ಸಾರಾಂಶ
ಪುತ್ತೂರಿನ ಸಮರ್ಪಣ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ೧೭ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತೂರಿನ ಸಮರ್ಪಣ ಮಹಿಳಾ ಸೇವಾ ಸಂಸ್ಥೆ, ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಮತ್ತು ಒಡಿಯೂರು ಶ್ರೀ ವಜ್ರಮಾತಾ ಮಹಿಳಾ ವಿಕಾಸಕೇಂದ್ರ ಪುತ್ತೂರು ಘಟಕದ ವತಿಯಿಂದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಕಾರದೊಂದಿಗೆ ದೇವಸ್ಥಾನದ ಸಭಾಭವನದಲ್ಲಿ ಶುಕ್ರವಾರ ೧೭ನೇ ವರ್ಷದ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮೀ ಪೂಜೆ ನಡೆಯಿತು. ವೇದಮೂರ್ತಿ ಹರಿಪ್ರಸಾದ ವೈಲಾಯ ನೇತೃತ್ವ ವಹಿಸಿದ್ದರು.ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿ ನವೀನ್ ಭಂಡಾರಿ ಧಾರ್ಮಿಕ ಸಭಾ ಕಾರ್ಯಕ್ರಮ ಉದ್ಘಾಟಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಅಣ್ಣ ವಿನಯಚಂದ್ರ ಧಾರ್ಮಿಕ ಉಪನ್ಯಾಸ ನೀಡಿದರು. ಡ್ಯಾಶ್ ಮಾರ್ಕೆಟಿಂಗ್ ಸಂಸ್ಥೆಯ ನಿರ್ದೇಶಕಿ ನಳಿನಿ ಪಿ ಶೆಟ್ಟಿ, ಜಯಶ್ರೀ ಈಶ್ವರ ಭಟ್ ಪಂಜಿಗುಡ್ಡೆ, ಅನ್ನಪೂರ್ಣಿಮ ಆರ್ ರೈ ಕುತ್ಯಾಡಿ ಮಾತನಾಡಿದರು.ಸಭಾ ಕಾರ್ಯಕ್ರಮದ ಬಳಿಕ ಮಹಾಪೂಜೆ ನಡೆಯಿತು. ಪೂಜೆ ಮಾಡಿಸಿದ ಭಕ್ತರಿಗೆ ಪ್ರಸಾದ ರೂಪದಲ್ಲಿ ಸೀರೆ ವಿತರಣೆ ನಡೆಸಲಾಯಿತು.
ಸಮಿತಿ ಕಾರ್ಯದರ್ಶಿ ಸುಜಯಾ, ಸದಸ್ಯೆ ಶಾರದಾ ಅರಸ್, ಒಡಿಯೂರು ವಜ್ರಮಾತಾ ಮಹಿಳಾ ವಿಕಾಸ ಸೇವಾ ಕೇಂದ್ರ ಪುತ್ತೂರು ಘಟಕದ ಅಧ್ಯಕ್ಷೆ ನಯನಾ ರೈ, ಸ್ವರ್ಣಲತಾ ಹೆಗ್ಡೆ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ವರಮಹಾಕ್ಷ್ಮೀ ಪೂಜಾ ಸಮಿತಿಯ ಅಧ್ಯಕ್ಷೆ ಶುಭಮಾಲಿನಿ ಮಲ್ಲಿ ಸ್ವಾಗತಿಸಿದರು. ಸಮರ್ಪಣಾ ಮಹಿಳಾ ಸೇವಾ ಸಂಸ್ಥೆಯ ಅಧ್ಯಕ್ಷೆ ಗಂಗಾರತ್ನ ವಿ ರೈ ವಂದಿಸಿದರು. ನ್ಯಾಯವಾದಿ ಹರಿಣಾಕ್ಷಿ ಜೆ ಶೆಟ್ಟಿ ನಿರೂಪಿಸಿದರು.