ನಾಳೆ ಪುತ್ತೂರು ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ

| Published : Feb 10 2024, 01:48 AM IST

ಸಾರಾಂಶ

ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಅಧ್ಯಕ್ಷತೆ ವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಯುವ ಒಕ್ಕಲಿಗ ಗೌಡರ ತಾಲೂಕು ಮಟ್ಟದ ಯುವ ಕ್ರೀಡಾ ಸಂಭ್ರಮ-೨೦೨೪ ಫೆ.೧೧ರಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಯುವ ಒಕ್ಕಲಿಗ ಗೌಡ ಸೇವಾ ಸಂಘದ ಕ್ರೀಡಾ ಸಂಯೋಜಕ ಮಾಧವ ಗೌಡ ಪೆರಿಯತ್ತೋಡಿ ತಿಳಿಸಿದ್ದಾರೆ. ಅವರು ಶುಕ್ರವಾರ ಪುತ್ತೂರು ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಂದು ಬೆಳಗ್ಗೆ ೭.೩೦ಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಿಂದ ವಿವೇಕಾನಂದ ಶಾಲಾ ಕ್ರೀಡಾಂಗಣದ ತನಕ ಕ್ರೀಡಾಜ್ಯೋತಿ ಜಾಥಾ ನಡೆಯಲಿದ್ದು, ಪ್ರಗತಿಪರ ಕೃಷಿಕರಾದ ಯಶೋಧ ಮೋನಪ್ಪ ಗೌಡ ತೆಂಕಪ್ಪಾಡಿ ಜಾಥಾ ಉದ್ಘಾಟಿಸಲಿದ್ದಾರೆ. ಪಡ್ನೂರಿನ ಊರ ಗೌಡರಾಗಿರುವ ಸಂಕಪ್ಪ ಗೌಡ ಕುಂಬಾಡಿ ಕ್ರೀಡಾಕೂಟಕ್ಕೆ ಚಾಲನೆ ನೀಡುವರು ಎಂದರು. ಬಳಿಕ ೧೧ ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಡಾ. ಶ್ರೀ ಧರ್ಮಪಾಲನಾಥ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ರವಿ ಮುಂಗ್ಲಿಮನೆ ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಮಡಿಕೇರಿ ಶಾಸಕ ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ, ಚಿಕ್ಕಮಗಳೂರು ಮಾಜಿ ಶಾಸಕ ಸಿ.ಟಿ. ರವಿ ಉಪಸ್ಥಿತರಿರುವರು. ಒಕ್ಕಲಿಗ ಗೌಡ ಸೇವಾ ಸಂಘದ ಸಲಹಾ ಸಮಿತಿ ಅಧ್ಯಕ್ಷ ಮೋಹನ್ ಗೌಡ ಇಡ್ಯಡ್ಕ ಧ್ವಜಾರೋಹಣ ಮಾಡಲಿದ್ದಾರೆ. ಪಿ. ಕೇಶವ ಗೌಡ ಅಮೈ ಕಲಾಯಿಗುತ್ತು ವೇದಿಕೆಯ ಉದ್ಘಾಟನೆ ಮಾಡಲಿದ್ದಾರೆ. ಮಾಜಿ ಶಾಸಕ ಒಕ್ಕಲಿಗ ಗೌಡ ಸೇವಾ ಸಂಘದ ಗೌರವ ಸಲಹೆಗಾರ ಸಂಜೀವ ಮಠಂದೂರು ದೀಪ ಪ್ರಜ್ವಲನೆ ಮಾಡಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಶ್ರೀ ಮಹಾಲಿಂಗೇಶ್ವರ ಐಟಿಐ ಸಂಚಾಲಕ ಯು.ಪಿ.ರಾಮಕೃಷ್ಣ ಗೌಡ, ಲೋಕೋಪಯೋಗಿ ಸುಬ್ರಹ್ಮಣ್ಯ ವಿಭಾಗದ ಸಹಾಯಕ ಎಜಿನಿಯರ್ ಪ್ರಮೋದ್ ಕುಮಾರ್ ಕೆ.ಕೆ., ಉದ್ಯಮಿ ರಾಧಾಕೃಷ್ಣ ಗೌಡ ಇಟ್ಟಿಗುಂಡಿ, ಉದ್ಯಮಿ ಮಂಜುನಾಥ ಗೌಡ ತೆಂಕಿಲ, ಶೇಖರ್ ಗೌಡ ಬನ್ನೂರು, ಸುಂದರ ಗೌಡ, ಮಹಿಳಾ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷೆ ವಾರಿಜ ಕೆ., ಒಕ್ಕಲಿಗ ಸ್ವ ಸಹಾಯ ಟ್ರಸ್ಟ್ ಅಧ್ಯಕ್ಷ ಮನೋಹರ್ ಡಿ.ವಿ. ಸಹಿತ ಅನೇಕ ಮಂದಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಯುವ ಒಕ್ಕಲಿಗ ಗೌಡ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿ ಆನಂದ ಗೌಡ ತೆಂಕಿಲ, ಕ್ರೀಡಾ ಕಾರ್ಯದರ್ಶಿ ಪವನ್ ಗೌಡ ದೊಡ್ಡಮನೆ, ಬನ್ನೂರು ವಲಯದ ಅಧ್ಯಕ್ಷ ಮೋಹನ್ ಕಬಕ, ಸಂಘಟನಾ ಕಾರ್ಯದರ್ಶಿ ವಸಂತ ನೆಕ್ರಾಜೆ ಇದ್ದರು.