ಸಾರಾಂಶ
ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯದ ಎಲ್ಲಾ ಮಹಿಳೆಯರು ಸಂಮೃದ್ಧಿ ಜೀವನ ನಡೆಸಲು ಲಾಟರಿ ನಿಷೇಧ, ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಜನ ಪರ ಕೆಲಸಗಳನ್ನು ಮಾಡಿದ್ದಾರೆ. ಸಮನ್ವಯದಿಂದ ಪ್ರಧಾನಿ ಮೋದಿ ಕೈ ಬಲಪಡಿಸಲು ಮಂಡ್ಯ ಜಿಲ್ಲೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸಬೇಕು.
ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಸ್ವ ಪ್ರತಿಷ್ಠೆ ಬದಿಗೊತ್ತಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಗೆಲ್ಲಿಸಲು ಬಿಜೆಪಿ-ಜೆಡಿಎಸ್ ಪಕ್ಷದ ಎಲ್ಲಾ ಕಾರ್ಯಕರ್ತರು ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಬಿಜೆಪಿ ಮುಖಂಡ ಇಂಡುವಾಳು ಎಸ್. ಸಚ್ಚಿದಾನಂದ ಮನವಿ ಮಾಡಿದರು.ಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದ ಕಾರ್ಯಕರ್ತರೊಂದಿಗೆ ಮನೆ ಮನೆಗೆ ತೆರಳಿ ಜೆಡಿಎಸ್- ಬಿಜೆಪಿ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.
ದೇಶದಲ್ಲಿ 400ಕ್ಕೂ ಬಿಜೆಪಿ ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ದೇಶಕ್ಕೆ ನರೇಂದ್ರ ಮೋದಿ ಹಾಗೂ ಮಂಡ್ಯ ಜಿಲ್ಲೆಗೆ ಎಚ್.ಡಿ.ಕುಮಾರಸ್ವಾಮಿ ಎಂಬ ಘೋಷ ವಾಕ್ಯದೊಂದಿಗೆ ಸ್ಥಳೀಯ ಕಾರ್ಯಕರ್ತರಲ್ಲಿರುವ ಸ್ವ-ಪ್ರತಿಷ್ಠೆ ಬಿಟ್ಟು ಗೆಲುವಿಗೆ ಸಹಕರಿಸಬೇಕು ಎಂದು ಕೋರಿದರು.ಬಿಜೆಪಿ-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ರಾಜ್ಯದ ಎಲ್ಲಾ ಮಹಿಳೆಯರು ಸಂಮೃದ್ಧಿ ಜೀವನ ನಡೆಸಲು ಲಾಟರಿ ನಿಷೇಧ, ರೈತರ ಸಾಲ ಮನ್ನಾ ಸೇರಿದಂತೆ ಅನೇಕ ಜನ ಪರ ಕೆಲಸಗಳನ್ನು ಮಾಡಿದ್ದಾರೆ. ಸಮನ್ವಯದಿಂದ ಪ್ರಧಾನಿ ಮೋದಿ ಕೈ ಬಲಪಡಿಸಲು ಮಂಡ್ಯ ಜಿಲ್ಲೆಯಲ್ಲಿ ಎಚ್.ಡಿ ಕುಮಾರಸ್ವಾಮಿ ಗೆಲುವಿಗೆ ಶ್ರಮಿಸಬೇಕು ಎಂದು ಮನವಿ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಎಚ್‌ಡಿಕೆ ಅವರ ವ್ಯಕ್ತಿತ್ವದ ಮುಂದೆ ಸ್ಪರ್ಧಾಳುನೇ ಅಲ್ಲ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಇದೇ ರೀತಿ ಏ.26ರ ಸಂಜೆ ಮತದಾನ ಮುಗಿಯುವವರೆಗೆ ಒಗ್ಗಟ್ಟಾಗಿ ಚುನಾವಣೆ ಮಾಡಬೇಕು ಎಂದರು.ಶ್ರೀರಂಗಪಟ್ಟಣ ಕ್ಷೇತ್ರದಿಂದ ಕನಿಷ್ಠ 1 ಲಕ್ಷಕ್ಕೂ ಅಧಿಕ ಮತಗಳನ್ನು ನೀಡುವ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ನೀಡುವ ಮೂಲಕ ಭಾರೀ ಅಂತರದ ಗೆಲುವಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.
ಈ ವೇಳೆ ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸಂತೋಷ್, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಡಾ.ಸಿದ್ದರಾಮಯ್ಯ, ತಾಲೂಕು ಅಧ್ಯಕ್ಷ ಪೀಹಳ್ಳಿ ರಮೇಶ್, ಪುರಸಭಾ ಸದಸ್ಯರಾದ ಗಂಜಾಂ ಕೃಷ್ಣಪ್ಪ, ಎಸ್.ಪ್ರಕಾಶ್, ಎಸ್.ಟಿ ರಾಜು, ಶ್ರೀ ರಂಗನಾಥಸ್ವಾಮಿ ದೇವಾಲಯ ಸಮಿತಿ ಅಧ್ಯಕ್ಷ ಎಸ್.ರಘು, ಮುಖಂಡರಾದ ಉಮೇಶ್‌ಕುಮಾರ್, ಕುಬೇರ್‌ಸಿಂಗ್, ಸತ್ಯಪ್ಪ, ಚಂದನ್, ಸಾಗರ್, ಪುಟ್ಟರಾಜು, ಪುಟ್ಟರಾಮು, ಕಿರಣ್‌ಸಿಂಗ್, ಹೇಮಂತ್ ಸೇರಿದಂತೆ ನೂರಾರು ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಮನೆ ಮನೆಗೆ ತೆರಳಿ ಮತ ಯಾಚಿಸಿದರು.