ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಮಧ್ಯಾಹ್ನ 1.30ಕ್ಕೆ ಪ್ರಕಟ

| N/A | Published : Apr 08 2025, 01:49 AM IST / Updated: Apr 08 2025, 05:23 AM IST

PUC EXAM
ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಇಂದು ಮಧ್ಯಾಹ್ನ 1.30ಕ್ಕೆ ಪ್ರಕಟ
Share this Article
  • FB
  • TW
  • Linkdin
  • Email

ಸಾರಾಂಶ

ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟಗೊಳ್ಳಲಿದೆ.

 ಬೆಂಗಳೂರು : ಲಕ್ಷಾಂತರ ವಿದ್ಯಾರ್ಥಿಗಳು ಕಾಯುತ್ತಿರುವ ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವು ಮಂಗಳವಾರ ಮಧ್ಯಾಹ್ನ ಪ್ರಕಟಗೊಳ್ಳಲಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಲ್ಲೇಶ್ವರದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಲ್ಲಿ ಮಧ್ಯಾಹ್ನ 12.30ಕ್ಕೆ ಫಲಿತಾಂಶ ಬಿಡುಗಡೆ ಮಾಡಲಿದ್ದಾರೆ. ನಂತರ 1.30ರ ವೇಳೆಗೆ ವಿದ್ಯಾರ್ಥಿಗಳು ವೆಬ್‌ಸೈಟ್‌ನಲ್ಲಿ (https://karresults.nic.in) ತಮ್ಮ ಫಲಿತಾಂಶ ವೀಕ್ಷಿಸಬಹುದು ಎಂದು ಮಂಡಳಿಯು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಮಾರ್ಚ್‌ 1ರಿಂದ 20ರವರೆಗೆ ರಾಜ್ಯಾದ್ಯಂತ 1,771 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ಪಿಯು ಪರೀಕ್ಷೆಗೆ ಒಟ್ಟು 7 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ಮುಗಿದ ಮರುದಿನದಿಂದಲೇ ರಾಜ್ಯಾದ್ಯಂತ 76 ಕೇಂದ್ರಗಳಲ್ಲಿ ಸುಮಾರು 25 ಸಾವಿರಕ್ಕೂ ಹೆಚ್ಚು ಮೌಲ್ಯಮಾಪಕರು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಸಿದ್ದರು. ಏಪ್ರಿಲ್‌ 3 ವೇಳೆಗೆ ಮೌಲ್ಯಮಾಪನ ಪೂರ್ಣಗೊಂಡಿತ್ತು. ಇದೀಗ ಫಲಿತಾಂಶದ ಕಂಪ್ಯೂಟರೀಕರಣ ಕಾರ್ಯ ಮುಗಿಸಿ ಫಲಿತಾಂಶ ಪ್ರಕಟಣೆಗೆ ಮಂಡಳಿ ಅಣಿಯಾಗಿದೆ.