ಹರೀಶಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಿ

| Published : Feb 18 2024, 01:30 AM IST

ಹರೀಶಿ ವ್ಯಾಪ್ತಿಯಲ್ಲಿ ಅಕ್ರಮ ಮದ್ಯಕ್ಕೆ ಕಡಿವಾಣ ಹಾಕಿ
Share this Article
  • FB
  • TW
  • Linkdin
  • Email

ಸಾರಾಂಶ

ಅಕ್ರಮ ಮದ್ಯ ಮಾರಾಟ ತಡೆಗಟ್ಟುವಂತೆ ಆಗ್ರಹಿಸಿ ಸೊರಬ ತಾಲೂಕಿನ ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ದ್ಯಾವಾಸ, ಹರೀಶಿ ಸರ್ಕಲ್ ಹಾಗೂ ಶ್ರಿನಗರ ಗ್ರಾಮದ ಶ್ರೀ ಭೂತೇಶ್ವರ ಯುವಕ ಸಂಘ, ಸ್ತ್ರೀಶಕ್ತಿ ಸಂಘ, ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರು ಶನಿವಾರ ಪಟ್ಟಣದ ಅಬಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಸೊರಬ

ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟುವಂತೆ ಆಗ್ರಹಿಸಿ ತಾಲೂಕಿನ ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕ ದ್ಯಾವಾಸ, ಹರೀಶಿ ಸರ್ಕಲ್ ಹಾಗೂ ಶ್ರಿನಗರ ಗ್ರಾಮದ ಶ್ರೀ ಭೂತೇಶ್ವರ ಯುವಕ ಸಂಘ, ಸ್ತ್ರೀಶಕ್ತಿ ಸಂಘ, ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರು ಶನಿವಾರ ಪಟ್ಟಣದ ಅಬಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಹರೀಶಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವುದೇ ಭಯವಿಲ್ಲದೇ ಕೆಲವು ಕಿರಾಣಿ, ಗೂಡಂಗಡಿ, ಮನೆ, ಹೊಟೇಲ್‌ಗಳಲ್ಲಿ ಅವ್ಯಾಹತವಾಗಿ ಮದ್ಯ ಮಾರಾಟ ಚಟುವಟಿಕೆಗಳು ನಡೆಯುತ್ತಿವೆ. ಅಲ್ಲದೇ, ಮದ್ಯ ಖರೀದಿಸಲು ಅಕ್ಕಪಕ್ಕದ ಗ್ರಾಮಗಳ ಮದ್ಯ ವ್ಯಸನಿಗಳು ಗ್ರಾಮಕ್ಕೆ ಬರುತ್ತಾರೆ. ಇದರಿಂದ ಗ್ರಾಮದಲ್ಲಿ ಹೆಂಗಸರು, ಮಕ್ಕಳು ರಸ್ತೆಯಲ್ಲಿ ಓಡಾಡುವುದಕ್ಕೆ ಮುಜುಗರ ಪಟ್ಟಕೊಳ್ಳುವ ವಾತಾವರಣ ನಿರ್ಮಾಣವಾಗಿದೆ. ಗ್ರಾಮದಲ್ಲಿ ಅಕ್ರಮವಾಗಿ ನಡೆಯುತ್ತಿರುವ ಮದ್ಯ ನಿಷೇಧಕ್ಕೆ ಆಗ್ರಹಿಸಿ ಗ್ರಾಮಸ್ಥರು ಹಲವು ಬಾರಿ ಹೋರಾಟ ನಡೆಸಿ, ಮನವಿ ಸಲ್ಲಿಸಿದರು. ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಮಹಿಳೆಯರು ಆಕ್ರೋಶವ್ಯಕ್ತಪಡಿಸಿದರು.

ಅಧಿಕಾರಿಗಳು ಅಕ್ರಮ ಮದ್ಯ ಮಾರಾಟ ಚಟುವಟಿಕೆದಾರರ ವಿರುದ್ಧ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು. ಗ್ರಾಪಂ ವ್ಯಾಪ್ತಿಗೆ ಬರುವ ಮದ್ಯದ ಅಂಗಡಿಗಳನ್ನು ಕೂಡಲೇ ಮುಚ್ಚಿಸಬೇಕು ಎಂದು ಶ್ರೀ ಭೂತೇಶ್ವರ ಯುವಕ ಸಂಘ, ಸ್ತ್ರೀ ಶಕ್ತಿ ಸಂಘ, ಸ್ವಸಹಾಯ ಸಂಘಗಳ ಒಕ್ಕೂಟದ ಮಹಿಳೆಯರು ಆಗ್ರಹಿಸಿದರು. ನಿರ್ಲಕ್ಷ್ಯ ಅನುಸರಿಸಿದರೆ ಫೆ.23ರಂದು ಹರೀಶಿ ಗ್ರಾಮ ಪಂಚಾಯಿತಿ ಎದುರು ಮತ್ತು ಹರೀಶಿ ಸರ್ಕಲ್‌ನಲ್ಲಿ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಅಬಕಾರಿ ನಿರೀಕ್ಷಕ ಶ್ರೀನಾಥ ಅವರಿಗೆ ಮನವಿ ಸಲ್ಲಿಸಲಾಯಿತು. ಒಕ್ಕೂಟದ ಅನುಪಮಾ, ರಷಿದಾ ಭಾನು, ನಾಗರತ್ನ, ಶಾರದಾ, ಜಯಶ್ರೀ, ಕಲಾ, ಗೌರಮ್ಮ, ಅನುರಾಧ, ಸುಮಲತಾ, ಗ್ರಾಮಸ್ಥರಾದ ಶಂಕರ, ಗಣೇಶ್, ರತ್ನಾಕರ ಮೊದಲಾದವರಿದ್ದರು.

- - - -17ಕೆಪಿಸೊರಬ02:

ಅಬಕಾರಿ ಕಚೇರಿ ಎದುರು ಮಹಿಳೆಯರು, ಗ್ರಾಮಸ್ಥರು ಪ್ರತಿಭಟಿಸಿದರು.