ಪುತ್ತೂರು: ಅನ್ಯಕೋಮಿನ ಯುವಕನಿಂದ ನಾಗನ ಕಟ್ಟೆಗೆ ಹಾನಿ

| Published : Dec 06 2024, 08:58 AM IST

ಪುತ್ತೂರು: ಅನ್ಯಕೋಮಿನ ಯುವಕನಿಂದ ನಾಗನ ಕಟ್ಟೆಗೆ ಹಾನಿ
Share this Article
  • FB
  • TW
  • Linkdin
  • Email

ಸಾರಾಂಶ

ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಸಲಾಂ ಎಂಬ ಮತಾಂಧ ವ್ಯಕ್ತಿಯು ಹಾನಿಯುಂಟು ಮಾಡಲು ಯತ್ನಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಖಂಡಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಪ್ರಮುಖರು ಖಂಡನೆ ವ್ಯಕ್ತ ಪಡಿಸಿದ್ದಾರೆ.

ಕನ್ನಡಪ್ರಭವಾರ್ತೆ ಪುತ್ತೂರು

ಪುತ್ತೂರಿನ ಖಾಸಗಿ ಬಸ್ಸು ನಿಲ್ದಾಣದ ಪಕ್ಕದಲ್ಲಿರುವ ನಾಗನ ಕಟ್ಟೆಗೆ ಅನ್ಯಕೋಮಿನ ಯುವಕನೋರ್ವ ಹಾನಿ ನಡೆಸಲು ಯತ್ನಿಸಿದ ಘಟನೆ ಬುಧವಾರ ರಾತ್ರಿ ನಡೆದಿದ್ದು, ಸ್ಥಳೀಯರು ಆತನನ್ನು ಹಿಡಿದು ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ.

ಪೊಲೀಸರು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ನಗರದ ಹೊರವಲಯದ ಸಾಲ್ಮರ ಜಿಡೆಕಲ್ಲು ನಿವಾಸಿ ಸಲಾಂ ಬಂಧಿತ ಆರೋಪಿ. ಈತನ ಗಾಂಜಾ ಸೇವಿಸುವ ಚಟವನ್ನು ಹೊಂದಿದ್ದು, ನೆಲ್ಲಿಕಟ್ಟೆಯಲ್ಲಿರುವ ನಾಗನಕಟ್ಟೆಯ ಗೇಟ್‌ನ ಬೀಗ ಮುರಿದು ಒಳನುಗ್ಗಿ ಇಲ್ಲಿರುವ ಇತರ ಸಾಮಗ್ರಿಗಳಿಗೆ ಹಾನಿ ಮಾಡಲು ಯತ್ನಿಸಿರುವುದಾಗಿ ಆರೋಪಿಸಲಾಗಿದೆ. ಈತನ ಕೃತ್ಯವನ್ನು ಗಮನಿಸಿದ ಸ್ಥಳೀಯರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈತ ಇಂತಹ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ ಎನ್ನಲಾಗಿದೆ. ವಿಹಿಂಪ, ಬಜರಂಗದಳ ಖಂಡನೆ: ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಸಲಾಂ ಎಂಬ ಮತಾಂಧ ವ್ಯಕ್ತಿಯು ಹಾನಿಯುಂಟು ಮಾಡಲು ಯತ್ನಿಸಿರುವುದನ್ನು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಖಂಡಿಸಿದೆ. ಸ್ಥಳಕ್ಕೆ ಭೇಟಿ ನೀಡಿದ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಪ್ರಮುಖರು ಖಂಡನೆ ವ್ಯಕ್ತ ಪಡಿಸಿದ್ದಾರೆ. ಪುತ್ತೂರು ಖಾಸಗಿ ಬಸ್ ನಿಲ್ದಾಣದ ಬಳಿಯಿರುವ ನಾಗದೇವರ ಕಟ್ಟೆಗೆ ಅನ್ಯಕೋಮಿನ ವ್ಯಕ್ತಿಯು ಹಾನಿಗೆ ಯತ್ನಿಸಿದ್ದು, ಹಿಂದೂ ವಿರೋಧಿ ಶಕ್ತಿಗಳು ವಿನಾಕಾರಣ ಹಿಂದುಗಳ ಆರಾಧನ ಸ್ಥಳಗಳಿಗೆ ಹಾನಿಯುಂಟು ಮಾಡುತ್ತಿರುವ ಘಟನೆಗಳು ಹೆಚ್ಚುತ್ತಿದೆ. ಇಂತಹ ಮನಸ್ಥಿತಿಯ ವ್ಯಕ್ತಿಗಳ ಬಗ್ಗೆ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಆಗುವ ಅನಾಹುತಕ್ಕೆ ಇಲಾಖೆ ಹಾಗೂ ಸರ್ಕಾರ ಹೊಣೆಯಾಗಬೇಕಾಗುತ್ತದೆ ಎಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಪುತ್ತೂರು ಆಗ್ರಹಿಸಿದೆ.