ಪುತ್ತೂರು: ಧರ್ಮವು ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ ಉತ್ತಮ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನ ಮಾರ್ಗವಾಗಿದೆ. ಯುವಜನತೆ ತಮ್ಮ ಜೀವನದಲ್ಲಿ ನೈತಿಕ ಮೌಲ್ಯಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಆದರ್ಶ ನಾಗರಿಕರಾಗಿ ಬೆಳೆಯಬೇಕು ಎಂದು ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಜೀವಶಾಸ್ತ್ರ ಉಪನ್ಯಾಸಕ ವಿಷ್ಣು ಪ್ರದೀಪ್ ಹೇಳಿದರು.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಬಪ್ಪಳಿಗೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಾಂಶುಪಾಲ ಗಣೇಶ್ ಪ್ರಸಾದ್ ಡಿ.ಎಸ್. ಉಪಸ್ಥಿತರಿದ್ದರು. ರಸಾಯನಶಾಸ್ತ್ರ ಉಪನ್ಯಾಸಕಿ ಅಪರ್ಣ ಉಪಾಧ್ಯಾಯ ನಿರೂಪಿಸಿದರು.ಧರ್ಮ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನ ಮಾರ್ಗ: ವಿಷ್ಣುಪ್ರದೀಪ್
ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಆಯೋಜಿಸಲಾದ ವಿಶೇಷ ನೈತಿಕ ಶಿಕ್ಷಣ ಕಾರ್ಯಕ್ರಮ
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.