ಸಾರಾಂಶ
ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವಕ್ಕೆ ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ನಿಟ್ಟೆ ವಿನಯ ಹೆಗ್ಡೆ ಅವರನ್ನು ಆಹ್ವಾನಿಸಲಾಯಿತು.
ಕನ್ನಡಪ್ರಭ ವಾರ್ತೆ ಉಡುಪಿ
ಉಡುಪಿಯಲ್ಲಿ ಜ.18ರಂದು ನಡೆಯುವ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಚತುರ್ಥ ಪರ್ಯಾಯೋತ್ಸವಕ್ಕೆ ನಿಟ್ಟೆ ವಿದ್ಯಾಸಂಸ್ಥೆಗಳ ಅಧ್ಯಕ್ಷ, ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ನಿಟ್ಟೆ ವಿನಯ ಹೆಗ್ಡೆ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ವತಿಯಿಂದ ಭೇಟಿ ಮಾ ಆಹ್ವಾನಿಸಲಾಯಿತು.ಈ ಸಂದರ್ಭದಲ್ಲಿ ಶ್ರೀಪುತ್ತಿಗೆ ಮಠದ ದಿವಾನ ನಾಗರಾಜ ಆಚಾರ್ಯ, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ರಘುಪತಿ ಭಟ್, ಪ್ರಮುಖರಾದ ಮಟ್ಟಾರು ರತ್ನಾಕರ ಹೆಗ್ಡೆ, ಪ್ರಸಾದ್ ರಾಜ್ ಕಾಂಚನ್, ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಸಂತೋಷ್ ಶೆಟ್ಟಿ ತೆಂಕರಗುತ್ತು, ಶರತ್ ಹೆಗ್ಡೆ ಬೆಳ್ಮಣ್ ಇದ್ದರು.