ಪುನರೂರು ಪ್ರತಿಷ್ಠಾನ ಬಾಲ ವಿಕಾಸ ಶಿಬಿರ ಸಮಾರೋಪ

| Published : May 21 2024, 12:33 AM IST

ಸಾರಾಂಶ

ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ 8 ದಿನಗಳ ಕಾಲ ಉಚಿತವಾಗಿ ಆಯೋಜಿಸಿದ ಬಾಲ ವಿಕಾಸ ಶಿಬಿರ - 2024ರ ಸಮಾರೋಪ ಸಮಾರಂಭ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಲ್ಕಿ

ಮಕ್ಕಳಲ್ಲಿನ ಸೃಜನಶೀಲತೆ, ಕೌಶಲ್ಯ ಹಾಗೂ ಕಲಿಕಾ ಮನೋಭಾವ ಹೆಚ್ಚಿಸಲು ಬಾಲ ವಿಕಾಸ ಶಿಬಿರ ಸಹಕಾರಿ ಎಂದು ದ.ಕ ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯ ಸುಬ್ರಹ್ಮಣ್ಯ ಪ್ರಸಾದ್ ಕೊರಿಯರ್ ಹೇಳಿದ್ದಾರೆ.

ಪುನರೂರು ಪ್ರತಿಷ್ಠಾನದ ಆಶ್ರಯದಲ್ಲಿ ಜನ ವಿಕಾಸ ಸಮಿತಿ ಮೂಲ್ಕಿ ಸಹಕಾರದಲ್ಲಿ ಮಕ್ಕಳ ಬೌದ್ಧಿಕ ಬೆಳವಣಿಗೆಗಾಗಿ ಪುನರೂರು ಶ್ರೀ ವಿಶ್ವನಾಥ ದೇವಳದ ಸಭಾಂಗಣದಲ್ಲಿ 8 ದಿನಗಳ ಕಾಲ ಉಚಿತವಾಗಿ ಆಯೋಜಿಸಿದ ಬಾಲ ವಿಕಾಸ ಶಿಬಿರ - 2024ರ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷ ಧರ್ಮದರ್ಶಿ ಡಾ.ಹರಿಕೃಷ್ಣ ಪುನರೂರು ಅಧ್ಯಕ್ಷತೆ ವಹಿಸಿದ್ದರು. ಶಿಬಿರಾರ್ಥಿಗಳಿಗೆ ಯೋಗ ತರಬೇತಿ ನೀಡಿದ ಖ್ಯಾತ ಯೋಗ ಗುರು ಜಯ ಮುದ್ದು ಶೆಟ್ಟಿ, ಶ್ಲೋಕ ಕಂಠಪಾಠ ಮಾಡಿಸಿದ ಶಿಮಂತೂರು ಶ್ರೀ ಶಾರದ ಸೆಂಟ್ರಲ್ ಸ್ಕೂಲ್ ನ ಪ್ರಾಂಶುಪಾಲ ಜಿತೇಂದ್ರ ವಿ.ರಾವ್ ಹೆಜಮಾಡಿ, ಅಭಿನಯ ತರಬೇತಿ ನೀಡಿದ ರಂಗನಟ ಹಾಗೂ ನಿರ್ದೇಶಕರಾದ ತಾರನಾಥ ಉರ್ವ, ಆವೆ ಮಣ್ಣಿನ ಕಲಾಕೃತಿ ರಚನೆ ಮತ್ತು ಕರಕುಶಲ ತರಬೇತಿ ನೀಡಿದ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಿ ಫಲಿಮಾರು, ಭಜನೆ ತರಬೇತಿ ನೀಡಿದ ಗಾಯಕ ಸುರೇಶ್ ಆಚಾರ್ಯ ಹಳೆಯಂಗಡಿ ಅವರನ್ನು ಸನ್ಮಾನಿಸಲಾಯಿತು.

ಶಿಬಿರದಲ್ಲಿ ಪಾಲ್ಗೊಂಡ 80 ಶಿಬಿರಾರ್ಥಿಗಳಿಗೆ ನೆನಪಿನ ಕಾಣಿಕೆ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದ ಅನುವಂಶಿಕ ಅರ್ಚಕ ವೇ.ಮೂ ಲಕ್ಷ್ಮೀನಾರಾಯಣ ಆಸ್ರಣ್ಣರು ಶಿಬಿರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು.

ಮೂಲ್ಕಿಯ ಶ್ರೀ ವ್ಯಾಸಮಹರ್ಷಿ ವಿದ್ಯಾಪೀಠದ ಪ್ರಾಂಶುಪಾಲ ಚಂದ್ರಿಕಾ ಭಂಡಾರಿ , ಪುನರೂರು ಪ್ರತಿಷ್ಠಾನದ ಗೌರವ ಅಧ್ಯಕ್ಷ ಎಚ್.ಕೆ.ಉಷಾರಾಣಿ, ಕೋಶಾಧಿಕಾರಿ ಚಂದ್ರಿಕಾ ಸುಧೀರ್, ಜನವಿಕಾಸ ಸಮಿತಿ ಮೂಲ್ಕಿಯ ಅಧ್ಯಕ್ಷ ಶಶಿಕರ ಕೆರೆಕಾಡು, ಜನವಿಕಾಸ ಸಮಿತಿ ಮೂಲ್ಕಿಯ ಪದಾಧಿಕಾರಿಗಳಾದ ಸುರೇಶ್ ರಾವ್ ನೀರಳಿಕೆ, ದಾಮೋದರ ಶೆಟ್ಟಿ ಕೊಡೆತ್ತೂರು, ಅಕ್ಷತಾ ಶೆಟ್ಟಿ, ಜೀವನ್ ಶೆಟ್ಟಿ, ಪ್ರಾಣೇಶ್ ಭಟ್ ದೇಂದಡ್ಕ ಇದ್ದರು.

ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು ಸ್ವಾಗತಿಸಿದರು, ಜನವಿಕಾಸ ಸಮಿತಿ ಮೂಲ್ಕಿಯ ಪ್ರಧಾನ ಕಾರ್ಯದರ್ಶಿ ಗೀತಾ ಶೆಟ್ಟಿ ವಂದಿಸಿದರು. ಹಿತಾ ಉಮೇಶ್ ನಿರೂಪಿಸಿದರು.