ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ: ಪಿಎಸ್ಐ, ಮುಖ್ಯಪೇದೆ ಅಮಾನತು

| Published : Oct 06 2023, 01:18 AM IST

ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ: ಪಿಎಸ್ಐ, ಮುಖ್ಯಪೇದೆ ಅಮಾನತು
Share this Article
  • FB
  • TW
  • Linkdin
  • Email

ಸಾರಾಂಶ

ಗಣೇಶ ಮೂರ್ತಿ ವಿಸರ್ಜನೆ ವೇಳೆ ಗಂಗಾವತಿ ನಗರದ ಜಾಮೀಯ ಮಸೀದಿ ಮುಂಭಾಗ ಪೂಜೆ ಸಲ್ಲಿಸುತ್ತಿರುವುದನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆಂಬ ಕಾರಣಕ್ಕೆ ನಗರ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಮುಖ್ಯಪೇದೆಯನ್ನು ಎಸ್ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಗಂಗಾವತಿ: ಗಣೇಶ ಮೂರ್ತಿ ವಿಸರ್ಜನೆ ವೇಳೆ ನಗರದ ಜಾಮೀಯ ಮಸೀದಿ ಮುಂಭಾಗ ಪೂಜೆ ಸಲ್ಲಿಸುತ್ತಿರುವುದನ್ನು ತಡೆಗಟ್ಟುವಲ್ಲಿ ವಿಫಲರಾಗಿದ್ದಾರೆಂಬ ಕಾರಣಕ್ಕೆ ನಗರ ಪೊಲೀಸ್ ಠಾಣೆಯ ಪಿಎಸ್ಐ ಮತ್ತು ಮುಖ್ಯಪೇದೆಯನ್ನು ಎಸ್ಪಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.ನಗರ ಪೊಲೀಸ್ ಠಾಣೆಯ ಪಿಎಸ್‌ಐ ಕಾಮಣ್ಣ, ಮುಖ್ಯಪೇದೆ ಮರಿಯಪ್ಪ ಎಂಬವರನ್ನು ಎಸ್ಪಿ ಯಶೋದಾ ವಂಟಿಗೋಡಿ ಅಮಾನತು ಮಾಡಿದ್ದಾರೆ ಎಂದು ಡಿವೈಎಸ್ಪಿ ಸಿದ್ದಲಿಂಗಪ್ಪಗೌಡ ಪಾಟೀಲ್ ತಿಳಿಸಿದ್ದಾರೆ.ಕಳೆದ ಎರಡು ದಿನಗಳ ಹಿಂದೆ ಗಂಗಾವತಿಯ ಈದ್ಗಾ ಕಾಲೋನಿಯಲ್ಲಿ ಪ್ರತಿಷ್ಠಾಪಿಸಿದ್ದ ಗಣೇಶಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಜಾಮೀಯ ಮಸೀದಿ ಮುಂಭಾಗ ಮೆರವಣಿಗೆಯ ವಾಹನ ನಿಲ್ಲಿಸಿ ಕುಂಬಳಕಾಯಿ ಒಡೆದು ಪೂಜೆ ಸಲ್ಲಿಸಿದ್ದರು. ಈ ವೇಳೆ ಸ್ಥಳದಲ್ಲಿದ್ದ ಪಿಎಸ್ಐ, ಮುಖ್ಯ ಪೇದೆ ಇದನ್ನು ತಡೆಗಟ್ಟಿಲ್ಲ. "ಏನೂ ಆಗುವುದಿಲ್ಲ. ಕೆಲ ನಿಮಿಷ ಪೂಜೆ ಸಲ್ಲಿಸಲಿ " ಎಂದು ಮೆರವಣಿಗೆಯ ನೇತೃತ್ವ ವಹಿಸಿದ್ದವರಿಗೆ ತಿಳಿಸಿದ್ದೇ ಅಮಾನತಿಗೆ ಕಾರಣ ಎನ್ನಲಾಗಿದೆ. ಈ ವಿಷಯ ಪರಿಗಣಿಸಿ ಎಸ್ಪಿ ಗುರುವಾರ ರಾತ್ರಿ ಅಮಾನತುಗೊಳಿಸಿ ಆದೇಶಿಸಿದ್ದಾರೆ.

ಇನ್ನೋರ್ವ ಅಧಿಕಾರಿಯೊಬ್ಬರಿಗೆ ರಜೆ ಮೇಲೆ ಹೋಗಲು ಸೂಚನೆ ನೀಡಿದ್ದಾರೆಂದು ಹೇಳಲಾಗುತ್ತಿದೆ.