ಕನ್ನಡಪ್ರಭ ವಾರ್ತೆ ಬೆಳಗಾವಿ ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ರಾಜ್ಯ ಸಲಹಾ ಬೆಲೆ (ಎಸ್ಎಪಿ) ಜಾರಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರಿಸದಿದ್ದರೆ ಅ.31ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ರೈತ ಮುಖಂಡ ಚುನಪ್ಪ ಪೂಜೇರಿ ಎಚ್ಚರಿಕೆ ನೀಡಿದ್ದಾರೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ರಾಜ್ಯ ಸಲಹಾ ಬೆಲೆ (ಎಸ್ಎಪಿ) ಜಾರಿಗೆ ಆಗ್ರಹಿಸಿ ಮೂಡಲಗಿ ತಾಲೂಕಿನ ಗುರ್ಲಾಪುರದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಅಹೋರಾತ್ರಿ ಧರಣಿ ಐದನೇ ದಿನಕ್ಕೆ ಕಾಲಿಟ್ಟಿದೆ. ಬೇಡಿಕೆ ಈಡೇರಿಸದಿದ್ದರೆ ಅ.31ರಂದು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದಾಗಿ ರೈತ ಮುಖಂಡ ಚುನಪ್ಪ ಪೂಜೇರಿ ಎಚ್ಚರಿಕೆ ನೀಡಿದ್ದಾರೆ.

ಪ್ರತಿ ಟನ್ ಕಬ್ಬಿಗೆ ₹5,500 ಬೆಂಬಲ ಬೆಲೆ ನಿಗದಿಪಡಿಸಬೇಕೆಂದು ಆಗ್ರಹಿಸಿ ಸಾವಿರಾರು ರೈತರು ಹೋರಾಟ ಮುಂದುವರಿಸಿದ್ದಾರೆ. ಗುರುವಾರ ಸಂಜೆ ಒಳಗಾಗಿ ಸರ್ಕಾರ ಬೇಡಿಕೆಗಳ ಕುರಿತು ಸೂಕ್ತ ನಿರ್ಧಾರ ಪ್ರಕಟಿಸಬೇಕು ಎಂದು ಪ್ರತಿಭಟನಾಕಾರರು ಗಡುವು ನೀಡಿದ್ದರು. ಬೇಡಿಕೆ ಈಡೇರದಿದ್ದರೆ ರಾಜ್ಯಾದ್ಯಂತ ಕರ್ನಾಟಕ ಬಂದ್‌ಗೆ ಕರೆ ನೀಡುವುದರ ಜತೆಗೆ ಶಾಸಕರು ಹಾಗೂ ಸಚಿವರ ಮನೆಗಳಿಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಮುಖಂಡರು ಎಚ್ಚರಿಸಿದ್ದಾರೆ.

ಕಬ್ಬು ಬೆಳೆಗಾರರ ಸಮಸ್ಯೆ ಕುರಿತು ಬೆಂಗಳೂರಿನಲ್ಲಿ ಕೇಂದ್ರ ಸಮಿತಿ ಸಭೆ ನಡೆಯುತ್ತಿರುವ ನಡುವೆಯೇ ಗುರ್ಲಾಪುರದಲ್ಲಿ ಹೋರಾಟ ತೀವ್ರಗೊಂಡಿದೆ. ರೈತರನ್ನು ವಿಶ್ವಾಸಕ್ಕೆ ಪಡೆದು ಸಮಸ್ಯೆ ಬಗೆಹರಿಸಬೇಕು. ಕಬ್ಬಿಗೆ ಟನ್‌ಗೆ ₹5,500 ಬೆಂಬಲ ಬೆಲೆ ನಿಗದಿಪಡಿಸುವುದರ ಜತೆಗೆ ರಾಜ್ಯ ಸಲಹಾ ಬೆಲೆ ಜಾರಿಗೊಳಿಸಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.