ಸಾರಾಂಶ
ಕನ್ನಡ ಪ್ರಭ ವಾರ್ತೆ ಮಳವಳ್ಳಿ
ಮಾ.3ರಿಂದ 6ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಲು ಪೋಷಕರು ಮುಂದಾಗಬೇಕು ಎಂದು ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ ಮನವಿ ಮಾಡಿದರು.ಪಟ್ಟಣದಲ್ಲಿ ಸಾರ್ವಜನಿಕ ಆಸ್ಪತ್ರೆ, ಕಾರ್ಯನಿರತ ಪತ್ರಕರ್ತರ ಸಂಘ, ಪುರಸಭೆ, ವಿದ್ಯಾ ಪ್ಯಾರಾ ಮೆಡಿಕಲ್ ಸಹಯೋಗದೊಂದಿಗೆ ಶನಿವಾರ ಆಯೋಜಿಸಿದ್ದ ಪಲ್ಸ್ ಪೋಲಿಯೋ ಲಸಿಕೆ ಜನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ 0-5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಪೋಲಿಯೋ ಹನಿ ಹಾಕಿಸಿದ್ದರೂ ಪುನಃ ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿರುವ ಮಕ್ಕಳನ್ನು ಗುರುತಿಸಿ ಲಸಿಕೆ ಹಾಕಿಸಬೇಕು ಎಂದರು.ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಎಲ್ಲ ಇಲಾಖಾ ಅಧಿಕಾರಿಗಳು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳು ಹಾಗೂ ಸಾರ್ವಜನಿಕರ ಸಹಕಾರ ಕೋರಲಾಗಿದೆ. ಜಾಗೃತಿ ಅಭಿಯಾನದ ಮೂಲಕವೂ ಜನರ ಗಮನ ಸೆಳೆಯಲಾಗಿದೆ. ಭಾನುವಾರ ಬೂತ್ ಮಟ್ಟದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುವುದು. ನಂತರ ಇನ್ನುಳಿದ ದಿನಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಎಲ್ಲ ಮಕ್ಕಳಿಗೂ ಲಸಿಕೆ ಹಾಕಲಾಗುವುದು ಎಂದರು.
ಪ್ರತಿಯೊಬ್ಬ ಪೋಷಕರು ಐದು ವರ್ಷದೊಳಗಿನ ತಮ್ಮ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು. ಜಾಥಾವು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಾಗಿತ್ತು.ಕಾರ್ಯಕ್ರಮದಲ್ಲಿ ಗ್ರೇಡ್-2 ತಹಸೀಲ್ದಾರ್ ಬಿ.ವಿ.ಕುಮಾರ್, ಉಪ ತಹಸೀಲ್ದಾರ್ ಗುರುಪ್ರಸಾದ್, ತಾಲೂಕು ಅರೋಗ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಸಂಜಯ್, ಆರೋಗ್ಯ ನಿರೀಕ್ಷಣಾಧಿಕಾರಿ ಮಂಜು, ವಿದ್ಯಾ ಪ್ಯಾರಾ ಮೆಡಿಕಲ್ ಕಾಲೇಜು ಪ್ರಾಂಶುಪಾಲ ಚಂದ್ರಮೋಹನ್, ಉಪನ್ಯಾಸಕರಾದ ಚೇತನ್, ಸ್ಮಿತಾ, ಶಮಿತಾ ಹಾಗೂ ಅರೋಗ್ಯ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.
ತಪ್ಪದೇ ಮಕ್ಕಳಿಗೆ ಪಲ್ಸ್ ಪೋಲಿಯೋ ಹಾಕಿಸಿಹಲಗೂರು:ಮಕ್ಕಳಿಗೆ ಇಂದಿನಿಂದಲೇ ಪಲ್ಸ್ ಪೋಲಿಯೋ ಹಾಕಿಸುವ ಮೂಲಕ ಯಾವುದೇ ರೀತಿಯ ತೊಂದರೆಗಳು ಹಾಗೂ ಅಂಗವಿಕಲತೆಗೆ ಒಳಗಾಗುವುದನ್ನು ತಪ್ಪಿಸಬಹುದು ಎಂದು ಕರ್ನಾಟಕ ಪಬ್ಲಿಕ್ ಶಾಲೆ ಮುಖ್ಯ ಶಿಕ್ಷಕರಾದ ಕುಳ್ಳಯ್ಯ ತಿಳಿಸಿದರು.ರಾಜ್ಯ ಸರ್ಕಾರ, ಆರೋಗ್ಯ ಇಲಾಖೆ ಮತ್ತು ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೋ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಭಾನುವಾರ ಪಲ್ಸ್ ಪೋಲಿಯೋ ಕಾರ್ಯಕ್ರಮ ಇದ್ದು ನಿಮ್ಮ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪಲ್ಸ್ ಪೋಲಿಯೋ ಹಾಕಿಸಬೇಕು ಎಂದರು.ಸಹ ಶಿಕ್ಷಕರಾದ ಎಂ.ಪಿ.ಪ್ರದೀಪ್ ಕುಮಾರ್ ಮಾತನಾಡಿ, ಪೋಲಿಯೋ ಮುಕ್ತ ಭಾರತವನ್ನು ನಿರ್ಮಿಸಲು 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಲಸಿಕೆ ಹಾಕಿಸಿದರೆ ಅಂಗವಿಕಲತೆ ತಡೆಗಟ್ಟಲು ಸಾಧ್ಯವಾಗಲಿದೆ ಎಂದರು.ನಂತರ ಶಾಲಾ ವಿದ್ಯಾರ್ಥಿಗಳು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ, ಪಲ್ಸ್ ಪೋಲಿಯೋ ಹಾಕಿಸಿ ಎಂಬ ಘೋಷಣೆಗಳನ್ನು ಕೂಗಿದರು. ಈ ವೇಳೆ ಸಹ ಶಿಕ್ಷಕ ಎಂ.ಪಿ.ಪ್ರದೀಪ್ ಕುಮಾರ್, ಶಿಕ್ಷಕಿಯರಾದ ವನಿತ, ರೂಪಲಕ್ಷ್ಮಿ, ಆಶಾ ಕಾರ್ಯಕರ್ತೆಯರು ಸೇರಿದಂತೆ ಇತರರು ಇದ್ದರು.;Resize=(128,128))
;Resize=(128,128))
;Resize=(128,128))
;Resize=(128,128))