ಪುತ್ತೂರು: ಹನುಮಗಿರಿ ಶ್ರೀ ಕೋದಂಡರಾಮ, ಪಂಚಮುಖಿ ಆಂಜನೇಯ ಕ್ಷೇತ್ರದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವು ಏ.೯ರಿಂದ ೧೨ರವರೆಗೆ ನಡೆಯಲಿದ್ದು, ಬುಧವಾರ ಇತಿಹಾಸ ಪ್ರಸಿದ್ಧ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ವಠಾರದಿಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಶ್ರೀ ಮಹಾಲಿಂಗೇಶ್ವರ ದೇವರ ನಡೆಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೇವಸ್ಥಾನದ ವಠಾರದಲ್ಲಿ ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಅವರು ತೆಂಗಿನಕಾಯಿ ಒಡೆಯುವ ಮೂಲಕ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.
ಬಳಿಕ ನೂರಾರು ವಾಹನಗಳಲ್ಲಿ ತುಂಬಿದ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಿತು. ದರ್ಬೆಯ ತನಕ ಕಾಲ್ನಡಿಗೆಯಲ್ಲಿ ಮೆರವಣಿಗೆ ಸಾಗಿತು. ಆ ಬಳಿಕ ಅಲ್ಲಿಂದ ವಾಹನಗಳ ಮೂಲಕ ಹನುಮಗಿರಿಗೆ ಸಾಗಿತು. ಶ್ರೀರಾಮ-ಸೀತಾದೇವಿ-ಹನುಮ ವೇಷಧಾರಿಗಳ ವಾಹನ, ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗ, ವಾದ್ಯ, ಚೆಂಡೆ ಮೇಳ, ಕಳಶ ಹಿಡಿದ ಮಹಿಳೆಯರು. ಕುಣಿತ ಭಜನೆ ತಂಡ ವಿಶೇಷವಾಗಿ ಮೆರವಣಿಗೆಗೆ ಸಾಥ್ ನೀಡಿದರು.ಹನುಮಗಿರಿ ಕ್ಷೇತ್ರದ ಆಡಳಿತ ಧರ್ಮದರ್ಶಿ ನನ್ಯ ಅಚ್ಯುತ ಮೂಡೆತ್ತಾಯ, ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಹೊರೆಕಾಣಿಕೆ ಸಮಿತಿ ಸಂಚಾಲಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಜೀವಂಧರ್ ಜೈನ್, ರಾಕೇಶ್ ರೈ ಕೆಡೆಂಜಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷರಾದ ಬೂಡಿಯಾರು ರಾಧಾಕೃಷ್ಣ ರೈ, ಸಾಜ ರಾಧಾಕೃಷ್ಣ ಆಳ್ವ, ಮುರಳೀಕೃಷ್ಣ ಹಸಂತಡ್ಕ, ಪ್ರಧಾನ ಕಾರ್ಯದರ್ಶಿಗಳಾದ ಆರ್.ಸಿ. ನಾರಾಯಣ ರೆಂಜ, ನಹುಷ ಪಿ.ವಿ. , ಕೋಟಿ ಶ್ರೀರಾಮತಾರಕ ಜಪಯಜ್ಞ ಸಮಿತಿ ಸಂಚಾಲಕ ಸೀತಾರಾಮ ರೈ ಕೆದಂಬಾಡಿಗುತ್ತು, ಪ್ರಮುಖರಾದ ಮಾಜಿ ಶಾಸಕ ಸಂಜೀವ ಮಠಂದೂರು, ಡಾ. ಸುರೇಶ ಪುತ್ತೂರಾಯ, ಧ.ಗ್ರಾ.ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ್, ತಾಲೂಕು ಯೋಜನಾಧಿಕಾರಿ ಶಶಿಧರ್, ಅರುಣ್ ಕುಮಾರ್ ಪುತ್ತಿಲ, ಅಜಿತ್ ರೈ ಹೊಸಮನೆ, ಗೋಪಾಲಕೃಷ್ಣ ಹೇರಳೆ, ಶ್ರೀಧರ ಪಟ್ಲ, ಯು. ಲೋಕೇಶ್ ಹೆಗ್ಡೆ, ದಿನೇಶ್ ಮೆದು, ವಿದ್ಯಾ ಗೌರಿ, ಪದ್ಮನಾಭ ಶೆಟ್ರಟಿ, ಸುಂದರ ಪೂಜಾರಿ ಬಡಾವು, ಉಜ್ವಲ್ ಪ್ರಭು, ಸುಂದರ ಪೂಜಾರಿ ಬಡಾವು, ನವೀನ್ ರೈ ಕೈಕಾರ ಸೇರಿದಂತೆ ನೂರಾರು ಮಂದಿ ಮೆರವಣಿಗೆಯಲ್ಲಿ ಸಾಗಿದರು. ರಾಜೇಶ್ ಬನ್ನೂರು ಕಾರ್ಯಕ್ರಮ ನಿರ್ವಹಿಸಿದರು.
ಇದಕ್ಕೂ ಮೊದಲು ಬೆಳಗ್ಗೆ ಈಶ್ವರಮಂಗಲ ಗ್ರಾಮಸ್ಥರ ಹೊರೆಕಾಣಿಕೆ ಸಮರ್ಪಣೆ ಕ್ಷೇತ್ರಕ್ಕೆ ನಡೆಯಿತು. ಬಳಿಕ ಕ್ಷೇತ್ರದಲ್ಲಿ ಉಗ್ರಾಣ ಮುಹೂರ್ತ ನಡೆಯಿತು. ಭಜನ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಯಿತು.