ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ, ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆ

| Published : Oct 04 2024, 01:10 AM IST

ಪುತ್ತೂರು ದಸರಾ ಮಹೋತ್ಸವಕ್ಕೆ ಚಾಲನೆ, ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆ
Share this Article
  • FB
  • TW
  • Linkdin
  • Email

ಸಾರಾಂಶ

ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ, ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆಯಲಿವೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಪುತ್ತೂರು ದಸರಾ ನವದುರ್ಗಾರಾಧನಾ ಸಮಿತಿಯ ನೇತೃತ್ವದಲ್ಲಿ ಪುತ್ತೂರು ತಾಲೂಕನ್ನು ಕೇಂದ್ರವಾಗಿರಸಿಕೊಂಡು ಸಂಪ್ಯ ಶ್ರೀ ವಿಷ್ಣುಮೂರ್ತಿ ಅನ್ನಪೂಣೇಶ್ವರಿ ಕ್ಷೇತ್ರದಲ್ಲಿ ಅ.೩ರಿಂದ ಅ.೧೪ರ ತನಕ ನಡೆಯಲಿರುವ ಪುತ್ತೂರು ದಸರಾ ಮಹೋತ್ಸವಕ್ಕೆ ಶ್ರೀ ಗಣಪತಿ, ಶಾರದೆ, ನವದುರ್ಗೆಯರ ವಿಗ್ರಹ ಪ್ರತಿಷ್ಠಾಪನೆಯೊಂದಿಗೆ ಗುರುವಾರ ಚಾಲನೆ ನೀಡಲಾಯಿತು.

ಪುತ್ತೂರು ದಸರಾ ಮಹೋತ್ಸವ ಸಮಿತಿ ಸಂಚಾಲಕ, ಕುಕ್ಕಾಡಿ ತಂತ್ರಿ ಪ್ರೀತಂ ಪುತ್ತೂರಾಯ ಅವರ ನೇತೃತ್ವದಲ್ಲಿ ವೈದಿಕ ಕಾರ್ಯಕ್ರಮಗಳು ನಡೆಯಲಿವೆ.

ನಗರಸಭೆ ಉಪಾಧ್ಯಕ್ಷ ಬಾಲಚಂದ್ರ ದಸರಾ ಉದ್ಘಾಟಿಸಿ ಮಾತನಾಡಿ ಮಂಗಳೂರು ದಸರಾದಂತೆ ಪುತ್ತೂರಿನಲ್ಲಿ ವೈಭವದ ದಸರಾ ನಡೆಯಲಿದೆ ಎಂದರು. ಉದ್ಯಮಿ ರಮೇಶ್ ಪ್ರಭು, ಆರ್ಯಾಪು ಗ್ರಾ.ಪಂ ಉಪಾಧ್ಯಕ್ಷ ಅಶೋಕ್ ನಾಯ್ಕ್, ಪುತ್ತೂರು ದಸರಾ ಉತ್ಸವ ಸಮಿತಿ ಅಧ್ಯಕ್ಷ ಯು. ಲೋಕೇಶ್ ಹೆಗ್ಡೆ, ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಕುಕ್ಕಾಡಿ, ಪ್ರಧಾನ ಕಾರ್ಯದರ್ಶಿ ನೇಮಾಕ್ಷ ಸುವರ್ಣ, ಉಪಾಧ್ಯಕ್ಷ ಜಯಂತ ಶೆಟ್ಟಿ ಕಂಬಳತ್ತಡ್ಡ, ಗೌರವ ಸಲಹೆಗಾರ ರಾಜೇಶ್ ಬನ್ನೂರು, ಮಂಜಪ್ಪ ರೈ ಬಾರಿಕೆ ಸಹಿತ ಹಲವಾರು ಮಂದಿ ಭಾಗವಹಿಸಿದ್ದರು.