ಪುತ್ತೂರು: ಪರಿಶಿಷ್ಟ ಪಂಗಡದ ರೈತರಿಗೆ ತೋಟಗಾರಿಕಾ ತಾಂತ್ರಿಕತೆ ತರಬೇತಿ

| Published : Jun 23 2024, 02:02 AM IST

ಸಾರಾಂಶ

ತರಬೇತಿಯಲ್ಲಿ ಭಾಗವಹಿಸಿದ್ದ ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಣ್ಣಿ ಗಿಡಗಳನ್ನು ವಿತರಿಸಲಾಯಿತು.

ಕನ್ನಡಪ್ರಭ ವಾರ್ತೆ ಪುತ್ತೂರು

ಪರಿಶಿಷ್ಟ ಪಂಗಡದ ರೈತರಿಗೆ ಟಿಎಸ್‌ಪಿ ಯೋಜನೆಯಡಿ ತೋಟಗಾರಿಕಾ ತಾಂತ್ರಿಕತೆಗಳ ಕುರಿತು ತರಬೇತಿ ಕಾರ್ಯಕ್ರಮವು ಶನಿವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್‌, ಭಾರತಿಯ ಕೃಷಿ ವಿಜ್ಞಾನ ಕೇಂದ್ರ ಮಂಗಳೂರು, ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆ ಬೆಂಗಳೂರು ಹಾಗೂ ಡೇ ನಲ್ಮ್ ಯೋಜನೆ, ಪುತ್ತೂರು ತಾಪಂ ಇವುಗಳ ಸಹಯೋಗದಲ್ಲಿ ತರಬೇತಿ ಆಯೋಜಿಸಲಾಗಿತ್ತು.

ತಾಲೂಕು ಪಂಚಾಯಿತಿ ಇಒ ನವೀನ್ ಕುಮಾರ್ ಭಂಡಾರಿ ಕಾರ್ಯಕ್ರಮ ಉದ್ಘಾಟಿಸಿದರು. ಬೆಂಗಳೂರಿನ ಭಾರತೀಯ ತೋಟಗಾರಿಕಾ ಸಂಶೋಧನಾ ಸಂಸ್ಥೆಯ ಪ್ರಧಾನ ವಿಜ್ಞಾನಿ ಡಾ.ವಿ. ಶಂಕರ್, ಮಂಗಳೂರಿನ ಕೃಷಿ ವಿಜ್ಞಾನ ಕ್ರೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ.ಟಿ.ಜಿ. ರಮೇಶ, ಮಂಗಳೂರಿನ ತೋಟಗಾರಿಕೆ, ಕೃಷಿ ವಿಜ್ಞಾನ ಕ್ರೇಂದ್ರದ ವಿಜ್ಞಾನಿ ಡಾ.ರಶ್ಮಿ ಆರ್. ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಪೌಷ್ಟಿಕತೆ, ಜೈವಿಕ ಗೊಬ್ಬರ ಬಳಕೆ, ತಳಿಗಳ ಅಭಿವೃದ್ಧಿ, ತರಕಾರಿ ಮತ್ತು ತೋಟಗಾರಿಕೆ ಬೆಳೆಗಳ ಬಗ್ಗೆ, ಮಲ್ಲಿಗೆ ಕೃಷಿ ಬಗ್ಗೆ ತರಬೇತಿ ನೀಡಿ ಇಲಾಖಾ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿದರು.

ತಾ.ಪಂ. ಸಹಾಯಕ ನಿರ್ದೇಶಕಿ ಶೈಲಜಾ ಭಟ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕಿ ಮಂಜುಳಾ., ಎನ್‌ಆರ್‌ಎಲ್‌ಎಂ ತಾಲೂಕು ವ್ಯವಸ್ಥಾಪಕ ಜಗತ್ ಕೆ. ಉಪಸ್ಥಿತರಿದ್ದರು.

ತರಬೇತಿಯಲ್ಲಿ ಭಾಗವಹಿಸಿದ್ದ ರೈತರಿಗೆ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಹಣ್ಣಿ ಗಿಡಗಳನ್ನು ವಿತರಿಸಲಾಯಿತು.