ಪುತ್ತೂರು: ಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಗುರುವಾರ ಆಸ್ಪತ್ರೆಯ ವೈದ್ಯಾಧಿಕಾರಿ ಯದುರಾಜ್ ಡಿ.ಕೆ. ಅಧ್ಯಕ್ಷತೆಯಲ್ಲಿ ಮಾನಸಿಕ ಹಾಗೂ ಬೌದ್ಧಿಕ ಮನೋರೋಗ ವಿಶೇಷ ಚೇತನರ ಪ್ರಮಾಣಪತ್ರ ಶಿಬಿರ ನಡೆಯಿತು. ದ.ಕ. ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿ, ದ.ಕ. ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಧಿಕಾರಿಗಳ ಕಚೇರಿ ಹಾಗೂ ದ.ಕ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳ ಕಚೇರಿ, ಪುತ್ತೂರು ತಾಲೂಕು ಅರೋಗ್ಯಾಧಿಕಾರಿಗಳ ಕಚೇರಿ, ಪುತ್ತೂರು ಸರಕಾರಿ ಆಸ್ಪತ್ರೆಯ ಸಹಯೋಗದಲ್ಲಿ ನಡೆದ ಈ ಶಿಬಿರದಲ್ಲಿ ಮಾನಸಿಕ ಹಾಗೂ ಬೌದ್ಧಿಕ ಮನೋರೋಗ ವಿಶೇಷ ಚೇತನರ ಪ್ರಮಾಣಪತ್ರ ವಿತರಿಸಲಾಯಿತು.
ಶಿಬಿರದಲ್ಲಿ ದ.ಕ. ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದ ಮಾನಸಿಕ ತಜ್ಞ ಡಾಕ್ಟರ್ ಸ್ವಾತಿಕ್ ರಾವ್ ಮಾನಸಿಕ ಅರೋಗ್ಯ ಕಾರ್ಯಕ್ರಮದ ಮಾನಸಿಕ ಆರೋಗ್ಯ ವಿಭಾಗದ ಕ್ಲಿನಿಕಲ್ ಸೈಕಾಲಜಿಸ್ಟ್ ಜಯಶ್ರೀ ಹಾಗೂ ಕೆಎಂಸಿ ಆಸ್ಪತ್ರೆ ಮಂಗಳೂರಿನ ಮಾನಸಿಕ ವಿಭಾಗದ ಕ್ಲಿನಿಕಲ್ ಸೈಕಾಲಜಿಸ್ಟ್ ರೇಷ್ಮಾ ಹಾಗೂ ಮಾನಸಿಕ ಆರೋಗ್ಯ ವಿಭಾಗದ ಸಿಬ್ಬಂದಿ ಹಾಗೂ ಪುತ್ತೂರು ಸರಕಾರಿ ಆಸ್ಪತ್ರೆಯ ನರ್ಸ್ ಸಿಬ್ಬಂದಿ ಹಾಗೂ ಪುತ್ತೂರು ತಾಪಂನ ವಿಶೇಷಚೇತನರ ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತ ನವೀನ್ ಕುಮಾರ್, ಪುತ್ತೂರು ಹಾಗೂ ಕಡಬ ತಾಲೂಕಿನ ವಿಕಲಚೇತನರ ಇಲಾಖೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ಪುತ್ತೂರು ಹಾಗೂ ಕಡಬ ತಾಲೂಕಿನ ೨೫ ಮಂದಿ ಬೌದ್ಧಿಕ ಹಾಗೂ ಮಾನಸಿಕ ಮನೋರೋಗ ವಿಕಲಚೇತನರ ವ್ಯಕ್ತಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.