ಸಾರಾಂಶ
ಫೆ.೧೬ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬುಧವಾರ ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ಶ್ರೀ ಕ್ಷೇತ್ರ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಂನಲ್ಲಿ ಫೆ.೧೮ ಮತ್ತು ೧೯ರಂದು ನಡೆಯುವ ತುಳುನಾಡ ಜಾತ್ರೆ, ಶ್ರೀ ಒಡಿಯೂರು ರಥೋತ್ಸವ, ಸಿರಿರಾಮೆ ತುಳು ಸಾಹಿತ್ಯ ಸಮ್ಮೇಳನದ ಅಂಗವಾಗಿ ಫೆ.೧೬ರಂದು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಬಳಿಯಿಂದ ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ ನಡೆಯಲಿದೆ. ಇದಕ್ಕೆ ಪೂರ್ವಭಾವಿಯಾಗಿ ಬುಧವಾರ ದೇವಳದ ವಠಾರದಲ್ಲಿ ಕಾರ್ಯಾಲಯವನ್ನು ಉದ್ಘಾಟಿಸಲಾಯಿತು. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ವೇದಮೂರ್ತಿ ವಿ.ಎಸ್. ಭಟ್ ದೀಪ ಪ್ರಜ್ವಲನೆ ಮಾಡಿದರು.ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ, ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೂಟ್ಟು ಮಾತನಾಡಿದರು.
ಈ ಸಂದರ್ಭದಲ್ಲಿ ಹೊರೆಕಾಣಿಕೆ ಸಮಿತಿ ಪುತ್ತೂರು ತಾಲೂಕು ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು, ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ, ಹೊಟೇಲ್ ಹರಿಪ್ರಸಾದ್ ಮಾಲಕ ಹರಿನಾರಾಯಣ ಹೊಳ್ಳ, ಹೊರೆಕಾಣಿಕೆ ಸಮಿತಿ ಕೇಂದ್ರ ಸಮಿತಿ ಕಾರ್ಯಾಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಹೊರೆಕಾಣಿಕೆ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣ ಎಂ. ಅಳಿಕೆ, ಪ್ರಧಾನ ಕಾರ್ಯದರ್ಶಿ ನವೀನ್ ಕುಲಾಲ್, ಹೊರೆಕಾಣಿಕೆ ಕೇಂದ್ರ ಸಮಿತಿ ದೇವಿಪ್ರಸಾದ್, ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಯಶವಂತ ವಿಟ್ಲ, ಕೋಶಾಧಿಕಾರಿ ಅಶೋಕ್ ರೈ ಅರ್ಪಿಣಿಗುತ್ತು ಮತ್ತಿತರರು ಉಪಸ್ಥಿತರಿದ್ದರು.