ಎಚ್‌ಡಿಕೆ ಆರೋಗ್ಯಕ್ಕಾಗಿ ಉಡುಪಿ ಜೆಡಿಎಸ್‌ನಿಂದ ಪೂಜೆ, ಪ್ರಾರ್ಥನೆ

| Published : Mar 22 2024, 01:04 AM IST

ಎಚ್‌ಡಿಕೆ ಆರೋಗ್ಯಕ್ಕಾಗಿ ಉಡುಪಿ ಜೆಡಿಎಸ್‌ನಿಂದ ಪೂಜೆ, ಪ್ರಾರ್ಥನೆ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಮಹತೋಭಾರ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿಜನಾರ್ದನ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ನಂತರ ಉಡುಪಿ ಶ್ರೀ ಕೃಷ್ಣಮಠಕ್ಕೆ ತೆರಳಿ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರಿಗೆ ಹಾಗೂ ಶ್ರೀ ಅನಂತೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲಾಯಿತು.

ಕನ್ನಡಪ್ರಭ ವಾರ್ತೆ ಕಾಪುಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಚೆನ್ನೈ ಆಸ್ಪತ್ರೆಯಲ್ಲಿ ಹೃದಯ ಸಂಬಂಧ ಶಸ್ತ್ರಚಿಕಿತ್ಸೆ ನಡೆಯುತ್ತಿದ್ದು, ಅವರ ಆರೋಗ್ಯ ವೃದ್ಧಿ ಹಾಗೂ ಉತ್ತಮ ಆಯುಷ್ಯಕ್ಕಾಗಿ ಪ್ರಾರ್ಥಿಸಿ ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ವತಿಯಿಂದ ಗುರುವಾರ ಬೆಳಗ್ಗೆ 9.30 ಗಂಟೆಗೆ ಇಲ್ಲಿನ ಮಹತೋಭಾರ ಕಾಪು ಸಾವಿರ ಸೀಮೆಯ ಒಡೆಯ ಶ್ರೀ ಲಕ್ಷ್ಮಿಜನಾರ್ದನ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ನಂತರ ಉಡುಪಿ ಶ್ರೀ ಕೃಷ್ಣಮಠಕ್ಕೆ ತೆರಳಿ ಶ್ರೀ ಕೃಷ್ಣ ಮತ್ತು ಮುಖ್ಯಪ್ರಾಣ ದೇವರಿಗೆ ಹಾಗೂ ಶ್ರೀ ಅನಂತೇಶ್ವರ ದೇವರಿಗೆ ವಿಶೇಷ ಪೂಜೆ ನೆರವೇರಿಸಿ ಪ್ರಾರ್ಥಿಸಲಾಯಿತು.ನಂತರ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ. ಶೆಟ್ಟಿ ನೇತೃತ್ವದ ನಿಯೋಗವು ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೆಂದ್ರತೀರ್ಥ ಶ್ರೀಪಾದಂಗಳವರನ್ನು ಭೇಟಿಯಾಗಿ ಕುಮಾರಸ್ವಾಮಿಯವರ ಆರೋಗ್ಯ ವೃದ್ಧಿಗೆ ಆಶೀರ್ವಾದವನ್ನು ಪಡೆದರು. ಶ್ರೀಗಳು ಮುಖ್ಯ ಪ್ರಾಣದೇವರಲ್ಲಿ ಪ್ರಾರ್ಥಿಸಿ ಅನುಗ್ರಹ ಪ್ರಸಾದ ನೀಡಿದರು.ಈ ಸಂದರ್ಭ ಉಡುಪಿ ಜಿಲ್ಲಾ ಜೆಡಿಸ್ ಕಾರ್ಯಾಧ್ಯಕ್ಷ ವಾಸುದೇವ ರಾವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಕಾಪು ಪುರಸಭಾ ಸದಸ್ಯರು ಉಮೇಶ್ ಕರ್ಕೇರ, ಪುರಸಭೆ ಮಾಜಿ ಅಧ್ಯಕ್ಷ ಅನಿಲ್ ಕುಮಾರ್, ಪಕ್ಷದ ನಾಯಕರಾದ ಪ್ರವೀಣ್ ಕುಮಾರ್ ಗುರ್ಮೆ, ನವೀನ್ ಎಸ್.ಕೆ., ಉದಯ ಆರ್. ಶೆಟ್ಟಿ, ದೇವರಾಜ್ ತೊಟ್ಟಮ್, ವೆಂಕಟೇಶ್ ಎಂ.ಟಿ., ಕೀರ್ತಿರಾಜ್, ಅಶ್ರಫ್ ಪಡುಬಿದ್ರೆ, ಸರ್ಫ್ರಾಜ್, ಪ್ರವೀಣ್, ಪ್ರಶಾಂತ್ ಭಂಡಾರಿ, ಸುರೇಂದ್ರ, ವಿಶಾಲಾಕ್ಷಿ ಶೆಟ್ಟಿ, ಪ್ರಭಾಕರ್ ಶೆಟ್ಟಿ, ಸುರೇಶ್ ಪುತ್ರನ್ ಮತ್ತು ಪಕ್ಷದ ಏನೇಕ ಕಾರ್ಯಕರ್ತರು ಭಾಗವಹಿಸಿದ್ದರು.