ಸಾರಾಂಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು
ನಗರದ ಹೃದಯ ಭಾಗದಲ್ಲಿರುವ ಆಜಾದ್ ಪಾರ್ಕ್ ವೃತ್ತದಲ್ಲಿ ಸೆ. 24 ರಂದು ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ ಪುತ್ಥಳಿ ಅನಾವರಣ ನಡೆಯಲಿದೆ ಎಂದು ವಿಸ್ಟಾರ್ ವೆಲ್ನೆಸ್ ಪ್ರೈ.ಲೀ.ನ ವ್ಯವಸ್ಥಾಪಕ ನಿರ್ದೇಶಕ ಡಾ. ಅಫ್ಸರ್ ಹಿಂದೂಸ್ತಾನಿ ಹೇಳಿದ್ದಾರೆ.ಅಂದು ಸಂಜೆ 5.30 ಕ್ಕೆ ಆಜಾದ್ ಪಾರ್ಕ್ ವೃತ್ತದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜಿಲ್ಲಾ ಡಾ. ರಾಜ್‌ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಐ.ಕೆ. ಓಂಕಾರೇಗೌಡ ಅಧ್ಯಕ್ಷತೆ ವಹಿಸಲಿದ್ದಾರೆ. ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪುತ್ಥಳಿ ಅನಾವರಣ ಮಾಡಲಿದ್ದಾರೆ. ಶಾಸಕ ಎಚ್.ಡಿ. ತಮ್ಮಯ್ಯ ಕನ್ನಡ ಧ್ವಜ ಅರೋಹಣ ಮಾಡಲಿದ್ದು, ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಗುರುವಾರ ಸುದ್ಧಿಗೋಷ್ಠಿಯಲ್ಲಿ ತಿಳಿಸಿದರು.
ಚಿತ್ರಕಲಾ ಪರಿಷತ್ನ ಅಧ್ಯಕ್ಷ ಡಾ.ಬಿ.ಎಲ್. ಶಂಕರ್ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ. ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಅವರು ಪುನೀತ್ ರಾಜ್‌ಕುಮಾರ್ ರವರಿಗೆ ನುಡಿ ನಮನ ಸಲ್ಲಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಡಾ. ರಾಜ್‌ಕುಮಾರ್ ಅವರ ಭಾವಚಿತ್ರ ಅನಾವರಣಗೊಳಿಸಿದ್ದಾರೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ವಿಧಾಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಸಂಸದ ಖೋಟಾ ಶ್ರೀನಿವಾಸ್ ಪೂಜಾರಿ ಹಾಗೂ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.ತಾಲೂಕು ಮಟ್ಟದ ಕ್ರೀಡಾಕೂಟ: ಜಿಲ್ಲಾಡಳಿತ, ಜಿಪಂ, ತಾಪಂ, ನಗರಸಭೆ ಚಿಕ್ಕಮಗಳೂರು, ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಚಿಕ್ಕಮಗಳೂರಿನ ವಿದ್ಯಾಭಾರತಿ ವಿದ್ಯಾ ಸಂಸ್ಥೆ ಆಶ್ರಯದಲ್ಲಿ ಸೆ. 20 ರಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಚಿಕ್ಕಮಗಳೂರು ತಾಲೂಕು ಮಟ್ಟದ 17 ವರ್ಷ ವಯೋಮಾನ ದೊಳಗಿನ ಮಕ್ಕಳ 2025-26 ನೇ ಸಾಲಿನ ಕ್ರೀಡಾಕೂಟ ನಡೆಯಲಿದೆ ಎಂದು ಅಫ್ಸರ್ ಹೇಳಿದರು.
