ಎಷ್ಟೇ ಪ್ರಬಲ ವ್ಯಕ್ತಿ ಭಾಗಿಯಾಗಿದ್ದರೂ ಶಿಕ್ಷೆ : ಸಚಿವ ಭೈರತಿ ಸುರೇಶ್‌

| Published : Jun 20 2024, 01:08 AM IST

ಎಷ್ಟೇ ಪ್ರಬಲ ವ್ಯಕ್ತಿ ಭಾಗಿಯಾಗಿದ್ದರೂ ಶಿಕ್ಷೆ : ಸಚಿವ ಭೈರತಿ ಸುರೇಶ್‌
Share this Article
  • FB
  • TW
  • Linkdin
  • Email

ಸಾರಾಂಶ

ಚಿಕ್ಕಮಗಳೂರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಷ್ಟೇ ಪ್ರಬಲ ವ್ಯಕ್ತಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎಷ್ಟೇ ಪ್ರಬಲ ವ್ಯಕ್ತಿ ಭಾಗಿಯಾಗಿದ್ದರೂ ಅವರಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ರಾಜ್ಯ ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಹೇಳಿದ್ದಾರೆ.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೇಣುಕಾಸ್ವಾಮಿ ಕುಟುಂಬಕ್ಕೆ ಅನ್ಯಾಯವಾಗಿದೆ. ಸಿದ್ದರಾಮಯ್ಯ ಸರ್ಕಾರ ಯಾರಿಗೂ ಕಿಂಚಿತ್ತೂ ಅನ್ಯಾಯವಾಗಲು ಬಿಡಲ್ಲ. ಸರ್ಕಾರಕ್ಕೆ ಜನರ ಬಗ್ಗೆ ಬಹಳ ಬದ್ಧತೆ ಇದೆ. ಎಷ್ಟೇ ಪ್ರಬಲವ್ಯಕ್ತಿ ಇಂತಹಾ ಕುಕೃತ್ಯದಲ್ಲಿ ಭಾಗಿಯಾಗಿದ್ರು ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದರು.ಸರ್ಕಾರ ಅವರಿಗೆ ಯಾವ ರೀತಿ ಸಹಾಯ ಮಾಡೋದು ಅಂತ ಚರ್ಚೆ ಮಾಡ್ತೀವಿ. ಈಗಾಗಲೇ ಕೆಲವರು ಹಣಕಾಸಿನ ಸಹಾಯ ಮಾಡಿದ್ದಾರೆ. ಗೃಹ ಸಚಿವರು ಕೂಡ ಅವರ ಮನೆಗೆ ಭೇಟಿ ನೀಡಿದ್ದಾರೆ. ರೇಣುಕಾ ಸ್ವಾಮಿ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಬೇಡಿಕೊಳ್ತಿವಿ ಎಂದು ಹೇಳಿದರು.15 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಎಲ್ಲವೂ ಗೊತ್ತಿದೆ. ಬಿಜೆಪಿ ಮುಖಂಡರನ್ನು ಕೇಳಿ ಬೆಲೆ ಏರಿಕೆ ಅಥವಾ ಇಳಿಕೆ ಮಾಡು ಅವಶ್ಯಕತೆ ಇಲ್ಲ ಎಂದು ಹೇಳಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಸಣ್ಣ ವಿಷಯ ಬಿಜೆಪಿಯವರಿಗೆ ಬೇರೆ ಏನೂ ಕೆಲಸ ಇಲ್ಲದೆ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.ಸುತ್ತಮುತ್ತಲ ರಾಜ್ಯಕ್ಕಿಂತ ನಮ್ಮ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ಜನರಿಗೆ ಒಳ್ಳೆಯದನ್ನು ಮಾಡ ಬೇಕು ಎಂಬ ಆಸೆ ಇರುವುದು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ. ಕೇಂದ್ರ ಸರ್ಕಾರ ಬೆಲೆ ಏರಿಕೆ ಮಾಡಿದಾಗ ಬಿಜೆಪಿಯವರು ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ ಅವರು, ಗ್ಯಾರಂಟಿ ಯೋಜನೆಗಳಿಗೆ 60 ಸಾವಿರ ಕೋಟಿ ಬೇಕಿದೆ. ತೈಲ ಬೆಲೆ ಏರಿಕೆಯಿಂದ ಗರಿಷ್ಠ 3 ಸಾವಿರ ಕೋಟಿ ನಿರೀಕ್ಷೆ ಮಾಡಲಾಗಿದೆ ಎಂದರು.ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಿಷ್ಠಾವಂತ ಕಾರ್ಯಕರ್ತರನ್ನು ನೇಮಿಸುವ ಬಗ್ಗೆ ಇನ್ನೊಂದು ವಾರದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.