ಕುಷ್ಟಗಿಯಲ್ಲಿ ಶಾಂತ ರೀತಿಯಿಂದ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ

| Published : Mar 02 2024, 01:45 AM IST

ಕುಷ್ಟಗಿಯಲ್ಲಿ ಶಾಂತ ರೀತಿಯಿಂದ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ
Share this Article
  • FB
  • TW
  • Linkdin
  • Email

ಸಾರಾಂಶ

ಅನ್ನದಾನೇಶ್ವರ ಪಿಯು ಕಾಲೇಜಿನಲ್ಲಿ 405 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿರುವ ಪೈಕಿ 381 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು.

ಕುಷ್ಟಗಿ: ಪಟ್ಟಣ ಸೇರಿದಂತೆ ತಾಲೂಕಿನ ತಾವರಗೇರಾ ಪಟ್ಟಣದ ಪರೀಕ್ಷಾ ಕೇಂದ್ರ ಒಟ್ಟು ನಾಲ್ಕು ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗಳು ಶಾಂತರೀತಿಯಿಂದ ನಡೆದವು.ಶುಕ್ರವಾರದಿಂದ ಪರೀಕ್ಷೆಗಳು ಆರಂಭವಾಗಿದ್ದು, ಮೊದಲ ವಿಷಯ ಕನ್ನಡ ಭಾಷೆಯ ವಿಷಯಕ್ಕೆ ಪರೀಕ್ಷೆಯನ್ನು ಹುಮ್ಮಸ್ಸಿನಿಂದ ಬರೆದರು.ಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 667 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿರುವ ಪೈಕಿ 642 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. 25 ವಿದ್ಯಾರ್ಥಿಗಳು ಗೈರು ಹಾಜರಾದರು. ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 570 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿರುವ ಪೈಕಿ 553 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. 17 ವಿದ್ಯಾರ್ಥಿಗಳು ಗೈರಾದರು.ಅನ್ನದಾನೇಶ್ವರ ಪಿಯು ಕಾಲೇಜಿನಲ್ಲಿ 405 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿರುವ ಪೈಕಿ 381 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. 24 ವಿದ್ಯಾರ್ಥಿಗಳು ಗೈರಾದರು. ತಾವರಗೇರಾ ಪಟ್ಟಣದ ಪಿಯು ಕಾಲೇಜಿನಲ್ಲಿ 497 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿರುವ ಪೈಕಿ 474 ವಿದ್ಯಾರ್ಥಿಗಳು ಹಾಜರಾಗಿ ಪರೀಕ್ಷೆ ಬರೆದರು. 23 ವಿದ್ಯಾರ್ಥಿಗಳು ಗೈರಾದರು.ತಾಲೂಕಿನಾದ್ಯಂತ 2139 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 2050 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. ಇನ್ನುಳಿದ 89 ವಿದ್ಯಾರ್ಥಿಗಳು ಗೈರಾಗಿದ್ದರು. ಈ ಪರೀಕ್ಷಾ ಕೇಂದ್ರಗಳಿಗೆ ಪೊಲೀಸರು ಬಂದೋಬಸ್ತ್ ಒದಗಿಸಿದ್ದರು.