ಕನ್ನಡಪ್ರಭ ವಾರ್ತೆ ಕಾಗವಾಡ

ರಾಜ್ಯ ಬಜೆಟ್‌ನಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ನಿಷೇಧ ಮಾಡಿದ್ದು ಸಂತಸ ತಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆಗಳನ್ನು ಸಲ್ಲಿಸಿಸಲಾಗುವುದೆಂದು ಬಿಡಿಸಿಸಿ ಬ್ಯಾಂಕ್‌ ನಾಮನಿರ್ದೇರ್ಶಿತ ಸದಸ್ಯೆ ಸುನಿತಾ ಐಹೋಳೆ ಹೇಳಿದರು.

ಕಾಗವಾಡ ಪಟ್ಟಣದಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊಬೈಲ್‌ನಿಂದ ಚಿಕ್ಕ ಮಕ್ಕಳು ಹಿಡಿದು ದೊಡ್ಡಮಕ್ಕಳವರೆಗೂ ಗೇಮ್,ಇನ್‌ಸ್ಟಾಗ್ರಾಮ್‌, ವಾಟ್ಸಪ್ ಅಂತ ಇನ್ನಿತರ ಸೋಶಿಯಲ್ ಮೀಡಿಯಾದಲ್ಲಿ ಮಗ್ನರಾಗುತ್ತಿದ್ದಾರೆ. ಇದನ್ನು ಕಂಡು ಪೋಷಕರು ತಮ್ಮ ದುಃಖವನ್ನು ವ್ಯಕ್ತಪಡಿಸಿದರು. ಹಲವು ತಾಯಂದಿರು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ರಾಜ್ಯ ಸರ್ಕಾರ ಕೈಗೊಂಡಂತ ಈ ಒಂದು ಬಜೆಟ್ ನಲ್ಲಿ ಮೊಬೈಲ್ ಬ್ಯಾನ್ ಮಾಡಿದ್ದು, ತುಂಬಾ ಸಂತೋಷವಾಗಿದೆ ಎಂದು ತಿಳಿಸಿದರು.