ಸಾರಾಂಶ
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಡಿ.೨೮ ಮತ್ತು ೨೯ ರಂದು ನಡೆಯಲಿರುವ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಪುತ್ತೂರು
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವತಿಯಿಂದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಎದುರಿನ ದೇವರಮಾರು ಗದ್ದೆಯಲ್ಲಿ ಡಿ.೨೮ ಮತ್ತು ೨೯ ರಂದು ನಡೆಯಲಿರುವ ಎರಡನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು.ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿ, ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿ, ಕಲಿಯುಗದಲ್ಲಿ ಅತ್ಯಂತ ವಿಶಿಷ್ಟ ಅನುಗ್ರಹ ಮಾಡುವ ಶಕ್ತಿ ಇರುವುದು ಶ್ರೀಕೃಷ್ಣನಿಗೆ. ಅದೇ ಕೃಷ್ಣನ ಇನ್ನೊಂದು ರೂಪ ಪಾಂಡುರಂಗ ವಿಠಲಪಂಡಾರಪುರ ಹಾಗೂ ಶ್ರೀನಿವಾಸ ದೇವರು. ವೈಕುಂಠಾಧಿಪತಿ ಶ್ರೀನಿವಾಸ ದೇವರ ಉತ್ಸವ ಮೂರ್ತಿಯೊಂದಿಗೆ ಶ್ರೀನಿವಾಸ ಕಲ್ಯಾಣೋತ್ಸವ ನಡೆಯಲಿದೆ. ಈ ಶ್ರೇಷ್ಠ ಧಾರ್ಮಿಕ ಕಾರ್ಯಕ್ರಮದಿಂದ ಭಕ್ತರಿಗೆ ವಿಶೇಷ ಅನುಗ್ರಹ ಮಾಡಲಿ ಎಂದರು.ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ಸನಾತನ ಧರ್ಮ ಪರಂಪರೆಯ ಕಲ್ಯಾಣಕ್ಕಾಗಿ ನಡೆಯುವ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ಎಲ್ಲಾ ಹಿಂದೂ ಬಂಧುಗಳ ಸಹಕಾರ ಬೇಕಾಗಿದೆ ಎಂದು ಹೇಳಿದರು.ಈ ಸಂದರ್ಭ ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಗೌರವಾಧ್ಯಕ್ಷ ಬೂಡಿಯಾರು ರಾಧಾಕೃಷ್ಣ ರೈ, ಗೋಪಾಲಕೃಷ್ಣ ಭಟ್ ದ್ವಾರಕ, ಚಂದಪ್ಪ ಮೂಲ್ಯ, ಪುತ್ತಿಲ ಪರಿವಾರ ಸೇವಾ ಟ್ರಸ್ಟ್ನ ಅಧ್ಯಕ್ಷ ಮಹೇಂದ್ರವರ್ಮ ಬಜತ್ತೂರು, ಸ್ವಾಗತ ಸಮಿತಿ ಸಂಚಾಲಕ ಪ್ರಸನ್ನ ಕುಮಾರ್ ಮಾರ್ತ, ಕಾರ್ಯಧ್ಯಕ್ಷ ಉಮೇಶ್ ಕೋಡಿಬೈಲು, ಪ್ರಧಾನ ಕಾರ್ಯದರ್ಶಿ ರವಿಕುಮಾರ್ ರೈ ಕೆದಂಬಾಡಿಮಠ, ಕೋಶಾಧಿಕಾರಿ ಉದಯಕುಮಾರ್ ರೈ, ಕಾರ್ಯದರ್ಶಿಗಳಾದ ಗಣೇಶ್ ಭಟ್ ಮಕರಂದ, ಅನಿಲ್ ತೆಂಕಿಲ, ಪ್ರವೀಣ್ ಶೆಟ್ಟಿ ತಿಂಗಳಾಡಿ ಮತ್ತಿತರರು ಉಪಸ್ಥಿತರಿದ್ದರು.