ಸಾರಾಂಶ
ಕನ್ನಡಪ್ರಭ ವಾರ್ತೆ ಚಾಮರಾಜನಗರ
ತಾಲೂಕಿನ ಮಂಗಲ ಹಾಗೂ ಬೋಗಾಪುರ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.ಮಂಗಲ, ಮಂಗಲ ಹೊಸೂರು, ಹುಲ್ಲೇಪುರ, ಮಹಾಂತಾಳಪುರ, ಕರಡಿಮೋಳೆ, ಯಡಿಯೂರು, ಸಪ್ಪಯ್ಯನಪುರ, ಬೋಗಾಪುರ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ೨ ಅವಧಿಯಲ್ಲಿ ನಮ್ಮ ಚಾಮರಾಜನಗರ ಜಿಲ್ಲೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದರು. ನುಡಿದಂತೆ ನಡೆದ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ ಎಂದರು. ಅನ್ನಭಾಗ್ಯ, ಶಕ್ತಿ ಯೋಜನೆ, ಯುವನಿಧಿ, ಗೃಹಜ್ಯೋತಿ, ಗೃಹಲಕ್ಷ್ಮಿ ಈ ಐದು ಗ್ಯಾರೆಂಟಿಗಳನ್ನು ಸಮರ್ಪಕವಾಗಿ ಜಾರಿಮಾಡಿರುವಂತಹ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರವೇ. ಯಾವಾಗಲೂ ಕೂಡಾ ಜನಪರವಾಗಿ, ಬಡವರ ಪರವಾಗಿರುವ ಪಕ್ಷವಾಗಿದೆ. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು. ನಮ್ಮ ಕಾಂಗ್ರೆಸ್ ಪಕ್ಷದಿಂದ ಚಾಮರಾಜನಗರ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಅವರು ಸ್ಪರ್ಧಿಸಿದ್ದು, ನಿಮ್ಮ ಎಲ್ಲರ ಸಹಕಾರ ನೀಡಿ, ತಮ್ಮ ಮತಗಳನ್ನು ನೀಡುವ ಮೂಲಕ ಅವರನ್ನು ಅತ್ಯಧಿಕ ಮತಗಳನ್ನು ನೀಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ.ಎಸ್.ಗುರುಸ್ವಾಮಿ, ಮಹಮದ್ ಅಸ್ಗರ್, ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ. ಮಹದೇವಶೆಟ್ಟಿ, ಕೋಡಿಮೋಳೆ ಪ್ರಕಾಶ್, ಎಪಿಎಂಸಿ ಮಾಜಿ ಅಧ್ಯಕ್ಷ ನಾಗೇಂದ್ರ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ನಾಗಯ್ಯ, ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷ ಮೂರ್ತಿ, ಮಂಗಲ ಗ್ರಾಪಂ ಅಧ್ಯಕ್ಷ ಅಣ್ಣಪ್ಪಸ್ವಾಮಿ, ಮಾಜಿ ಅಧ್ಯಕ್ಷ ಶಿವಣ್ಣ, ನಂಜುಂಡಶೆಟ್ಟಿ, ಶಿವಣ್ಣ, ಮಹದೇವಸ್ವಾಮಿ, ದೊರೆಸ್ವಾಮಿ, ಅಕ್ಷಯ್, ಮೋಹನ್ ನಗು, ರಾಜೀವ್, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕೆಲ್ಲಂಬಳ್ಳಿ ಸೋಮು, ತಾಪಂ ಮಾಜಿ ಸದಸ್ಯ ಮಹಾಲಿಂಗು, ನಂಜುಂಡಯ್ಯ, ಎಂ.ಕುಮಾರ್ ಮತ್ತು ಗ್ರಾಪಂ ಸದಸ್ಯರು, ಪಕ್ಷದ ಮುಖಂಡರು ಮತ್ತಿತರರಿದ್ದರು.