ತಾಲೂಕಿನ ನಂಜೇದೇವನಪುರದಲ್ಲಿ 5 ಹುಲಿಗಳು ಪತ್ತೆಯಾದ ಪ್ರಕರಣ ಸಂಬಂಧ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ಅಧಿಕಾರಿಗಳು ಕೂಂಬಿಂಗ್ ನ್ನು ತೀವ್ರಗೊಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಾಲೂಕಿನ ನಂಜೇದೇವನಪುರದಲ್ಲಿ 5 ಹುಲಿಗಳು ಪತ್ತೆಯಾದ ಪ್ರಕರಣ ಸಂಬಂಧ ಬಿಳಿಗಿರಿರಂಗನಾಥ ದೇವಾಲಯ ಹುಲಿ ಸಂರಕ್ಷಿತ ಪ್ರದೇಶದ ಚಾಮರಾಜನಗರ ಬಫರ್ ವಲಯ ಅಧಿಕಾರಿಗಳು ಕೂಂಬಿಂಗ್ ನ್ನು ತೀವ್ರಗೊಳಿಸಿದ್ದಾರೆ.

ಕೂಂಬಿಂಗ್ ಕಾರ್ಯಾಚರಣೆಗಾಗಿ ನಂಜೇದೇವನಪುರ ಗ್ರಾಮದ ಕಲ್ಲು ಕ್ವಾರಿಯೊಂದರಲ್ಲಿ ಹುಲಿಗಳು ಇರುವಿಕೆ ಡ್ರೋಣ್ ನಲ್ಲಿ ಸೆರೆಯಾಗಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಚಾಮರಾಜನಗರ ತಾಲೂಕಿನ ನಂಜೇದೇವನಪುರದ ಕುಮಾರಸ್ವಾಮಿ ಎಂಬವರ ಜಮೀನಿನಲ್ಲಿ 5 ಹುಲಿ ಓಡಾಟ ಪತ್ತೆ ಪ್ರಕರಣ ಸಂಬಂಧ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದು ಎರಡು ದಿನ ಮೂರು ಗ್ರಾಮಗಳಲ್ಲಿ ನಿಷೇಧಾಜ್ಞೆ ಹೊರಡಿಸಿ ಚಾಮರಾಜನಗರ ತಹಸಿಲ್ದಾರ್ ಗಿರಿಜಾ ಆದೇಶಿಸಿದ್ದಾರೆ. ಚಾಮರಾಜನಗರ ತಾಲೂಕಿನ ನಂಜೇದೇವನಪುರ ಆನೆಮಡುವಿನ ಕೆರೆ ಪಕ್ಕದ ಕ್ವಾರಿ ಬಳಿ ಡ್ರೋನ್‌ ಕ್ಯಾಮರದಲ್ಲಿ ಐದು ಹುಲಿಗಳು ಸೆರೆಯಾದ ಹಿನ್ನೆಲೆ

ನಂಜೆದೇವನಪುರ ಸೇರಿ ಉಡಿಗಾಲ, ವೀರನಪುರ ಗ್ರಾಮಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಡಿ‌. 22 ಹಾಗೂ 23 ರಂದು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ

ಕಾರ್ಯಚರಣೆ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರೆಂದು ಕಟ್ಟೆಚ್ಚರ ವಹಿಸಲಾಗಿದ್ದು ಯಾರೂ ಗುಂಪು ಸೇರದಂತೆ ಹಾಗೂ‌ ಒಬ್ಬರೇ ಓಡಾಡದಂತೆ, ಕಾರ್ಯಾಚರಣೆ ವೇಳೆ ಜನರು ಮನೆಯಲ್ಲೇ ಇರುವಂತೆ ಆದೇಶಿಸಲಾಗಿದೆ‌.

ಹುಲಿ ಕಾರ್ಯಾಚರಣೆ ಹಿನ್ನೆಲೆ ಶಾಸಕ ಸಿ.ಪುಟ್ಟರಂಗಶೆಟ್ಟಿ ನಂಜೇದೇವನಪುರಕ್ಕೆ ಭೇಟಿ ನೀಡಿದ ಶಾಸಕರು ಖುದ್ದು ಪರಿಶೀಲನೆ ನಡೆಸಿದರು. 5 ಹುಲಿಗಳಿರುವ ಹಿನ್ನೆಲೆ ಸೆರೆ ಹಿಡಿಯಲು ಕಷ್ಟವಾಗಲಿದೆ. ಈ ಹಿನ್ನಲೆ, ಆನೆಗಳನ್ನು ಬಳಸಿಕೊಂಡು ಹುಲಿಗಳನ್ನು ಕಾಡಿಗೆ ಓಡಿಸುವ ಕೆಲಸ ಮಾಡುತ್ತೇವೆಂಬ ಅರಣ್ಯ ಇಲಾಖೆ ಮಾತಿಗೆ ರೈತರು ವಿರೋಧ ವ್ಯಕ್ತಪಡಿಸಿ ಹುಲಿಗಳನ್ನು ಕಾಡಿಗೆ ಅಟ್ಟಬಾರದು, ಸೆರೆ ಹಿಡಿಯಬೇಕೆಂದು ಒತ್ತಾಯಿಸಿದರು.

ರೈತರ ಸಮಸ್ಯೆ ಆಲಿಸಿ ಶಾಸಕರು ಸಿಎಂ ಸಿದ್ದರಾಮಯ್ಯಗೆ ಕರೆಮಾಡಿ, ನಂಜದೇವನಪುರದಲ್ಲಿ 5 ಹುಲಿ ಪ್ರತ್ಯಕ್ಷವಾದ ಬಳಿಕ ಜನರು ತೀರಾ ಆತಂಕಕ್ಕೆ ಒಳಗಾಗಿದ್ದಾರೆ‌. ಹೆಚ್ಚುವರಿ ವೈದ್ಯರು ಹಾಗೂ ತಜ್ಞರನ್ನು ಕಳುಹಿಸುವಂತೆ ಮನವಿ ಮಾಡಿದರು.

ಶಾಸಕ ಪುಟ್ಟರಂಗಶೆಟ್ಟಿ ಮಾತಿಗೆ ಸಹಮತ ನೀಡಿದ ಸಿಎಂ ಸಿದ್ದರಾಮಯ್ಯ, ಈಗಲೇ ಅರಣ್ಯ ಸಚಿವರ ಜೊತೆ ಮಾತನಾಡುತ್ತೇನೆಂದು ಭರವಸೆ ಕೊಟ್ಟರು.

ಸಿಎಂ ಜೊತೆ ಮಾತನಾಡಿದ ಬಳಿಕ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೂ ಕರೆ ಮಾಡಿ ಸಮಸ್ಯೆ ಹೇಳಿದ ಶಾಸಕರಿಗೆ ಕೂಡಲೇ ಒಂದು ಟೀಂ ಕಳುಹಿಸಿಕೊಡುತ್ತೇನೆ ಎಂದರು.