ಪಲ್ಸ್ ಪೋಲಿಯೋ, ದಡಾರ-ರುಬೆಲ್ಲಾ ನಿರ್ಮೂಲನೆಗೆ ಕ್ರಮ ವಹಿಸಿ: ಪನ್ವಾರ

| Published : Feb 08 2024, 01:36 AM IST

ಪಲ್ಸ್ ಪೋಲಿಯೋ, ದಡಾರ-ರುಬೆಲ್ಲಾ ನಿರ್ಮೂಲನೆಗೆ ಕ್ರಮ ವಹಿಸಿ: ಪನ್ವಾರ
Share this Article
  • FB
  • TW
  • Linkdin
  • Email

ಸಾರಾಂಶ

ಯಾದಗಿರಿ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು 0-5 ವರ್ಷದ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಗುರಿಯನ್ನು ಹೊಂದಲಾಗಿದೆ.

ಕನ್ನಡಪ್ರಭ ವಾರ್ತೆ ಯಾದಗಿರಿ

2024ರ ಮಾ.3ರಿಂದ 6ರ ವರೆಗೆ ಜಿಲ್ಲೆಯಾದ್ಯಂತ ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಾಗೂ ದಡಾರ ಮತ್ತು ರುಬೆಲ್ಲಾ ನಿರ್ಮೂಲನೆ ಕುರಿತು ಕ್ರಮ ವಹಿಸಬೇಕೆಂದು ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವು 0-5 ವರ್ಷದ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಗುರಿಯನ್ನು ಹೊಂದಿದ್ದು, ಈ ಕಾರ್ಯಕ್ರಮವು 2024ರ ಮಾ.3 ರಂದು ಬೂತ್ ಡೇಯಲ್ಲಿ ಎಲ್ಲಾ ಪ್ರಮುಖ ಸ್ಥಳಗಳಲ್ಲಿ ಲಸಿಕಾ ಸತ್ರವನ್ನು ತೆರೆದು ಪೋಲಿಯೋ ಹನಿಯನ್ನು ಹಾಕಲಾಗುವುದು. ಮಾ.4, 5 ಮತ್ತು 6 ರಂದು ಮನೆ ಮನೆಗೆ ಭೇಟಿ ನೀಡಿ ಪೋಲಿಯೋ ಹನಿ ವಂಚಿತ ಮಕ್ಕಳಿಗೆ ಪೋಲಿಯೋ ಹನಿ ಹಾಕಲಾಗುವುದು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಫ್ರಭುಲಿಂಗ ಮಾನಕರ್ ಮಾತನಾಡಿ, ರಾಷ್ಟ್ರೀಯ ಪಲ್ಸ್ ಪೋಲಿಯೋ 0-5 ವರ್ಷದ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಗುರಿಯನ್ನು ಹೊಂದಿದೆ ಎಂದರು

ಈ ಕಾರ್ಯಕ್ರಮವು ಜಿಲ್ಲೆಯಾದ್ಯಂತ ಯಶಸ್ವಿ ಅನುಷ್ಠಾನಕ್ಕಾಗಿ ಇತರೆ ಇಲಾಖೆಗಳ ಸಹಭಾಗಿತ್ವ ಅಗತ್ಯವಾಗಿದ್ದು, ಸಹಕಾರ ನೀಡುವಂತೆ ಆರ್.ಸಿ.ಎಚ್ ಅಧಿಕಾರಿಗಳು ಕೋರಿದರು.