ಸಾರಾಂಶ
ಬಂಟರ ಸಂಘದ ವತಿಯಿಂದ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಶನಿವಾರ ಪುತ್ತೂರು ತಾಲೂಕಿನ ಕೊಂಬೆಟ್ಟು ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕನ್ನಡಪ್ರಭ ವಾರ್ತೆ ಪುತ್ತೂರು ತಾಲೂಕು ಬಂಟರ ಸಂಘದ ವತಿಯಿಂದ ‘ಪೆರ್ಮೆದ ಬಂಟೆರ್’ ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ ಶನಿವಾರ ಪುತ್ತೂರು ತಾಲೂಕಿನ ಕೊಂಬೆಟ್ಟು ಬಂಟರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಮಿತಿ ಮಾರ್ಗದರ್ಶನದಲ್ಲಿ ಮಹಿಳಾ, ಯುವ ಹಾಗೂ ವಿದ್ಯಾರ್ಥಿ ಸಂಘದ ಸಹಕಾರದೊಂದಿಗೆ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು ಬಂಟರ ಸಂಘದ ಅಧ್ಯಕ್ಷ ಕಾವು ಹೇಮನಾಥ ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಸಮಾಜದ ವಿಶೇಷ ಸಾಧಕರನ್ನು ಸನ್ಮಾನಿಸುವುದರ ಜತೆಗೆ ಶೈಕ್ಷಣಿಕವಾಗಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ೧೧೫ ಮಂದಿಗೆ ವಿದ್ಯಾರ್ಥಿ ವೇತನ, ಒಟ್ಟು ೩೦೦ ಕ್ಕಿಂತಲೂ ಅಧಿಕ ಮಂದಿಯನ್ನು ಸನ್ಮಾನಿಸಲಾಗುವುದು ಎಂದರು.ಬೆಳಗ್ಗೆ ತಾಲೂಕು ಬಂಟರ ಸಂಘದ ಮಾಜಿ ಅಧ್ಯಕ್ಷ ಸೀತಾರಾಮ ರೈ ಸವಣೂರು ಧ್ವಜಾರೋಹಣ ಮಾಡಲಿದ್ದು, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಓಪರೇಟಿವ್ ಸೊಸೈಟಿ ನಿರ್ದೇಶಕ ಅರಿಯಡ್ಕ ಚಿಕ್ಕಪ್ಪ ನಾಯ್ಕ್ ಉಪಸ್ಥಿತರಿರುವರು. ಬಳಿಕ ನಡೆಯುವ ಸಭಾ ಕಾರ್ಯಕ್ರಮವನ್ನು ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಅಶೋಕ್ ಶೆಟ್ಟಿ ಎಂ. ಉದ್ಘಾಟಿಸಲಿದ್ದಾರೆ. ತಾಲೂಕು ಬಂಟರ ಸಂಘದ ಅಧ್ಯಕ್ಷ ಹೇಮನಾಥ ಶೆಟ್ಟಿ ಕಾವು ಅಧ್ಯಕ್ಷತೆ ವಹಿಸುವರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಸನ್ಮಾನ ನೆರವೇರಿಸುವರು. ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಪ್ರತಿಭಾ ಪುರಸ್ಕಾರ ವಿತರಿಸುವರು. ಬೆಂಗಳೂರು ವಿದ್ಯಾರ್ಥಿ ವೇತನ ಮತ್ತು ಪ್ರಶಸ್ತಿ ಸಮಿತಿ ಅಧ್ಯಕ್ಷ ಉಮೇಶ್ ಕುಮಾರ್ ಶೆಟ್ಟಿ ಪಾಲ್ಗೊಳ್ಳುವರು.ಅತಿಥಿಗಳಾಗಿ ಬಂಟ್ವಾಳ ಬಂಟರ ಸಂಘದ ಅಧ್ಯಕ್ಷ ಚಂದ್ರಹಾಸ ಶೆಟ್ಟಿ ರಂಗೋಲಿ, ಬೆಂಗಳೂರು ಬಂಟರ ಸಂಘದ ಜತೆ ಕಾರ್ಯದರ್ಶಿ ಜಯಶ್ರೀ ಸಿ. ರೈ ಪಾಲ್ಗೊಳ್ಳುವರು. ತಾಲೂಕು ಬಂಟರ ಸಂಘದ ನಿಕಟಪೂರ್ವ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು, ಬಂಟರ ಯಾನೆ ನಾಡವರ ಮಾತೃ ಸಂಘದ ತಾಲೂಕು ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ತಾಲೂಕು ಸಂಘದ ಮಾಜಿ ಅಧ್ಯಕ್ಷ ಜಗನ್ನಾಥ ರೈ ಮಾದೋಡಿ, ಲಕ್ಷ್ಮೀನಾರಾಯಣ ಶೆಟ್ಟಿ ಅರಿಯಡ್ಕ, ದಯಾನಂದ ರೈ ಮನವಳಿಕೆ, ರಾಧಾಕೃಷ್ಣ ಬೂಡಿಯಾರ್, ಸಹಸಂಚಾಲಕ ರಾಧಾಕೃಷ್ಣ ಆಳ್ವ ಸಾಜ, ಮಹಿಳಾ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ, ಯುವ ಸಂಘದ ಅಧ್ಯಕ್ಷ ಹರ್ಷಕುಮಾರ್ ರೈ ಮಾಡಾವು, ವಿದ್ಯಾ ಸಂಘದ ಅಧ್ಯಕ್ಷ ಪವನ್ ಶೆಟ್ಟಿ ಕಂಬಳತಡ್ಡ ಉಪಸ್ಥಿತರಿರುವರು ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ನಿತ್ಯಾನಂದ ಶೆಟ್ಟಿ ಮನವಳಿಕೆ, ಕೋಶಾಧಿಕಾರಿ ಸಂತೋಷ್ ಕುಮಾರ್ ಶೆಟ್ಟಿ, ತಾಲೂಕು ಸಮಿತಿ ಸಂಚಾಲಕ ಕುಂಬ್ರ ದುರ್ಗಾಪ್ರಸಾದ್ ರೈ, ಮಹಿಳಾ ಸಂಘದ ಅಧ್ಯಕ್ಷೆ ಗೀತಾ ಮೋಹನ್ ರೈ ಇದ್ದರು.