ಅಂದು ಬೆಳಿಗ್ಗೆ 8.30 ಕ್ಕೆ ಆರಂಭವಾಗಲಿರುವ ಕ್ರೀಡಾಕೂಟವನ್ನು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಉದ್ಘಾಟಿಸ ಲಿದ್ದಾರೆ. ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ವಿಧಾಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಶಾಸಕ ಟಿ.ಡಿ. ರಾಜೇಗೌಡ, ವಿಧಾನಪರಿಷತ್ ಸದಸ್ಯರಾದ ಡಾ. ಅರತಿ ಕೃಷ್ಣ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ. ಶ್ರೀನಿವಾಸ್ ಉಪಸ್ಥಿತಿ ಇರಲಿದ್ದು, ಶಾಸಕ ಎಚ್.ಡಿ. ತಮ್ಮಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಚ್.ಎಸ್. ಕೀರ್ತನಾ, ಜಿಲ್ಲಾ ರಕ್ಷಣಾಧಿಕಾರಿ ಡಾ. ವಿಕ್ರಂ ಅಮಟೆ ಉಪಸ್ಥಿತಿ ಇರಲಿದ್ದಾರೆ ಎಂದರು.ವಿದ್ಯಾಸಂಸ್ಥೆಗೆ ಅಭಿನಂದನಾ ಪತ್ರಚಿಕ್ಕಮಗಳೂರು ನಗರದ ಗೌರಿ ಕಾಲುವೆಯಲ್ಲಿ 2002 ರಲ್ಲಿ ಸ್ಥಾಪನೆಗೊಂಡ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿ ಗಳಿಗೆ ಉತ್ತಮ ಶಿಕ್ಷಣ ನೀಡಲಾಗುತ್ತಿದ್ದು, ವಿದ್ಯಾಭಾರತಿ ಆಂಗ್ಲ ಮಾಧ್ಯಮ ಶಾಲೆ ಸತತವಾಗಿ ಮೂರು ವರ್ಷಗಳ ಕಾಲ ಎಸ್ಎಸ್ಎಲ್‌ಸಿಯಲ್ಲಿ ಶೇ. 100 ರಷ್ಟು ಫಲಿತಾಂಶ ಪಡೆದಿದೆ. ಈ ಕಾರಣಕ್ಕಾಗಿ ಶಿಕ್ಷಣ ಇಲಾಖೆ ಸೆ. 8 ರಂದು ನಡೆದ ಸಮಾರಂಭದಲ್ಲಿ ಅಭಿನಂದನಾ ಪತ್ರ ನೀಡಿ ಪ್ರಶಂಸಿದೆ ಎಂದು ಹೇಳಿದರು.ಪ್ರಶಸ್ತಿ ಪ್ರದಾನ
ತಮ್ಮ ಮಾಲೀಕತ್ವದ ವಿಸ್ಟಾರ್ ವೆಲ್ನೆಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ 2019 ರಲ್ಲಿ ಸ್ಥಾಪನೆ ಮಾಡಲಾಗಿದ್ದು, ವ್ಯಾಪಾರ ವಲಯದಲ್ಲಿ ಉತ್ತಮ ಸಾಧನೆ ಮಾಡಿದೆ. ಈ ಕಾರಣಕ್ಕಾಗಿ ಏಷ್ಯಾಟುಡೇ ಸಂಸ್ಥೆ ಸೆ. 25 ರಂದು ಲಂಡನ್‌ನ ಹೌಸ್ ಆಫ್ ಲಾರ್ಡ್ಸ್ ನಲ್ಲಿ ನಡೆಯಲಿರುವ ಗ್ಲೋಬಲ್ ಲೀಡರ್ಸ್ ಶೃಂಗ- 2005 ರ ಸಮಾರಂಭದಲ್ಲಿ ವೆಲ್ಸೆಸ್ ಉತ್ಪನ್ನಗಳ ಪ್ರಮುಖ ತಯಾರಕರು ಪ್ರಶಸ್ತಿ ನೀಡಿ ಗೌರವಿಸಲಿದೆ ಎಂದರು.ಸುದ್ಧಿಗೋಷ್ಠಿಯಲ್ಲಿ ವಿದ್ಯಾಭಾರತಿ ಆಂಗ್ಲ ಪ್ರೌಢಶಾಲೆ ಮುಖ್ಯೋಪಾಧ್ಯಾಯಿನಿ ಸಾಹಿರಾ ಫಾತಿಮಾ, ವಿಸ್ಟಾರ್ ವೆಲ್ನೆಸ್ ಪ್ರೈ.ಲೀ.ನ ಪ್ರಧಾನ ವ್ಯವಸ್ಥಾಪಕ ಎಂ.ಆರ್. ಸೋಮಶೇಖರ್, ಹಣಕಾಸು ವಿಭಾಗದ ಮುಖ್ಯಸ್ಥ ಸಿ.ಆರ್. ಮಂಜುನಾಥ್ ಉಪಸ್ಥಿತರಿದ್ದರು. 18 ಕೆಸಿಕೆಎಂ 1ಚಿಕ್ಕಮಗಳೂರು ಪ್ರೆಸ್ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಡಾ. ಅಫ್ಸರ್ ಹಿಂದೂಸ್ತಾನಿ ಅವರು ಮಾತನಾಡಿದರು. ಸಾಹಿರಾ ಫಾತಿಮಾ, ಎಂ.ಆರ್. ಸೋಮಶೇಖರ್, ಸಿ.ಆರ್. ಮಂಜುನಾಥ್ ಇದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))