ವಿದ್ಯಾರ್ಥಿಗಳಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಪ್ರಶಸ್ತಿ ಪ್ರದಾನ

| Published : Jun 17 2024, 01:31 AM IST

ವಿದ್ಯಾರ್ಥಿಗಳಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ ಪ್ರಶಸ್ತಿ ಪ್ರದಾನ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡ ವಿಷಯದಲ್ಲಿ ಶೇ.೧೦೦ ಅಂಕ ಪಡೆದ ೧೦೫ ವಿದ್ಯಾರ್ಥಿಗಳಿಗೆ ಮತ್ತು ೧೦ನೇ ತರಗತಿಯಲ್ಲಿ ೬೧೫ಕ್ಕಿಂತ ಹೆಚ್ಚು ಅಂಕ ಪಡೆದ ೧೧ ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ’ ನೀಡಲಾಯಿತು.

ಕನ್ನಡಪ್ರಭವಾರ್ತೆ ಪುತ್ತೂರು

ಪ್ರಯತ್ನ ಹಾಗೂ ಪರಿಶ್ರಮದಿಂದ ಉತ್ತಮ ಸಾಧನೆ ಮಾಡಬಹುದು ಎಂಬುದಕ್ಕೆ ಪುತ್ತೂರಿನ ಸಹಾಯಕ ಆಯುಕ್ತರಾದ ಜುಬಿನ್ ಮೋಹಪಾತ್ರ ನಮಗೆಲ್ಲ ಮಾದರಿಯಾಗಿದ್ದಾರೆ. ಅವರು ಯುಪಿಎಸ್ಸಿ ಪರೀಕ್ಷೆಯಲ್ಲಿ ಎರಡು ಬಾರಿ ತೇರ್ಗಡೆಯಾಗಿ ಐ.ಪಿ.ಎಸ್. ಅಧಿಕಾರಿಯಾಗಿ ನೇಮಕಗೊಂಡವರು, ಆದರೆ ತನ್ನ ತಾಯಿಯ ಆಸೆಯನ್ನು ಈಡೇರಿಸುವ ಸಲುವಾಗಿ ಮತ್ತೆ ಪರೀಕ್ಷೆ ಬರೆದು ಐ.ಎ.ಎಸ್. ಅಧಿಕಾರಿಯಾಗಿ ಯಶಸ್ಸನ್ನು ಕಂಡವರು. ವಿದ್ಯಾರ್ಥಿಗಳು ನಿರಂತರ ಪ್ರಯತ್ನ ಮತ್ತು ಪರಿಶ್ರಮದಿಂದ ಇಂತಹ ಸಾಧನೆ ಮಾಡಲು ಸಾಧ್ಯವಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.ಅವರು ತೆಂಕಿಲ ನರೇಂದ್ರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೦೨೩ -೨೪ ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿಕೊಂಡು, ಕನ್ನಡ ವಿಷಯದಲ್ಲಿ ಶೇ.೧೦೦ ಅಂಕ ಪಡೆದ ೧೦೫ ವಿದ್ಯಾರ್ಥಿಗಳಿಗೆ ಮತ್ತು ೧೦ನೇ ತರಗತಿಯಲ್ಲಿ ೬೧೫ಕ್ಕಿಂತ ಹೆಚ್ಚು ಅಂಕ ಪಡೆದ ೧೧ ವಿದ್ಯಾರ್ಥಿಗಳನ್ನು ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ‘ಕನ್ನಡ ಪ್ರತಿಭೆ ಪ್ರಶಸ್ತಿ’ ನೀಡಿ ಪುರಸ್ಕರಿಸಿ ಮಾತನಾಡಿದರು.ಕಾರ್ಯಕ್ರಮ ಉದ್ಘಾಟಿಸಿದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರ ಮಾತನಾಡಿ, ವಿದ್ಯಾರ್ಥಿಗಳು ಸದಾ ಸ್ಫೂರ್ತಿಯಿಂದ ಇರಬೇಕು. ಐಎಎಸ್, ಐಪಿಎಸ್ ಪರೀಕ್ಷೆ ದೇಶದಲ್ಲೇ ಅತ್ಯಂತ ಕಠಿಣವಾದ ಪರೀಕ್ಷೆಯಾಗಿದೆ. ವಿದ್ಯಾರ್ಥಿಗಳಲ್ಲಿ ಗುರಿ ಇರಲಿ. ಈ ಪರೀಕ್ಷೆಯಲ್ಲಿ ತೇರ್ಗಡೆ ಆಗದಿದ್ದರೂ ಇತರ ಅವಕಾಶ ತುಂಬಾ ಇದೆ ಎಂದರು.ಕನ್ನಡ ಸಾಹಿತ್ಯ ಪರಿಷತ್ ಪುತ್ತೂರು ತಾಲೂಕು ಅಧ್ಯಕ್ಷ ಪುತ್ತೂರು ಉಮೇಶ್ ನಾಯಕ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್., ಡಾ. ಮೈತ್ರಿ ಭಟ್ ಮಾತನಾಡಿದರು. ಉದ್ಯಮಿ ಚಂದ್ರನ್ ಹಾಗೂ ಮಹಿಳಾ ಕಾಲೇಜಿನ ಪ್ರಾಂಶುಪಾಲ ಗೋಪಾಲಕೃಷ್ಣ ವೇದಿಕೆಯಲ್ಲಿ ಉಪಸಿತರಿದ್ದರು.ಕನ್ನಡದಲ್ಲಿ ಶೇ. ೧೦೦ ಅಂಕ ಪಡೆದ ತಾಲೂಕಿನ ಒಟ್ಟು ೧೦೫ ವಿದ್ಯಾರ್ಥಿಗಳಿಗೆ ಹಾಗೂ ೧೦ನೇ ತರಗತಿಯಲ್ಲಿ ೬೧೫ ರ ಮೇಲ್ಪಟ್ಟು ಅಂಕ ಪಡೆದ ೧೧ ವಿದ್ಯಾರ್ಥಿಗಳನ್ನು ಕನ್ನಡ ಪ್ರತಿಭೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಕನ್ನಡ ಎಂಎಯಲ್ಲಿ ಪ್ರಥಮ ರ‍್ಯಾಂಕ್ ಪಡೆದ ಸೌಜನ್ಯ ಅವರನ್ನು ಸನ್ಮಾನಿಸಲಾಯಿತು. ಆಶಾ ಬೆಳ್ಳಾರೆ ಸನ್ಮಾನ ಕಾರ್ಯಕ್ರಮ ನಿರ್ವಹಿಸಿದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ್ ಪ್ರಾಸ್ತಾವಿಕ ಮಾತನಾಡಿದರು. ನರೇಂದ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಸಾದ್ ಶಾನ್ ಬೋಗ್ ಸ್ವಾಗತಿಸಿದರು. ರೇಣುಕಾ ಮತ್ತು ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.