ಸರ್ಕಾರದಿಂದ ಅನುದಾನ ಬಿಡುಗಡೆಗೊಂಡು ಕಾಮಗಾರಿ ನಡೆಯುವುದು ಖಚಿತವಾದ ಬಳಿಕ ಜನಪ್ರತಿನಿಧಿಗಳು ಶಿಲನ್ಯಾಸ ನಡೆಸುವ ಸಂದರ್ಭದಲ್ಲಿ ಸ್ಥಳೀಯರು ಬ್ಯಾನರ್ ಅಳವಡಿಸಿ ತಮ್ಮ ಕೃತಜ್ಞತೆಯನ್ನು ತೋರ್ಪಡಿಸುವುದು ಸಹಜ ಪ್ರಕ್ರಿಯೆಯಾಗಿದ್ದು, ಪುತ್ತೂರು ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾರದೆ ಬಿಜೆಪಿಗರು ಆಧಾರ ರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ವಕ್ತಾರ ರವೀಂದ್ರ ರೈ ನೆಕ್ಕಿಲು ಆರೋಪಿಸಿದರು.

ಪುತ್ತೂರು: ಸರ್ಕಾರದಿಂದ ಅನುದಾನ ಬಿಡುಗಡೆಗೊಂಡು ಕಾಮಗಾರಿ ನಡೆಯುವುದು ಖಚಿತವಾದ ಬಳಿಕ ಜನಪ್ರತಿನಿಧಿಗಳು ಶಿಲನ್ಯಾಸ ನಡೆಸುವ ಸಂದರ್ಭದಲ್ಲಿ ಸ್ಥಳೀಯರು ಬ್ಯಾನರ್ ಅಳವಡಿಸಿ ತಮ್ಮ ಕೃತಜ್ಞತೆಯನ್ನು ತೋರ್ಪಡಿಸುವುದು ಸಹಜ ಪ್ರಕ್ರಿಯೆಯಾಗಿದ್ದು, ಪುತ್ತೂರು ಶಾಸಕರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲಾರದೆ ಬಿಜೆಪಿಗರು ಆಧಾರ ರಹಿತ ಟೀಕೆಗಳನ್ನು ಮಾಡುತ್ತಿದ್ದಾರೆ ಎಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ವಕ್ತಾರ ರವೀಂದ್ರ ರೈ ನೆಕ್ಕಿಲು ಆರೋಪಿಸಿದರು.

ಅವರು ಶನಿವಾರ ಪುತ್ತೂರಿನಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ ಬಿಜೆಪಿಯವರು ಶಾಸಕರನ್ನೇ ಗುರಿ ಮಾಡಿಕೊಂಡು ಏನೇನೋ ಅಪಪ್ರಚಾರ ಮಾಡುತ್ತಿದ್ದು, ಬಿಜೆಪಿ ಮುಖಂಡರು ಅಭಿವೃದ್ಧಿ ಕಾರ್ಯಗಳಿಗೆ ತೆಂಗಿನಕಾಯಿ ಒಡೆಯುವ, ಬ್ಯಾನರ್ ಕುರಿತು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ. ಬಿಜೆಪಿಯು ಸ್ವಾತಂತ್ರ್ಯ ಪೂರ್ವದಿಂದಲೇ ಸುಳ್ಳು ಹೇಳುತ್ತಲೇ ಬಂದಿದ್ದು, ಈಗಲೂ ಅದನ್ನು ಮುಂದುವರಿಸಿಕೊಂಡು ಹೋಗುತ್ತಿದೆ. ಕುರಿಯ ಗ್ರಾಮದಲ್ಲಿ ಯಾರೋ ಒಬ್ಬ ಚುಡಾಯಿಸಿದ ಎಂಬ ಕಾರಣಕ್ಕೆ ಬಿಜೆಪಿಯು ಕೋಮು ದ್ವೇಷದಿಂದ ಅದರ ಕುರಿತು ಶಾಸಕರ ಮೇಲೆ ಆರೋಪ ಮಾಡುತ್ತಿದೆ, ಯಾರೇ ತಪ್ಪು ಮಾಡಿದರೂ ಅದು ತಪ್ಪೇ ಆಗಿದೆ. ಜತೆಗೆ ಅದಕ್ಕೆ ಸಂಬಂಧಿಸಿ ಆತನನ್ನು ಬಂಧಿಸಿ ನ್ಯಾಯಾಲಯ ಜಾಮೀನು ನೀಡಿದ್ದು, ಅದಕ್ಕೂ ಶಾಸಕರಿಗೂ ಸಂಬಂಧವೇ ಇಲ್ಲವಾಗಿದೆ.ಪಂಚಾಯತ್ ಚುನಾವಣೆಗಳು ನಡೆಯುತ್ತಿಲ್ಲ ಎಂಬ ಆರೋಪವನ್ನು ಬಿಜೆಪಿ ಮಾಡುತ್ತಿದ್ದು, ಅವರ ಆಡಳಿತದ ಅವಧಿಯಲ್ಲೇ ಜಿ.ಪಂ.-ತಾ.ಪ.ಅಧಿಕಾರವಧಿ ಮುಗಿದಿದ್ದು, ಅವರೂ ಕೂಡ ಚುನಾವಣೆ ಮಾಡಿಲ್ಲ. ಈಗ ಜನವರಿಯಲ್ಲಿ ಚುನಾವಣೆ ನಡೆಯುತ್ತದೆ ಎಂದಾಗುವಾಗ ಬಿಜೆಪಿ ಪ್ರತಿಭಟನೆ ನಡೆಸಿ ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ. ರಾಜ್ಯದಲ್ಲೇ ಮಾದರಿಯಾಗಿ ಪುತ್ತೂರು ಶಾಸಕರು ಪ್ರತಿ ಗ್ರಾಮದಲ್ಲೂ ಅಕ್ರಮ ಸಕ್ರಮ ಬೈಠಕ್ ಮಾಡುತ್ತಿದ್ದು, ಜತೆಗೆ ಪ್ಲಾಟಿಂಗ್ ಮಾಡುವ ಕಾರ್ಯವೂ ಸಮರೋಪಾದಿಯಲ್ಲಿ ನಡೆಯುತ್ತಿದೆ. ಈ ಎಲ್ಲಾ ವಿಚಾರಗಳು ಗೊತ್ತಿದ್ದರೂ ಬಿಜೆಪಿ ನಿರಾಧಾರ ಆರೋಪ ಮಾಡುತ್ತಿದೆ ಎಂದರು.ಸುದ್ದಿಗೋಷ್ಠಿಯಲ್ಲಿ ಪುಡಾ ಸದಸ್ಯ ನಿಹಾಲ್ ಪಿ.ಶೆಟ್ಟಿ, ಕಾಂಗ್ರೆಸ್ ಪ್ರಮುಖರಾದ ಶೆರಲ್ ಸಿಕ್ವೇರಾ, ಗಿರೀಶ್ ರೈ, ಬಾಬು ಮರಿಕೆ ಉಪಸ್ಥಿತರಿದ್ದರು.