ಪುತ್ತೂರು: ಶ್ರೀ ಶಂಕರಾಚಾರ್ಯರ ಶೃಂಗೇರಿ ಪೀಠಾಧಿಪತಿ ಶ್ರೀ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿದಾನಂಗಳವರ ಗುರುವಂದನೆ ಹಾಗೂ ಪಾದಪೂಜೆ ಕಾರ್ಯಕ್ರಮವು ಗುರುವಾರ ಅಂಬಿಕಾ ಸಮೂಹ ವಿದ್ಯಾಸಂಸ್ಥೆಯಲ್ಲಿ ನಡೆಯಲಿದ್ದು, ಬುಧವಾರ ರಾತ್ರಿ ಪುತ್ತೂರಿಗೆ ಆಗಮಿಸಿದ ಸ್ವಾಮೀಜಿಯವರನ್ನು ಪುತ್ತೂರು ತಾಲೂಕಿನ ಕಬಕ ಗ್ರಾಮದ ಪೋಳ್ಯದಲ್ಲಿ ಭಕ್ತಿಭಾವದೊಂದಿಗೆ ಸ್ವಾಗತಿಸಲಾಯಿತು.ಪೋಳ್ಯದಿಂದ ವಾಹನ ಜಾಥಾದೊಂದಿಗೆ ಬರಮಾಡಿಕೊಳ್ಳಲಾಯಿತು. ಬಪ್ಪಳಿಗೆ ಜಂಕ್ಷನ್ ನಿಂದ ಫೂರ್ಣಕುಂಭ ಸ್ವಾಗತದೊಂದಿಗೆ ಅಂಬಿಕಾವಿದ್ಯಾ ಸಂಸ್ಥೆಯ ಪ್ರಾಂಗಣಕ್ಕೆ ಮೆರವಣಿಗೆಯಲ್ಲಿ ಕರೆತಲಾಯಿತು.
ಅಂಬಿಕಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ, ಆಡಳಿತಾಧಿಕಾರಿ ಗಣೇಶ್ ಪ್ರಸಾದ್, ಅಭಿನಂದನಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.ಧೂಳೀ ಪಾದಪೂಜೆ: ಪುತ್ತೂರಿಗೆ ಆಗಮಿಸಿದ ಶ್ರೀ ಶಂಕರಾಚಾರ್ಯರ ಶೃಂಗೇರಿ ಪೀಠಾಧಿಪತಿಗಳಾದ ಶ್ರೀ ಜಗದ್ಗುರು ಶ್ರೀ ವಿಧುಶೇಖರ ಭಾರತಿ ಸನ್ನಿದಾನಂಗಳವರ ದೂಳೀ ಪಾದಪೂಜೆಯು ಅಂಬಿಕಾವಿದ್ಯಾ ಸಂಸ್ಥೆಯ ಪ್ರಾಂಗಣದಲ್ಲಿ ನಡೆಸಲಾಯಿತು. ಅಂಬಿಕಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ, ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ಪಾದಪೂಜೆ ನಡೆಸಿದರು.