ಸಾರಾಂಶ
- ವಿವಿಧ ಶಾಸ್ತ್ರೀಯ ನೃತ್ಯಗಳು, ನೃತ್ಯರೂಪಕ ಪ್ರದರ್ಶನ - - - ದಾವಣಗೆರೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ನಮನ ಅಕಾಡೆಮಿ ಸಹಯೋಗದಲ್ಲಿ ನಗರದ ಬಾಪೂಜಿ ಸಭಾಂಗಣದಲ್ಲಿ ಫೆ.9ರಂದು ಪೂರ್ವ ರಂಗನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಉಪಾಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಾವಣಗೆರೆಯ ಮಕ್ಕಳಿಗೆ ನೃತ್ಯ, ಸಂಗೀತ ಇತರೆ ಸಾಂಸ್ಕೃತಿಕ ಕಲೆಗಳ ಪರಿಚಯಿಸುವ ಜೊತೆಗೆ, ಕಲಿಸಿಕೊಡುವ ನಿಟ್ಟಿನಲ್ಲಿ ನಮನ ಅಕಾಡೆಮಿ ಕಾರ್ಯನಿರ್ವಹಿಸುತ್ತದೆ ಎಂದು ತಿಳಿಸಿದರು.ಭಾನುವಾರ ಸಂಜೆ 6 ಗಂಟೆಗೆ ನಡೆಯುವ ವೇದಿಕೆ ಕಾರ್ಯಕ್ರಮದಲ್ಲಿ ಬೆಂಗಳೂರಿನ ನಾಟ್ಯ ನಿನಾದ ಅಕಾಡೆಮಿ ನಿರ್ದೇಶಕ ಧರಣಿ ಟಿ. ಕಶ್ಯಪ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ಟಿ. ಗಾಯತ್ರಿ, ನಗರಸಭೆ ಮಾಜಿ ಅಧ್ಯಕ್ಷ ಆರ್.ಎಚ್. ನಾಗಭೂಷಣ ಇತರರು ಭಾಗವಹಿಸುವರು. ಡಾ. ಎ.ಎಂ. ಶಿವಕುಮಾರ್ ಅಧ್ಯಕ್ಷತೆ ವಹಿಸುವರು ಎಂದರು.
ಅಕಾಡೆಮಿ ಕಾರ್ಯದರ್ಶಿ ಮಾಧವಿ ಮಾತನಾಡಿ, ಪೂರ್ವ ರಂಗನಮನ ವಿಶೇಷ ಕಾರ್ಯಕ್ರಮವಾಗಿದೆ. ಶಾಸ್ತ್ರೀಯ ನೃತ್ಯದ ಮುನ್ನವೇ ಮಕ್ಕಳು ಗೆಜ್ಜೆಪೂಜೆ ಕಟ್ಟಿಕೊಂಡು ರಂಗಪ್ರವೇಶ ಮಾಡುವರು. ಮೊದಲ ಬಾರಿಗೆ ಶಾಸ್ತ್ರೋಕ್ತವಾಗಿ ನೃತ್ಯ ಕ್ಷೇತ್ರದಲ್ಲಿ ಪ್ರವೇಶಿಸುವ ಮುನ್ನ ನಡೆಯುವ ಕಾರ್ಯಕ್ರಮ ಇದಾಗಿದೆ ಎಂದು ತಿಳಿಸಿದರು.ವೇದಿಕೆ ಕಾರ್ಯಕ್ರಮದ ನಂತರ ವಿವಿಧ ಶಾಸ್ತ್ರೀಯ ನೃತ್ಯಗಳು ಮತ್ತು ನೃತ್ಯರೂಪಕ ಶ್ರೀ ಕೃಷ್ಣ ವಿಲಾಸಂ (ಕೃಷ್ಣನ ಲೀಲೆಗಳು) ಹಾಗೂ ಋತು ಹಿರೇಮಠ ಮತ್ತು ತಂಡದಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನ ನಡೆಯಲಿದೆ ಎಂದು ತಿಳಿಸಿದರು.
ನಮನ ಅಕಾಡೆಮಿ ಅಧ್ಯಕ್ಷ ಕೆ.ಎನ್.ಗೋಪಾಲ ಕೃಷ್ಣ, ಮಂಜುಳಾ, ಟಿ.ಯುವರಾಜ ಇದ್ದರು.- - - -7ಕೆಡಿವಿಜಿ38.ಜೆಪಿಜಿ:
ದಾವಣಗೆರೆಯಲ್ಲಿ ನಮನ ಅಕಾಡೆಮಿ ವತಿಯಿಂದ ಪೂರ್ವ ರಂಗ ನಮನ ಕಾರ್ಯಕ್ರಮ ಆಯೋಜಿಸಿರುವ ಕುರಿತು ದಿನೇಶ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.