ಪಾಂಡವಪುರ:
ಜೂನ್ 28 ರಂದು ನಡೆಯಲಿರುವ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದು ತಾಲೂಕು ಆರೋಗ್ಯಾಧಿಕಾರಿ ಡಾ.ಸಿ.ಎ.ಅರವಿಂದ್ ತಿಳಿಸಿದರು.ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಆವರಣದಲ್ಲಿ ಶಾಸಕ ದರ್ಶನ್‌ಪುಟ್ಟಣ್ಣಯ್ಯ ಅವರು ಪಲ್ಸ್ ಪೋಲಿಯೋ ಲಸಿಕೆ ಹಾಕುವ ಮೂಲಕ ಚಾಲನೆ ನೀಡಲಿದ್ದಾರೆ ಎಂದರು.
ಅಂದು ಬೆಳಗ್ಗೆ 9 ರಿಂದ ಸಂಜೆ 4.30ರವರೆಗೂ ನಡೆಯಲಿದೆ. ತಾಲೂಕಿನಲ್ಲಿ 5ವರ್ಷದೊಳಗಿನ 9731 ಮಕ್ಕಳಿದ್ದು ಶೇ.100ರಷ್ಟು ಗುರಿ ಹೊಂದಲಾಗಿದೆ. ಲಸಿಕೆ ಹಾಕುವ ಕಾರ್ಯಕ್ರಮಕ್ಕೆ 117 ಸಿಬ್ಬಂದಿ ಹಾಗೂ 57 ಬೂತ್‌ಗಳನ್ನು ನಿರ್ಮಿಸಲಾಗಿದೆ. ಸಿಬ್ಬಂದಿಗೆ ತರಬೇತಿ ಸಹ ನೀಡಲಾಗಿದೆ ಎಂದರು.ಅಲ್ಲದೇ, ಆಸ್ಪತ್ರೆ, ಶಾಲೆ, ಅಂಗನವಾಡಿ ಕೇಂದ್ರ ಸೇರಿದಂತೆ ವಿಶೇಷವಾಗಿ ಬಸ್ ನಿಲ್ದಾಣ, ಹೊಸಕನ್ನಂಬಾಡಿ ಬಳಿ ಇರುವ ವೇಣುಗೋಪಾಲಸ್ವಾಮಿ ದೇವಸ್ಥಾನ ಹಾಗೂ ಮೇಲುಕೋಟೆಯ ಶ್ರೀಚಲುವನಾರಾಯಣಸ್ವಾಮಿ ದೇವಸ್ಥಾನದ ಆವರಣದಲ್ಲೂ ಬೂತ್‌ಗಳನ್ನು ನಿರ್ಮಿಸಲಾಗಿದೆ ಎಂದರು.
ದೇಶವನ್ನು ಪೋಲಿಯೋ ಮುಕ್ತ ದೇಶವನ್ನಾಗಿ ವಿಶ್ವಸಂಸ್ಥೆ ಘೋಷಿಸಿದ್ದರೂ ಸಹ ಅಕ್ಕಪಕ್ಕದ ರಾಷ್ಟ್ರಗಳಿಂದ ಯಾವುದೇ ತೊಂದರೆಯಾಗದಂತೆ ಮುನ್ನೆಚ್ಚರಿಕೆ ಕ್ರಮವಹಿಸಲು ಲಸಿಕೆ ಹಾಕಲಾಗುತ್ತಿದೆ. ಹಾಗಾಗಿ ಪ್ರತಿಯೊಬ್ಬರು ಎಲ್ಲಾ ಮಕ್ಕಳಿಗೂ ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ಜತೆಗೆ 15 ವರ್ಷದಿಂದ 15 ವರ್ಷ 6 ತಿಂಗಳ ಒಳಗಿನ ಎಲ್ಲಾ ಮಹಿಳೆಯರಿಗೆ ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟಲು ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲಾಗುತ್ತಿದೆ. ಎಲ್ಲಾ ಯುವತಿಯರು ಕಡ್ಡಾಯವಾಗಿ ಲಸಿಕೆ ಹಾಕಿಸಬೇಕೆಂದು ಮನವಿ ಮಾಡಿದರು.ಬಿಡದಿ ಟೌನ್ ಶಿಪ್ ಅಭಿವೃದ್ಧಿ ಸಹಿಸದೆ ಎಚ್ಡಿಕೆ ಬೇಜಾಬ್ದಾರಿ ಪ್ರದರ್ಶನ: ಕೆ.ಎಂ.ಉದಯ್
