ಬಾಗಲಕೋಟೆ: ಜಿಲ್ಲೆಯಲ್ಲಿ ಭಾನುವಾರದಿಂದ ಜುಲೈ 1 ವರೆಗೆ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ.ಡಿ ತಿಳಿಸಿದ್ದಾರೆ.
ಬಾಗಲಕೋಟೆ: ಜಿಲ್ಲೆಯಲ್ಲಿ ಭಾನುವಾರದಿಂದ ಜುಲೈ 1 ವರೆಗೆ ರಾಷ್ಟ್ರೀಯ ಪಲ್ಸ್ ಪೊಲೀಯೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಂಜುನಾಥ.ಡಿ ತಿಳಿಸಿದ್ದಾರೆ.
ಜಿಲ್ಲೆಯಾದ್ಯಂತ 0 ರಿಂದ 5 ವರ್ಷದೊಳಗಿನ ಒಟ್ಟು 2,10,529 ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಲು ಗುರಿ ಹೊಂದಲಾಗಿದೆ. ಅದಕ್ಕಾಗಿ 1,282 ಪೊಲೀಯೋ ಬೂತಗಳನ್ನು ಸ್ಥಾಪಿಸಲಾಗಿದೆ. ಒಟ್ಟು 4,07,777 ಮನೆಗಳನ್ನು ಗುರುತಿಸಿ ಭೇಟಿ ನೀಡಲು 1,390 ತಂಡಗಳನ್ನು ರಚಿಸಲಾಗಿದ್ದು, ಈ ಕಾರ್ಯಕ್ರಮದ ಮೇಲ್ವಿಚಾರಣೆಗೆ ಒಟ್ಟು 265 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.ತೋಟದ ಮನೆಗಳನ್ನು ಭೇಟಿ ಮಾಡಲು 63 ಮೊಬೈಲ್ ತಂಡಗಳನ್ನು ಗುರುತಿಸಲಾಗಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣ, ಪ್ರವಾಸಿ ತಾಣಗಳು, ಪ್ರಸಿದ್ಧ ದೇವಾಲಯಗಳಿಗೆ ಬರುವ ಮಕ್ಕಳಿಗೆ ಲಸಿಕೆಯನ್ನು ಹಾಕಲು 45 ಟ್ರಾನ್ಸಿಸ್ಟ್ ತಂಡಗಳನ್ನು ರಚಿಸಲಾಗಿದೆ. 0-5 ವರ್ಷದ ಒಳಗಿನ ಎಲ್ಲ ಮಕ್ಕಳಿಗೆ ಪಲ್ಸ್ ಪೊಲೀಯೋ ಲಸಿಕೆ ಹಾಕಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.