ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕಿ

| Published : Aug 25 2025, 01:00 AM IST

ಸಾರಾಂಶ

ದೊಡ್ಡಬಳ್ಳಾಪುರ: ನಗರದ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಸಾಮಾನ್ಯ ಜನರ ಕೈಗೆ ಸಿಗದೆ ಪರದಾಡುವ ಪರಿಸ್ಥಿತಿ ಇದೆ. ಇದಕ್ಕೆ ಕಡಿವಾಣ ಹಾಕಿ ಜನಸಾಮಾನ್ಯರ ಕೆಲಸಗಳು ಸುಗಮವಾಗಿ ಆಗುವಂತೆ ಮಾಡಬೇಕಿದೆ

ದೊಡ್ಡಬಳ್ಳಾಪುರ: ನಗರದ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಸಾಮಾನ್ಯ ಜನರ ಕೈಗೆ ಸಿಗದೆ ಪರದಾಡುವ ಪರಿಸ್ಥಿತಿ ಇದೆ. ಇದಕ್ಕೆ ಕಡಿವಾಣ ಹಾಕಿ ಜನಸಾಮಾನ್ಯರ ಕೆಲಸಗಳು ಸುಗಮವಾಗಿ ಆಗುವಂತೆ ಮಾಡಬೇಕಿದೆ ಎಂದು ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ ಅವರಿಗೆ ಮನವಿ ಸಲ್ಲಿಸಲಾಯಿತು.ಈ ವೇಳೆ ಮಾತನಾಡಿದ ರಾಜ್ಯ ವಿಕರವೇ ಸಂಸ್ಥಾಪಕ ಅಧ್ಯಕ್ಷ ಎ.ನಂಜಪ್ಪ, ದೊಡ್ಡಬಳ್ಳಾಪುರ ತಾಲೂಕು ಆಡಳಿತ ಕಚೇರಿಯಲ್ಲಿ ತಹಶೀಲ್ದಾರ್, ಉಪವಿಭಾಗಾಧಿಕಾರಿಗಳ ಕಚೇರಿ ಕಾರ್ಯನಿರ್ವಹಿಸುತ್ತಿದೆ. ಆದರೆ, ಈ ಎರಡೂ ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ ಮಿತಿಮೀರಿದೆ. ತಮ್ಮ ಕೆಲಸಗಳ ಕಾರಣ ಇಲ್ಲಿಗೆ ಬರುವ ಸಾಮಾನ್ಯ ಜನರನ್ನು ದಿಕ್ಕುತಪ್ಪಿಸಿ, ವಂಚಿಸಿ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಅಲ್ಲದೆ, ತಾಲೂಕು ಕಚೇರಿಯಲ್ಲಿ ಲಂಚವಿಲ್ಲದೆ ಯಾವ ಸರ್ಕಾರಿ ಕೆಲಸಗಳು ನಡೆಯುವುದಿಲ್ಲ ಎಂದು ನೂರಾರು ದೂರುಗಳನ್ನು ಸಾರ್ವಜನಿಕರು ನಮ್ಮ ಸಂಘಟನೆಗೆ ನೀಡಿದ್ದಾರೆ ಇದಕ್ಕೆ ಕಡಿವಾಣ ಹಾಕಲು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಬಿ. ನಯಾಜ್ ಖಾನ್, ಸೋಮರಾಜು, ಗಂಗರಾಜಪ್ಪ ಮಂಜುನಾಥ್, ಪ್ರವೀಣ್ ಕುಮಾರ್, ಚಂದ್ರ, ಕುಮುದಾ, ಶಶಿಕಲಾ, ರಾಗಿಣಿ, ನಾಗರತ್ನಮ್ಮ, ನಾಗಮಣಿ, ರಮೇಶ್ ಮತ್ತಿತರರಿದ್ದರು.

24ಕೆಡಿಬಿಪಿ4- ದೊಡ್ಡಬಳ್ಳಾಪುರ ತಾಲೂಕು ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿಗೆ ಕಡಿವಾಣ ಹಾಕುವಂತೆ ಒತ್ತಾಯಿಸಿ ರಾಜ್ಯ ವಿಜಯ ಕರ್ನಾಟಕ ರಕ್ಷಣಾ ವೇದಿಕೆಯಿಂದ ಉಪವಿಭಾಗಾಧಿಕಾರಿ ಎನ್.ದುರ್ಗಾಶ್ರೀ ಅವರಿಗೆ ಮನವಿ ಸಲ್ಲಿಸಲಾಯಿತು.