ಸಾರಾಂಶ
ಪುತ್ತೂರು ತಾಲೂಕಿನ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಮಳೆ ಗುಡುಗು ಸಹಿತ ಮಳೆಯಾಗಿದೆ. ಪುತ್ತೂರು ನಗರ, ಗ್ರಾಮೀಣ ಪ್ರದೇಶಗಳಾದ ಕುಂಬ್ರ, ತಿಂಗಳಾಡಿ, ಪಾಣಾಜೆ, ಕಬಕ, ಕೋಡಿಂಬಾಡಿ, ಈಶ್ವರಮಂಗಲ, ಕಾವು ಮತ್ತಿತರ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ಕನ್ನಡಪ್ರಭ ವಾರ್ತೆ ಪುತ್ತೂರು
ತಾಲೂಕಿನ ಹಲವು ಕಡೆಗಳಲ್ಲಿ ಬುಧವಾರ ಸಂಜೆ ಮಳೆ ಗುಡುಗು ಸಹಿತ ಮಳೆಯಾಗಿದೆ. ಪುತ್ತೂರು ನಗರ, ಗ್ರಾಮೀಣ ಪ್ರದೇಶಗಳಾದ ಕುಂಬ್ರ, ತಿಂಗಳಾಡಿ, ಪಾಣಾಜೆ, ಕಬಕ, ಕೋಡಿಂಬಾಡಿ, ಈಶ್ವರಮಂಗಲ, ಕಾವು ಮತ್ತಿತರ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.ಬುಧವಾರ ಅಪರಾಹ್ನದ ತನಕ ಎಲ್ಲೆಡೆ ಸುಡು ಬಿಸಿಲು ಕಂಡು ಬಂದಿತ್ತು. ಬಳಿಕ ಮೋಡ ಕವಿದ ವಾತಾವರಣವಿತ್ತು. ಸಂಜೆ ಸುಮಾರು ೫.೩೦ರ ವೇಳೆಗೆ ಮಳೆ ಸುರಿಯಲಾರಂಭಿಸಿತು.ಬೆಳ್ತಂಗಡಿ ತಾಲೂಕಿನೆಲ್ಲೆಡೆ ಬುಧವಾರ ಅಪರಾಹ್ನ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಿದೆ.ಮುಂಡಾಜೆ, ಕಕ್ಕಿಂಜೆ, ಧರ್ಮಸ್ಥಳ, ಉಜಿರೆ, ನಡ, ನಿಡಿಗಲ್, ಪಣಕಜೆ, ಅಳದಂಗಡಿ, ಧರ್ಮಸ್ಥಳ ಸಹಿತ ಬಹುತೇಕ ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಿದೆ. ಮಧ್ಯಾಹ್ನದ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು ಮಳೆ ಆರಂಭಗೊಂಡಿತು. ಉತ್ತಮ ಮಳೆಯಿಂದಾಗಿ ವಾತಾವರಣ ತಂಪಾಗಿದೆ.
ಆದರೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಪರಿಣಾಮ ಕೆಲಸ ಕಾರ್ಯಗಳಿಗೆ ಸಮಸ್ಯೆ ಉಂಟಾಗಿದೆ. ಕಕ್ಕಿಂಜೆಯಲ್ಲಿ ಮಳೆ ತೀವ್ರವಾದ ಪರಿಣಾಮ ರಸ್ತೆಯಲ್ಲೇ ನೀರು ಹರಿದು ಹೋಗುತ್ತಿರುವ ದೃಶ್ಯ ಕಂಡುಬಂತು.