ದ.ಕ. ಜಿಲ್ಲಾಡಳಿತ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ

ಮಂಗಳೂರು: ಜಿಲ್ಲೆಯಲ್ಲಿನ ಒಂದು ವರ್ಷದಿಂದ 5 ವರ್ಷದವರೆಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಕೊಡಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಹೇಳಿದ್ದಾರೆ. ದ.ಕ. ಜಿಲ್ಲಾಡಳಿತ, ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ರೆಡ್ ಕ್ರಾಸ್ ಸೊಸೈಟಿ ವತಿಯಿಂದ ನಗರದ ಲೇಡಿಗೋಷನ್ ಆಸ್ಪತ್ರೆಯಲ್ಲಿ ಭಾನುವಾರ ಪಲ್ಸ್ ಪೋಲಿಯೊ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮತನಾಡಿದರು.

ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ ಹಾಕಿಸುವ ಮೂಲಕ ಮಕ್ಕಳನ್ನು ಶಾಶ್ವತವಾಗಿ ಅಂಗ ವೈಕಲ್ಯತೆಯಿಂದ ಮುಕ್ತ ಮಾಡಬಹುದು. ಮುಂದೆ ಯಾವುದೇ ರೀತಿಯ ಅಂಗ ವೈಕಲ್ಯತೆ ಮಕ್ಕಳಿಗೆ ಕಾಡದಿರಲು ಸರ್ಕಾರದೊಂದಿಗೆ ಕೈಜೋಡಿಸಿ ಪಲ್ಸ್ ಪೋಲಿಯೊ ಅಭಿಯಾನ ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ನರ್ವಡೆ ವಿನಾಯಕ್ ಕಾರ್ಬಾರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ತಿಮ್ಮಯ್ಯ, ವೆನ್ ಲಾಕ್ ಅಧೀಕ್ಷಕ ಡಾ. ಶಿವಪ್ರಕಾಶ್, ಲೇಡಿಗೋಷನ್ ಅಧೀಕ್ಷಕ ಡಾ. ದುರ್ಗಾಪ್ರಸಾದ್, ಆರ್.ಎಂ.ಒ. ಡಾ.ಜಗದೀಶ್, ರೆಡ್ ಕ್ರಾಸ್ ಅಧ್ಯಕ್ಷ ಶಾಂತರಾಮ ಶೆಟ್ಟಿ, ಆರ್‌ಸಿಎಚ್ ಅಧಿಕಾರಿ ಡಾ. ರಾಜೇಶ್, ನೋಡಲ್ ಅಧಿಕಾರಿ ಡಾ.ಮಮತಾ ಮತ್ತಿತರರು ಇದ್ದರು.

ಡಿ.21ರಿಂದ 24ರವರೆಗೆ ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ 3 ದಿನಗಳ ಕಾಲ ಹಾಗೂ ನಗರ ಪ್ರದೇಶದಲ್ಲಿ 4 ದಿನಗಳ ಕಾಲ ಪಲ್ಸ್ ಪೋಲಿಯೊ ಅಭಿಯಾನ ನಡೆಯಲಿದೆ.