ಸಾರಾಂಶ
ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ
ಶಿರಾ: ಶಿರಾ ನಗರದ ಪ್ರೆಸಿಡೆನ್ಸಿ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮೇಘನಾ.ಎಂ.ಎಸ್ ಅವರು ಪಿಯುಸಿ ಪರೀಕ್ಷೆಯಲ್ಲಿ ತುಮಕೂರು ಜಿಲ್ಲೆಗೆ ಪ್ರಥಮ ಸ್ಥಾನ ಹಾಗೂ ರಾಜ್ಯಕ್ಕೆ ೭ನೇ ಸ್ಥಾನ ಪಡೆದಿದ್ದು, ಭಾನುವಾರ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ್ ಎಂ.ಗೌಡ ಅವರು ನಗರದಲ್ಲಿರುವ ವಿದ್ಯಾರ್ಥಿನಿಯ ನಿವಾಸಕ್ಕೆ ಭೇಟಿ ನೀಡಿ ವಿದ್ಯಾರ್ಥಿಯನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಸುಬ್ರಹ್ಮಣ್ಯ, ಮುಖಂಡರಾದ ಬರಗೂರು ಶಿವಕುಮಾರ್, ಮಂಜುನಾಥ್, ಕುಮಾರ್ ಸೇರಿದಂತೆ ಹಲವರು ಹಾಜರಿದ್ದರು.