ಸಾರಾಂಶ
. ಇದೇ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು, ವಿಶೇಷ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೆಯೇ ಪ್ರಾಂಶುಪಾಲರಾಗಿ ನಿವೃತ್ತರಾದ ಡಾ. ರಾಘವೇಂದ್ರ ಎ. ಅವರನ್ನು ಸನ್ಮಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಇಲ್ಲಿನ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ (ಸ್ವಾಯತ್ತ)ದ ೬೪ನೇ ಕಾಲೇಜು ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು.ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಯುಎಸ್ಎಎಂಇಸಿ ಅಧ್ಯಕ್ಷ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅಧ್ಯಕ್ಷತೆ ವಹಿಸಿ, ಪಂಚೇಂದ್ರಿಯ ಗ್ರಹಿತ ಜ್ಞಾನ ದತ್ತವಾಗಬೇಕು ಎಂದು ಹೇಳಿದರು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪುತ್ತೂರಿನ ವಿವೇಕನಂದ ಕಾಲೇಜು (ಸ್ವಾಯತ್ತ)ನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಶ್ರೀಪತಿ ಕಲ್ಲೂರಾಯ ಭಾಗವಹಿಸಿದ್ದರು. ಕೋಶಾಧಿಕಾರಿ ಸಿಎ ಪ್ರಶಾಂತ್ ಹೊಳ್ಳ, ವಿಶೇಷ ಅಧಿಕಾರಿ ವಸಂತ ರವಿಪ್ರಕಾಶ್ ಉಪಸ್ಥಿತರಿದ್ದರು.ಪ್ರಾಂಶುಪಾಲ ಡಾ. ರಾಮು ಎಲ್., ಕಾಲೇಜಿನ ವಾರ್ಷಿಕ ವರದಿಯನ್ನು ವಾಚಿಸಿದರು. ಇದೇ ಸಂದರ್ಭದಲ್ಲಿ ೨೦೨೨-೨೩ ನೇ ಸಾಲಿನಲ್ಲಿ ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು, ವಿಶೇಷ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ಹಾಗೆಯೇ ಪ್ರಾಂಶುಪಾಲರಾಗಿ ನಿವೃತ್ತರಾದ ಡಾ. ರಾಘವೇಂದ್ರ ಎ. ಅವರನ್ನು ಸನ್ಮಾನಿಸಲಾಯಿತು.
ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿಗಳಾದ ಡಾ. ಜಿ.ಎಸ್. ಚಂದ್ರಶೇಖರ್ ಸ್ವಾಗತಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಡಾ. ರಮೇಶ್ ಟಿ.ಎಸ್. ವಂದಿಸಿದರು. ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಾನುಷ್ ಎಂ. ಕೋಟ್ಯಾನ್, ಕಾರ್ಯದರ್ಶಿಗಳಾದ ನಿಕ್ಷಿತಾ ಸಿ., ಅಮೃತಾ ಪಿ. ಭಟ್, ಚೇತನಾ ಪೈ ಕೆ. ವೇದಿಕೆಯಲ್ಲಿದ್ದರು.