ಕನ್ನಡಪ್ರಭ ವಾರ್ತೆ ಪೊನ್ನಂಪೇಟೆ
ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಪೊನ್ನಂಪೇಟೆ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆ ಗ್ಯಾರಂಟಿ ಯೋಜನೆ ಅಧ್ಯಕ್ಷ ಪ್ರಶಾಂತ್ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ಜರುಗಿತು.ಯುವ ನಿಧಿ ಯೋಜನೆ ಕುರಿತು ಹೆಚ್ಚಿನ ಪ್ರಚಾರವಾಗಬೇಕು. ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ದೂರವಾಣಿ ಮೂಲಕ ಸಂಪರ್ಕ ಮಾಡಿ ಯೋಜನೆಯ ಉಪಯೋಗ ಪಡೆಯಲು ಚರ್ಚಿಸಲಾಯಿತು. ಯುವ ನಿಧಿ ಯೋಜನೆ ಅರ್ಹತೆ ಕುರಿತು ಉದ್ಯೋಗ ವಿನಿಮಯಾಧಿಕಾರಿಗಳು ಮಾಹಿತಿ ನೀಡಿದರು.
2024-25 ರಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿರಬೇಕು (ಪದವಿ-3000, ಡಿಪ್ಲೋಮಾ -1500.) ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 3 ಸಾವಿರ ರು. ಪ್ರೋತ್ಸಾಹ ಧನ ನೀಡಲಾಗುತ್ತಿದೆ. ರೇಡಿಯೋ ಪತ್ರಿಕೆ ಹಾಗೂ ದೃಶ್ಯಮಾಧ್ಯಮಗಳಲ್ಲಿ ಯೋಜನೆ ಕುರಿತು ಜಾಹೀರಾತು ನೀಡುವಂತೆ ಪೊನ್ನಂಪೇಟೆ ತಾ.ಪಂ.ಗ್ಯಾರಂಟಿ ಅಧ್ಯಕ್ಷ ಪ್ರಶಾಂತ್ ತಿಳಿಸಿದರು.ಅನ್ನಭಾಗ್ಯ: ಪೊನ್ನಂಪೇಟೆ ತಾಲೂಕಿನಲ್ಲಿ ನ್ಯಾಯಬೆಲೆ ಅಂಗಡಿಯಲ್ಲಿ ಎಸ್.ಸಿ/ ಎಸ್.ಟಿ ಗಳ ಜಾತಿ ಪ್ರಮಾಣ ಪತ್ರವನ್ನು ರೇಷನ್ ಕಾರ್ಡ್‍ಗೆ ಲಿಂಕ್ ಮಾಡುವ ಕಾರ್ಯ ನಡೆಯುತ್ತಿದ್ದು, ರೇಷನ್ ಕಾರ್ಡ್ ಹೊಂದಿರುವವರು ಎಲ್ಲರೂ ಇ-ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಸಭೆಗೆ ಮಾಹಿತಿ ನೀಡಿದರು.
ಶಕ್ತಿ ಯೋಜನೆ: ಶಾಲಾ ಮಕ್ಕಳಿಗೆ ಪ್ರತಿ ಶನಿವಾರ ಅರ್ಧ ದಿನವಾಗಿದ್ದು, ಅದ್ದರಿಂದ ಅಂತಹ ಸಮಯದಲ್ಲಿ ಮಕ್ಕಳಿಗೆ ಬಸ್‌ಗಳ ಸಮಸ್ಯೆಯಾಗುತ್ತಿದ್ದು ಈ ಸಮಸ್ಯೆಯನ್ನು ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಗೋಣಿಕೊಪ್ಪಲು ಬಸ್ ನಿಲ್ದಾಣದಲ್ಲಿ ಕೆಎಸ್‍ಆರ್‌ಟಿಸಿ ಬಸ್‌ಗಳನ್ನು ನಿಲ್ಲಿಸಲು ಅವಕಾಶ ಕಲ್ಪಿಸಿಕೊಡಲು ಸಭೆಯಲ್ಲಿ ಕೋರಲಾಯಿತು. ಖಾಸಗಿ ಬಸ್‌ಗಳು ಸರ್ಕಾರಿ ಬಸ್‌ಗಳಿಗೆ ನಿಲುಗಡೆಗೆ ಅವಕಾಶ ನಿಡುತ್ತಿಲ್ಲ. ಈ ಸಮಸ್ಯೆ ಬಗೆಹರಿಸುವಂತೆ ಕೆಎಸ್‍ಆರ್‌ಟಿಸಿ ಅಧಿಕಾರಿಗಳು ಕೋರಿದರು.
ಯೋಜನೆಗಳ ಅನುಷ್ಠಾನ ಹಾಗೂ ಹಲವು ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ವಿರಾಜಪೇಟೆ ತಾ.ಪಂ.ಇಒ ರಾಜೇಶ್, ಗ್ಯಾರಂಟಿ ಯೋಜನೆ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
