ಕೆಎಚ್‌ಡಿಸಿ ನಿಗಮ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಶಿವಲಿಂಗ ಟಿರಕಿ

| Published : Oct 16 2024, 12:52 AM IST

ಕೆಎಚ್‌ಡಿಸಿ ನಿಗಮ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ: ಶಿವಲಿಂಗ ಟಿರಕಿ
Share this Article
  • FB
  • TW
  • Linkdin
  • Email

ಸಾರಾಂಶ

ಹಿಂದಿನ ಸರಕಾರದ ಅವಧಿಯಲ್ಲಿ ಕೆಎಚ್‌ಡಿಸಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದರ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಗೋಕಾಕ

ಹಿಂದಿನ ಸರಕಾರದ ಅವಧಿಯಲ್ಲಿ ಕೆಎಚ್‌ಡಿಸಿ ನಿಗಮದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದರ ಸಂಪೂರ್ಣ ತನಿಖೆಯಾಗಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು.

ನೇಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬಣಹಟ್ಟಿಯಿಂದ ಹುಬ್ಬಳಿಯವರೆಗೆ ಹಮ್ಮಿಕೊಂಡ ಸ್ವಾಭಿಮಾನಿ ನೇಕಾರರ ಪಾದಯಾತ್ರೆಯ ನೇತೃತ್ವ ವಹಿಸಿ ವೃತ್ತಿಪರ ನೇಕಾರರ ಹಕ್ಕೊತ್ತಾಯಗಳ ಈಡೇರಿಕೆಗೆ ಸೋಮವಾರ ಪಾದಯಾತ್ರೆ ಮೂಲಕ ಆಗಮಿಸಿ ತಹಸೀಲ್ದಾರ್‌ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿ ಮಾತನಾಡಿದರು.

ಹಿಂದಿನ ಸರ್ಕಾರದ ಅವಧಿಯಲ್ಲಿ ಕೆಎಚ್‌ಡಿಸಿ ನಿಗಮದಲ್ಲಿ ನಡೆದ ಅವ್ಯವಹಾರದ ಮರು ತನಿಖೆಯಾಗಬೇಕು. ಅಧಿಕಾರಿಗಳಿಗೆ ಶಿಕ್ಷೆಯಾದರೆ ಸಾಲದು. ಅದರಲ್ಲಿ ಭಾಗಿಯಾದ ಜನಪ್ರತಿನಿಧಿಗಳಿಗೂ ಕಠಿಣ ಶಿಕ್ಷೆಯಾಗಬೇಕು. ರಾಜ್ಯ ಮತ್ತು ಕೇಂದ್ರ ಸರಕಾರಗಳು ನೇಕಾರಿಕೆ ಉಳಿಸಲು ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ವೃತ್ತಿಪರ ನೇಕಾರರಿಗೆ ಕಾರ್ಮಿಕ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಲ್ಲಪ್ಪ ಬಾಗೇವಾಡಿ, ರಮೇಶ ಮರಿಜಾಡರ, ಸೋಮಲಿಂಗ ಬಾಗೇವಾಡಿ, ಅಜೀತ ನವಲಾಯಿ, ರವಿ ಮರಿಜಾಡರ, ಜಗದೀಶ ಗುಲ್ಲ, ಅಶೋಕ ಗುಲ್ಲ ಇತರರು ಇದ್ದರು.