: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ವೇಗ ನೀಡಲಾಗಿದ್ದು, ಐದು ಪ್ರಮುಖ ಕಾಮಗಾರಿಗಳನ್ನು ಏಕಕಾಲದಲ್ಲಿ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪುತ್ತೂರು ಶಾಸಕ ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ವೇಗ ನೀಡಲಾಗಿದ್ದು, ಐದು ಪ್ರಮುಖ ಕಾಮಗಾರಿಗಳನ್ನು ಏಕಕಾಲದಲ್ಲಿ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪುತ್ತೂರು ಶಾಸಕ ಹಾಗೂ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಅವರು ಮಂಗಳವಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳ ಕುರಿತು ವ್ಯವಸ್ಥಾಪನಾ ಸಮಿತಿ ಹಾಗೂ ಇಂಜಿನಿಯರ್‌ಗಳ ಸಭೆ ನಡೆಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು ಮುಂದಿನ 10 ದಿನಗಳೊಳಗೆ ಐದು ಕಾಮಗಾರಿಗಳಿಗೆ ಚಾಲನೆ ನೀಡುವ ಗುರಿ ಹೊಂದಲಾಗಿದೆ ಎಂದರು.ಶೌಚಾಲಯ ನಿರ್ಮಾಣ, ತಂತ್ರಿಗಳು ಹಾಗೂ ವಿಐಪಿ ಅತಿಥಿಗಳಿಗಾಗಿ ಆರು ಕೊಠಡಿಗಳ ತಾತ್ಕಾಲಿಕ ವ್ಯವಸ್ಥೆ, ಭೋಜನಾಲಯ ವಿಸ್ತರಣೆ, ವಿಐಪಿ ಲಾಂಜ್, ರಥಮಂದಿರ ಹಾಗೂ ಹಾಲ್ ನಿರ್ಮಾಣ ಸೇರಿದಂತೆ ಪ್ರಮುಖ ಕಾಮಗಾರಿಗಳಿಗೆ ಕೋಟೇಶನ್ ಕರೆಯಲಾಗುವುದು. ಏಳು ದಿನಗಳ ಕಾಲಾವಕಾಶ ನೀಡಿ, ಬಳಿಕ ಗುತ್ತಿಗೆದಾರರನ್ನು ಅಂತಿಮಗೊಳಿಸಿ ಕಾಮಗಾರಿಗಳನ್ನು ಆರಂಭಿಸಲಾಗುವುದು. ಕಾಮಗಾರಿಗಳ ಪೈಕಿ 5 ಕಾಮಗಾರಿಗಳಿಗೂ ಪ್ರತ್ಯೇಕ ಗುತ್ತಿಗೆದಾರರನ್ನು ನೇಮಿಸಲಾಗುವುದು ಎಂದು ಹೇಳಿದರು.
3.5 ಕೋಟಿ ರು. ವೆಚ್ಚದಲ್ಲಿ ಗ್ರಾನೈಟ್:Lದೇವಸ್ಥಾನದ ಹೊರಾಂಗಣ, ಹಾಲ್ ಹಾಗೂ ವಾಶ್‌ರೂಮ್‌ಗಳಿಗೆ ಗುಣಮಟ್ಟದ 30 ಎಂ.ಎಂ. ಗ್ರಾನೈಟ್ ಅಳವಡಿಸಲು ಸುಮಾರು 3.5 ಕೋಟಿ ರು. ವೆಚ್ಚವಾಗಲಿದೆ. ಈ ಸಂಬಂಧ ಬೆಂಗಳೂರಿನಲ್ಲಿ 15 ಉದ್ಯಮಿಗಳನ್ನು ಭೇಟಿ ಮಾಡಿದ್ದು, ಉದ್ಯಮಿಗಳು ಸ್ವಯಂಪ್ರೇರಣೆಯಿಂದ ಸುಮಾರು 3 ಕೋಟಿ ರು. ಮೌಲ್ಯದ ಗ್ರಾನೈಟ್ ಒದಗಿಸುವ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
ದೇವಸ್ಥಾನದ ಅನ್ನಛತ್ರವನ್ನು ಮತ್ತಷ್ಟು ವಿಸ್ತರಿಸಿ ಮುಂದಿನ ದಿನಗಳಲ್ಲಿ 25 ಸಾವಿರ ಜನರಿಗೆ ಊಟ ನೀಡುವ ಸಾಮರ್ಥ್ಯ ಕಲ್ಪಿಸುವ ಗುರಿ ಹೊಂದಲಾಗಿದೆ. ವಿಐಪಿ ಲಾಂಜ್ ಹಾಗೂ ಶೌಚಾಲಯ ನಿರ್ಮಾಣಕ್ಕೂ ದಾನಿಗಳು ಮುಂದೆ ಬರಬಹುದು. ಅವೆರಡು ಕಾಮಗರಿಗಳಿಗೆ ತಲಾ ರು. 50 ಲಕ್ಷ ವೆಚ್ಚವಾಗಲಿದೆ. ಕಾಮಗಾರಿಗಳಿಗೆ ಭಕ್ತರ ಸಹಕಾರವನ್ನು ಕೋರಲಾಗಿದೆ ಎಂದು ಹೇಳಿದರು.ದೇವಸ್ಥಾನದ ಕಮರ್ಷಿಯಲ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಒಂದು ತಿಂಗಳೊಳಗೆ ಕಾಮಗಾರಿ ಆರಂಭಿಸುವ ಗುರಿ ಹೊಂದಲಾಗಿದೆ. ಇದಕ್ಕಾಗಿ ಸರ್ಕಾರದಿಂದ ತಮ್ಮ ಅನುದಾನದಲ್ಲಿ 10 ಕೋಟಿ ರು. ಹಾಗೂ ಸಚಿವರ ಮೂಲಕ 5 ಕೋಟಿ ರು. ಒದಗಿಸಿ ಒಟ್ಟು 15 ಕೋಟಿ ರು. ವೆಚ್ಚದಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು. ದೇವಸ್ಥಾನದ ರಸ್ತೆಯ ಸಂಪೂರ್ಣ ಕಾಮಗಾರಿಯೂ ಒಂದು ತಿಂಗಳೊಳಗೆ ಆರಂಭವಾಗಲಿದೆ. ಕೆರೆ ಅಭಿವೃದ್ಧಿ ಕಾಮಗಾರಿಗೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, 15 ದಿನಗಳೊಳಗೆ ಕಾಮಗಾರಿ ಆರಂಭವಾಗಲಿದೆ ಎಂದರು. ಹಾಲ್ ನಿರ್ಮಾಣದ ಹಂತದಲ್ಲಿ ಹಾಲಿ ಇರುವ ಹಾಲ್‌ನ್ನು ತೆರವುಗೊಳಿಸಲಾಗುವುದು ಎಂದು ಹೇಳಿದರು.
ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ, ಸದಸ್ಯರಾದ ಮಹಾಬಲ ರೈ ವಳತ್ತಡ್ಕ, ದಿನೇಶ್ ಪಿ.ವಿ, ನಳಿನಿ ಪಿ ಶೆಟ್ಟಿ, ಈಶ್ವರ ಬೆಡೇಕರ್, ವಿನಯ ಸುವರ್ಣ, ಕೃಷ್ಣವೇಣಿ, ಪ್ರಧಾನ ಅರ್ಚಕ ವೇ ಮೂ ವಸಂತ ಕೆದಿಲಾಯ, ಪುಡಾ ಸದಸ್ಯ ನಿಹಾಲ್ ಪಿ ಶೆಟ್ಟಿ ಇದ್ದರು.