ಸಾರಾಂಶ
ಕನ್ನಡಪ್ರಭ ವಾರ್ತೆ ಮೈಸೂರು
ನ್ಯೂ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವದಾರ ರಕ್ತ ನಿಧಿ ಕೇಂದ್ರದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬದ ಅಂಗವಾಗಿ ಅಭಿಮಾನಿಗಳು ಸ್ವಯಂ ಪ್ರೇರಿತ ರಕ್ತದಾನ ಮಾಡುವ ಮೂಲಕ ಅರ್ಥಪೂರ್ಣವಾಗಿ ಪುನೀತ್ ರಾಜ್‌ಕುಮಾರ್ ಹುಟ್ಟುಹಬ್ಬ ಆಚರಿಸಿತು.ಹೋಟೆಲ್ ಮಾ ಲೀಕರ ಸಂಘದ ಅಧ್ಯಕ್ಷ ಸಿ. ನಾರಾಯಣಗೌಡ ಮಾತನಾಡಿ, ಜನನವಾದ ಮೇಲೆ ಮರಣ ನಿಶ್ಚಿತ. ಮರಣಿಸಿದ ನಂತರವೂ ಜನರ ಮನಸ್ಸಿನಲ್ಲಿ ಜೀವಂತ ವಾಗಿರುವಂತೆ ಬದುಕಬೇಕು. ಅಂಥ ಬದುಕು ಪುನೀತ್ ರಾಜ್‌ಕುಮಾರ್ ಅವರದ್ದಾಗಿತ್ತು ಎಂದು ಹೇಳಿದರು.
ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ. ಲಿಂಗರಾಜು ಮಾತನಾಡಿ, ಪುನೀತ್ ಸಮಾಜ ಸೇವೆಯಲ್ಲೂ ತೊಡಗಿದ್ದರು. ಅವರ ಅಭಿಮಾನಿಗಳು ಅವರಂತೆ ಒಳ್ಳೆಯ ಕೆಲಸ ಮಾಡುವ ಸಂಕಲ್ಪ ಕೈಗೊಳ್ಳಬೇಕು ಎಂದರು.ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕರಾದ ಗಿರೀಶ್, ಸಮಾಜ ಸೇವಕರಾದ ಖುಷಿ ವಿನು, ಶ್ರೀ ದುರ್ಗಾ ಫೌಂಡೇಶನ್ ಅಧ್ಯಕ್ಷರಾದ ರೇಖಾ ಶ್ರೀನಿವಾಸ್, ಸವಿತಾ ಘಾಟ್ಕೆ, ವಕೀಲರಾದ ಜಯಶ್ರೀ ಶಿವರಾಮ್, ಮಹಾನ್ ಶ್ರೇಯಸ್, ಹೇಮಾ, ಪವನ್ ಇದ್ದರು.
ಪುನೀತ್ ರಾಜ್‌ಕುಮಾರ್ ಜನ್ಮದಿನ:ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಮೈಸೂರುಪವರ್ ಸ್ಟಾರ್ ಡಾ.ಪುನೀತ್ ರಾಜ್ ಕುಮಾರ್ ಅವರ 50ನೇ ಜನ್ಮದಿನದ ಪ್ರಯುಕ್ತ ಪಕ್ಷಿಗಳಿಗೆ ನೀರುಣಿಸುವ ಕಾರ್ಯಕ್ರಮ ಮಾಡಲಾಯಿತು.
ಮೈಸೂರು ಕನ್ನಡ ವೇದಿಕೆಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಪಕ್ಷಿಗಳಿಗೆ ನೀರು ಉಣಿಸುವ 125ನೇ ಅಭಿಯಾನವನ್ನು ಪೌರಕಾರ್ಮಿಕರಿಂದ ಪುನೀತ್ ಅವರ ಭಾವಚಿತ್ರವನ್ನು ಉದ್ಘಾಟಿಸಿ ಆಟೋ ಮತ್ತು ಕಾರುಗಳಿಗೆ ವಿತರಿಸಲಾಯಿತು.ನಗರದ ಸಿದ್ದಾರ್ಥ ಲೇಔಟ್ ನಲ್ಲಿ 20 ಮರಗಳಿಗೆ ಮಡಿಕೆ ಕಟ್ಟಿ ನೀರಾಕಲಾಯಿತು. ಬೇಸಿಗೆ ಕಾಲದಲ್ಲಿ ಬಿಸಿಲಿನ ತಾಪಕ್ಕೆ ಪಕ್ಷಿಗಳು ಮತ್ತು ಅಳಿಲುಗಳು ನೀರಿಲ್ಲದೆ ನರಲಾಡುತ್ತವೆ, ಪಕ್ಷಿಗಳಿಗೆ ದಾಹವನ್ನು ನೀಗಿಸಲು ನೀರು ತಂಪಾಗಿರಲು ಮಡಿಕೆಯಲ್ಲಿ ನೀರು ಹಾಕಿ ದಾಹವನ್ನು ನೀಗಿಸಲಾಗುತ್ತಿದೆ ಪುನೀತ್ ಅವರ ಹುಟ್ಟುಹಬ್ಬವನ್ನು ಅಳಿಲುಗಳಿಗೆ ನೀರು ಉಣಿಸುವ ಮೂಲಕ ಜನ್ಮದಿನವನ್ನು ಆಚರಣೆ ಮಾಡಲಾಯಿತು.
ವೇದಿಕೆ ಅಧ್ಯಕ್ಷ ಎಸ್. ಬಾಲಕೃಷ್ಣ, ಎಲ್ಐಸಿ ಸಿದ್ದಪ್ಪ, ಗೋವಿಂದ್ ರಾಜ್,ಹೊನ್ಕೆರೆ ಸ್ವಾಮಿ, ಶಿವನಂಜಪ್ಪ, ಪೌರಕಾರ್ಮಿಕರಾದ ಪಾರ್ವತಮ್ಮ, ಸಿದ್ದಮ್ಮ ಭಾಗವಹಿಸಿದ್ದರು.