಪವಿಭಾಗಾಧಿಕಾರಿ, ತಹಸೀಲ್ದಾರ್, ಗ್ರಾಮ ಪಂಚಾಯಿತಿ, ರೈತ ಸಂಪರ್ಕ ಕೇಂದ್ರಗಳಲ್ಲಿ ಹಾಗೂ ಜಿಲ್ಲೆಯ ವೆಬ್ ಸೈಟ್ www.nic.yadgir ನಲ್ಲಿ ಸೆ. 11ರಂದು ಪ್ರಕಟಿಸಲಾಗಿದ್ದು, ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಂಬಂಧಿಸಿದ ತಹಸೀಲ್ದಾರ್, ಕೃಷಿ, ತೋಟಗಾರಿಕಾ ಇಲಾಖೆಗಳ ತಾಲೂಕು ಕಚೇರಿಗಳಲ್ಲಿ 7 ದಿನಗಳೊಳಗಾಗಿ ಸಲ್ಲಿಸುವಂತೆ ತಿಳಿಸಿದ್ದಾರೆ.