ಕನ್ನಡಪ್ರಭ ವಾರ್ತೆ ಮದ್ದೂರುಬಿಡದಿ ಟೌನ್ ಶಿಪ್ ವಿಚಾರದಲ್ಲಿ ಆಗುತ್ತಿರುವ ಅಭಿವೃದ್ಧಿ ಸಹಿಸದೇ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಶಾಸಕ ಕೆ.ಎಂ.ಉದಯ್ ಹರಿಹಾಯ್ದರು.ಪಟ್ಟಣದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮುಖ್ಯಮಂತ್ರಿ ಆಗಿದ್ದ ಕುಮಾರಸ್ವಾಮಿ ಬಿಡದಿ ಟೌನ್ ಶಿಪ್ ಮಾಡಲು ಹೊರಟಿದ್ದರು. ಈಗ ಮುಖ್ಯಮಂತ್ರಿ ಆಗಿರುವ ಡಿ.ಕೆ.ಶಿವಕುಮಾರ್ ಅದರ ಅಭಿವೃದ್ಧಿಗೆ ವೇಗದ ಚಾಲನೆ ನೀಡಿದ್ದಾರೆ. ಇದನ್ನು ಸಹಿಸಿಕೊಳ್ಳಲು ಆಗದ ಕುಮಾರಸ್ವಾಮಿ ಈ ರೀತಿ ವರ್ತಿಸುತ್ತಿದ್ದಾರೆ ಕಿಡಿಕಾರಿದರು.ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಕುಮಾರಸ್ವಾಮಿ ಬೆಂಗಳೂರಿನ ವೆಸ್ಟ್ ಎಂಡ್ ಹೋಟೆಲ್ ಬಿಟ್ಟು ವಿಧಾನಸೌಧಕ್ಕೆ ಹೋಗಿಲ್ಲ. ಇನ್ನು ಹಳ್ಳಿಗಳ ಬಗ್ಗೆ ಅವರಿಗೇನು ಗೊತ್ತು. ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಡದಿ ಟೌನ್ ಶಿಪ್ ಅಭಿವೃದ್ಧಿಗೆ ವೇಗ ನೀಡಿದ್ದಾರೆ. ಇದನ್ನು ಸಹಿಸದ ಕುಮಾರಸ್ವಾಮಿ ಸುತ್ತಮುತ್ತಲಿನ ಕಾರ್ಯಕರ್ತರನ್ನು ಕರೆಸಿ ರೈತರ ಹೆಸರಿನಲ್ಲಿ ಎತ್ತಿ ಕಟ್ಟಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಟೌನ್ ಶಿಪ್ ವಿಚಾರವಾಗಿ ಡಿ.ಕೆ.ಶಿವಕುಮಾರ್ ಕುಮಾರಸ್ವಾಮಿ ಅವರಿಗೆ ಎರಡು ಬಾರಿ ಆಹ್ವಾನ ಕೊಟ್ಟಿದ್ದರು. ಅವರು ಹೋಗಿದ್ದರೆ ಗೌರವ ಇರುತ್ತಿತ್ತು. ಅದನ್ನು ಬಿಟ್ಟು ಇಲ್ಲಿಗೆ ಬನ್ನಿ, ಅಲ್ಲಿಗೆ ಬನ್ನಿ ಕಾಯ್ತೀನಿ ಎಂದು ಬೇಜವಾಬ್ದಾರಿ ಪ್ರದರ್ಶನ ಮಾಡುತ್ತಿದ್ದಾರೆ ಎಂದು ತರಾಟೆ ತೆಗೆದುಕೊಂಡರು.