ಪುತ್ತೂರು ಬೆಂಗಳೂರು-ಮಂಗಳೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಾಯೋಗಿಕ ಸಂಚಾರದ ವೇಳೆ ಹಾಗೂ ಬಳಿಕ ವಾಣಿಜ್ಯ ಸಂಚಾರ ಆರಂಭವಾದಾಗ ನಿಯಮಿತ ನಿಲುಗಡೆ ಕಲ್ಪಿಸುವಂತೆ ಹಿರಿಯ ವಕೀಲ ಡಾ. ಅರುಣಾ ಶ್ಯಾಮ್. ಎಂ. ರೈಲ್ವೆ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ.

ಪುತ್ತೂರು : ಪುತ್ತೂರು ಬೆಂಗಳೂರು-ಮಂಗಳೂರು ನಡುವೆ ಸಂಚರಿಸಲಿರುವ ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪುತ್ತೂರು ರೈಲು ನಿಲ್ದಾಣದಲ್ಲಿ ಪ್ರಾಯೋಗಿಕ ಸಂಚಾರದ ವೇಳೆ ಹಾಗೂ ಬಳಿಕ ವಾಣಿಜ್ಯ ಸಂಚಾರ ಆರಂಭವಾದಾಗ ನಿಯಮಿತ ನಿಲುಗಡೆ ಕಲ್ಪಿಸುವಂತೆ ಹಿರಿಯ ವಕೀಲ ಡಾ. ಅರುಣಾ ಶ್ಯಾಮ್. ಎಂ. ರೈಲ್ವೆ ಮಂಡಳಿಗೆ ಮನವಿ ಸಲ್ಲಿಸಿದ್ದಾರೆ.ರೈಲ್ವೆ ಮಂಡಳಿ ನಿರ್ದೇಶನದಂತೆ ಯಶವಂತಪುರ-ಮಂಗಳೂರು ಸೆಂಟ್ರಲ್ ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಮತ್ತೊಂದು ಪ್ರಾಯೋಗಿಕ ಸಂಚಾರ ನಿಗದಿಯಾಗಿದೆ. ಬೆಂಗಳೂರು ಮತ್ತು ಕರಾವಳಿ ಕರ್ನಾಟಕದ ನಡುವಿನ ವೇಗದ ರೈಲು ಸಂಪರ್ಕವನ್ನು ಮತ್ತಷ್ಟು ಬಲಪಡಿಸುವ ಈ ಸೇವೆ ಸ್ವಾಗತಾರ್ಹವಾಗಿದೆ ಎಂದರು.ಪ್ರಮುಖ ಕೇಂದ್ರ ಪುತ್ತೂರು: ಪುತ್ತೂರು ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ವಾಣಿಜ್ಯ, ಶೈಕ್ಷಣಿಕ ಹಾಗೂ ಆಡಳಿತ ಕೇಂದ್ರವಾಗಿದ್ದು, ಪುತ್ತೂರು ಮಾತ್ರವಲ್ಲದೆ ಸುತ್ತಮುತ್ತಲಿನ ಹಲವು ಪ್ರದೇಶಗಳ ಪ್ರಯಾಣಿಕರಿಗೆ ಪ್ರಮುಖ ರೈಲು ಸಂಪರ್ಕ ಕೇಂದ್ರವಾಗಿದೆ. ಹೀಗಾಗಿ ವಂದೇ ಭಾರತ್ ರೈಲಿಗೆ ಪುತ್ತೂರಿನಲ್ಲಿ ನಿಲುಗಡೆ ಕಲ್ಪಿಸುವುದು ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಮನವಿಯಲ್ಲಿ ಹೇಳಿದ್ದಾರೆ.