ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ತಾಂಬೂಲ ಪ್ರಶ್ನಾ ಚಿಂತನೆ

| Published : Feb 17 2025, 12:35 AM IST

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳ ತಾಂಬೂಲ ಪ್ರಶ್ನಾ ಚಿಂತನೆ
Share this Article
  • FB
  • TW
  • Linkdin
  • Email

ಸಾರಾಂಶ

ಸೀಮೆಯ ದೇವಾಲಯವಾದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯನ್ನು ಭಾನುವಾರ ದೇವಾಲಯದ ಆಡಳಿತ ಕಚೇರಿಯಲ್ಲಿ ನಡೆಸಲಾಯಿತು.

ಕನ್ನಡಪ್ರಭವಾರ್ತೆ ಪುತ್ತೂರು

ಸೀಮೆಯ ದೇವಾಲಯವಾದ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಬೇಕಿರುವ ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ತಾಂಬೂಲ ಪ್ರಶ್ನಾ ಚಿಂತನೆಯನ್ನು ಭಾನುವಾರ ದೇವಾಲಯದ ಆಡಳಿತ ಕಚೇರಿಯಲ್ಲಿ ನಡೆಸಲಾಯಿತು.ಜ್ಯೋತಿಷಿ ಪ್ರಸನ್ನ ಆಚಾರ್ಯ ನಿಟ್ಟೆ ಅವರ ನೇತೃತ್ವದಲ್ಲಿ ತಾಂಬೂಲ ಪ್ರಶ್ನೆ ನಡೆಯಿತು. ಬೆಳಗ್ಗೆ ಸುಮಾರು 10.30ಕ್ಕೆ ದೇವಾಲಯಕ್ಕೆ ಆಗಮಿಸಿದ ಜ್ಯೋತಿಷಿ ಪ್ರಸನ್ನ ಆಚಾರ್ಯ ಅವರನ್ನು ಬ್ಯಾಂಡ್, ವಾದ್ಯಗಳೊಂದಿಗೆ ದೇವಸ್ಥಾನದ ಒಳಾಂಗಣಕ್ಕೆ ಸ್ವಾಗತಿಸಲಾಯಿತು. ಬಳಿಕ ಶ್ರೀ ದೇವಸ್ಥಾನದ ಗರ್ಭಗುಡಿಯ ಪೂಜಾ ಕಾರ್ಯ ನೆರವೇರಿಸಿದರು. ಬಳಿಕ ದೇವಸ್ಥಾನದ ಪ್ರಧಾನ ಅರ್ಚಕ ವೇ.ಮೂ. ವಸಂತ ಕೆದಿಲಾಯರು ಗರ್ಭಗುಡಿ ಎದುರು ಪ್ರಶ್ನಾಚಿಂತನೆ ಸಾಂಗವಾಗಿ ನಡೆಯಲಿ ಎಂದು ಪ್ರಾರ್ಥಿಸಿ ಪ್ರಸಾದ ನೀಡಿದರು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ದೀಪ ಬೆಳಗಿಸಿದ ಬಳಿಕ ಮೊದಲಿಗೆ 11.21 ಕ್ಕೆ ಪ್ರಶ್ನಾ ಚಿಂತನೆಯಲ್ಲಿ ಕಂಡು ಬಂದಂತೆ ಆರೂಢ ರಾಶಿಯಲ್ಲಿ ಮಕರ ರಾಶಿ ಬಂದಿದ್ದು, ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ದೈವ ಸೂಚನೆಯಂತೆ ನಡೆಯುತ್ತಿದೆ ಎನ್ನುವುದು ಕಂಡು ಬಂತು.ಪ್ರಶ್ನಾ ಚಿಂತನೆಯಲ್ಲಿ ಪ್ರಧಾನ ಅರ್ಚಕ ವಸಂತ ಕೆದಿಲಾಯ, ಶ್ರೀನಿವಾಸ ಭಟ್, ಗೋಪಾಲಕೃಷ್ಣ ಭಟ್ ಪಡೀಲು ಸಹಕರಿಸಿದರು.ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಗುರು ತಂತ್ರಿ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ದಿನೇಶ್ ಕುಲಾಲ್ ಪಿ.ವಿ., ನಳಿನಿ ಶೆಟ್ಟಿ, ಕೃಷ್ಣವೇಣಿ, ಮಹಾಬಲ ರೈ ಒಳತ್ತಡ್ಕ, ಈಶ್ವರ ಬೆಡೇಕರ್, ವಿನಯ ಕುಮಾರ್ ಸುವರ್ಣ, ಸುಭಾಷ್ ರೈ ಬೆಳ್ಳಿಪ್ಪಾಡಿ, ಮಾಜಿ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹಾಗೂ ಮಾಜಿ ಸದಸ್ಯರು, ಕಾರ್ಯನಿರ್ವಹಣಾಧಿಕಾರಿ ಶ್ರೀನಿವಾಸ್, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ಶಿವನಾಥ ರೈ ಮೇಗಿನಗುತ್ತು, ಚಿದಾನಂದ ಬೈಲಾಡಿ, ಹೇಮನಾಥ ಶೆಟ್ಟಿ, ಪಿ.ಜಿ. ಜಗನ್ನಿವಾಸ್ ರಾವ್ ಸೇರಿದಂತೆ ಭಕ್ತಾದಿಗಳು ಇದ್ದರು.